ಬೆಳಗಾವಿ : ಉತ್ತರ ಕರ್ನಾಟದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಈ ಭಾಗದ ಜನರಿಗೆ ಶಕ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿರುವ ಹಲಗಾ-ಬಸ್ತವಾಡ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುವರ್ಣ ವಿಧಾನಸೌಧವನ್ನು ಸರ್ಕಾರ ನಿರ್ಮಾಣ ಮಾಡಿತ್ತು. ಈ ಸುವರ್ಣಸೌಧಕ್ಕೆ ಇಂದು 12 ವರ್ಷಗಳ ಸಂಭ್ರಮಾಚರಣೆ. 2012ರ ಅಕ್ಟೋಬರ್ 11 ರಂದು 438 ಕೋಟಿ ರೂ. ವೆಚ್ಚದಲ್ಲಿ ಸರ್ಕಾರ ಯಾವೆಲ್ಲಾ ಉದ್ದೇಶಗಳನ್ನಿಟ್ಟುಕೊಂಡು ಸುವರ್ಣಸೌಧವನ್ನು ನಿರ್ಮಾಣ ಮಾಡಿತ್ತೋ, ಆ ಉದ್ದೇಶಗಳನ್ನು …
Read More »ಕಾಮಗಾರಿಯ ಬಿಲ್ ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ
ಬೆಳಗಾವಿ: ಕಾಮಗಾರಿಯ ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Read More »ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ
ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ …
Read More »‘ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ಬಿಗ್ ಬಾಸ್ಗೆ ಹೋಗಿದ್ದೆ’: ಶಾಸಕ ಪ್ರದೀಪ್ ಈಶ್ವರ್
ಕನ್ನಡ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಟ್ಟು ಬಂದಿರುವ ಶಾಸಕ ಪ್ರದೀಪ್ ಈಶ್ವರ್, ದೊಡ್ಮನೆಗೆ ಹೋದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುನಿರೀಕ್ಷಿತ ಕನ್ನಡ ಬಿಗ್ ಬಾಸ್ ಸೀಸನ್ 10 ಪಾರಂಭಗೊಂಡಿದೆ. ಜನಪ್ರಿಯ ರಿಯಾಲಿಟಿ ಶೋ ಆರಂಭದಲ್ಲೇ ಸದ್ದು ಮಾಡುತ್ತಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ಅಷ್ಟಕ್ಕೂ ಒಂದು ದಿನದ ಮಟ್ಟಿಗೆ ಬಿಗ್ ಬಾಸ್ ಮನೆಗೆ ಹೋಗಿದ್ದ ಕಾರಣವೇನು? ಎಂಬುದರ ಬಗ್ಗೆ ಸ್ವತಃ …
Read More »ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …
Read More »ಮೈಸೂರು ದಸರಾ: 10 ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು- ಸಂಪೂರ್ಣ ವಿವರ..
ಮೈಸೂರು : ಈ ಬಾರಿಯ ಸಾಂಪ್ರದಾಯಿಕ ದಸರಾದಲ್ಲಿ 10 ಕಡೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯವಾಗಿ, ಅಂಬಾವಿಲಾಸ ಅರಮನೆಯ ಮುಂಭಾಗದ ಸಾಂಸ್ಕೃತಿಕ ವೇದಿಕೆ ಸೇರಿದಂತೆ ನಗರದ ಇತರ 9 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಏರ್ಪಾಡಾಗಿವೆ. ಸುಗಮ ಹಾಗೂ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಇತರೆ ಪ್ರಕಾರಗಳ ನೃತ್ಯ, ನಾಟಕ, ಜಾನಪದ, ನಿರೂಪಣೆ, ಜಾದು, ಹರಿಕಥೆ, ಭಕ್ತಿ ಗೀತೆಗಳು, ತತ್ವಪದಗಳು, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. …
Read More »ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ಆರೋಪಿ ಗುರುತು ಪತ್ತೆ ಹಚ್ಚಿದ ಬೆಳಗಾವಿ ಪೊಲೀಸರು
ಬೆಳಗಾವಿ : ಜಿಲ್ಲೆಯಲ್ಲಿರುವ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಹಾಗೂ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸೀಮ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ …
Read More »ಅಣ್ಣ ತಂಗಿ ಸಂಬಂಧ ತಪ್ಪಾಗಿ ಅರ್ಥೈಸಿಕೊಂಡ ಪತಿ.. ಜೋಡಿ ಕೊಲೆ, ತಂದೆ ಮಗ ಬಂಧನ
ದಾವಣಗೆರೆ/ವಿಜಯನಗರ: ಅಣ್ಣ ತಂಗಿಯ ಸಂಬಂಧವನ್ನು ಪತಿ ತಪ್ಪಾಗಿ ತಿಳಿದು ಇಬ್ಬರನ್ನು ಕೊಲೆ ಮಾಡಿದ್ದಾನೆ. ಈ ಜೋಡಿ ಕೊಲೆಗೆ ಆರೋಪಿ ತಂದೆಯೂ ಸಾಥ್ ನೀಡಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ಕೊಲೆ ಮಾಡಿದ ಬಳಿಕ ಅಣ್ಣ ತಂಗಿ ಇಬ್ಬರು ವಿಷ ಕುಡಿದು ಸಾವನ್ನಪ್ಪಿದ್ದಾರೆ ಎಂದು ತಂದೆ ಮಗ ಇಬ್ಬರು ಕಥೆ ಕಟ್ಟಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಎಂಟ್ರಿ ಬಳಿಕ ಸತ್ಯಾಸತ್ಯತೆ ಹೊರ ಬಿದ್ದಿದೆ. ಏನಿದು ಪ್ರಕರಣ: ದಾವಣಗೆರೆ ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ …
Read More »ಮೊದಲನೇ ಮಹಡಿಯಿಂದ ಬಿದ್ದು ಮಗು ಗಂಭೀರ ಗಾಯ
ಕೊಪ್ಪಳ: ಆಟವಾಡುತಿದ್ದ 3.5 ವರ್ಷದ ಮಗು ಮನೆಯ ಮೊದಲನೇ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಷ್ಟಗಿ ಪಟ್ಟಣದ ಗೌರಿ ನಗರದ ಮಹಡಿ ಮನೆಯೊಂದರಲ್ಲಿ ಶನಿವಾರ (7/10/2023) ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪಟ್ಟಣದ ದುರ್ಗಾ ಕಾಲೋನಿಯ ನಿವಾಸಿ ಸಂಗೀತ ಕಲಾವಿದ ಹೊಳಿಯಪ್ಪ ಗುರಿಕಾರ ಅವರು, ತಮ್ಮ ಮಗಳು ಸೇರಿದಂತೆ ಕುಟುಂಬ ಸಮೇತ ಗೌರಿ ನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಸೀರೆ …
Read More »ಶಾಹು ನಗರ ವಂದನ ಕೊಲೊನಿಯಲ್ಲಿ ಎಲ್ಲಿ ನೋಡಿದರಲ್ಲಿ ಗಬ್ಬೆದ್ದು ನಾರುತ್ತಿರುವ ಕೊಳಚೆಗಳು ರಸ್ತೆ ಪಕ್ಕದ ಮೇಲೆ ಪ್ಲಾಸ್ಟಿಕ್ ತ್ಯಾಜ್ಯಗಳು
ಬೆಳಗಾವಿಯನ್ನು ಎರಡನೇ ರಾಜಧಾನಿ ಸ್ಮಾರ್ಟ ಸಿಟಿ ಕುಂದಾನಗರಿ ಹಂಗೆ ಹಿಂಗೇ ಅಂತಾ ವರ್ಣಿಸುತ್ತಾರೆ ಆದರೆ ನಗರದಲ್ಲಿ ಕೆಲವೊಂದಿಷ್ಟು ಬೇಜವಾಬ್ದಾರಿ ಇಲಾಖೆ ಬೇಜವಾಬ್ದಾರಿ ಅಧಿಕಾರಿಗಳು ಬೆಳಗಾವಿಯನ್ನು ಸ್ವಚ್ಛವಾಗಿಡಲು ಸಹಕರಿಸುತ್ತಿಲ್ಲ ಬೆಳಗಾವಿ ಎಲ್ಲಾ ರಂಗದಲ್ಲೂ ತನ್ನ ಪ್ರಾಮುಖ್ಯತೆಯನ್ನು ಪಡೆದಿದೆ ವೀರ ರಾಣಿ ಕಿತ್ತೂರು ಚನ್ನಮ್ಮಾ ಸಂಗೊಳ್ಳಿ ರಾಯಣ್ಣ ರಂತಹ ದೇಶಭಕ್ತರ ಹುಟ್ಟಿದ ನಾಡಿದು ಬೆಳಗಾವಿ ರಾಜಕಾರಣ ಇಡೀ ರಾಜ್ಯಕ್ಕೆ ಒಂತರಾ ಡಿಫರೆಂಟ್ ಸರ್ಕಾರವನ್ನು ಕಟ್ಟುವುದರ ಜೊತೆಗೆ ಕೆಡುವುದರಲ್ಲಿ ನೈಪುಣ್ಯ ಹೊಂದಿದೆ ಎರಡೆರೆಡು ಸಚಿವರನ್ನು …
Read More »
Laxmi News 24×7