Breaking News

ರಾಷ್ಟ್ರೀಯ

ಜನತಾ ದರ್ಶನಕ್ಕೆ ಉತ್ತಮ‌ ಸ್ಪಂದನೆ: ಒಟ್ಟು 6,684 ಅಹವಾಲು, ಮನವಿ ಸ್ವೀಕಾರ.. 6,663 ಅರ್ಜಿ ವಿಲೇವಾರಿ ಬಾಕಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.   ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ಸಂಜೆ 6:30 ರ ವೇಳೆಗೆ ಲಭ್ಯವಿದ್ದ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, …

Read More »

ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಉರುಳುವ ಹಂತದಲ್ಲಿರುವ ಬೃಹತ್ ಮರಗಳು : ತೆರವುಗೊಳಿಸಲು ಸಾರ್ವಜನಿಕರ ಒತ್ತಾಯ

ಬೆಳಗಾವಿ : ನಗರ ವ್ಯಾಪ್ತಿಯಲ್ಲಿ ಹಲವು ಬೃಹತ್​ ಮರಗಳು ಉರುಳುವ ಹಂತ ತಲುಪಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿಂದೆ ಬಿರುಗಾಳಿ ಸಹಿತ ಭಾರಿ ಮಳೆಗೆ ನಗರ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಉರುಳಿ ಜೀವಹಾನಿ ಸಂಭವಿಸಿತ್ತು. ಆದರೂ ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ 2022ರ ಸೆಪ್ಟೆಂಬರ್​ನಲ್ಲಿ ಬೆಳಗಾವಿ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್ 13ರಂದು …

Read More »

ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಜನತಾ ದರ್ಶನ… :ಸತೀಶ್ ಜಾರಕಿಹೊಳಿ

ಮಂಗಳವಾರ ಬೆಳಗಾವಿಯಲ್ಲಿ ಜನತಾ ದರ್ಶನ…ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿ ಪರಿಹರಿಸಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಅವರು ಮಂಗಳವಾರ(ಸೆ.26) ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ “ಜನತಾ ದರ್ಶನ” ನಡೆಸಲಿದ್ದಾರೆ.

Read More »

ಗೌರವಯುತ ಜೀವನ ನಡೆಸಲು ನೆರವಿಗೆ ಬಾರದ ಪದಕ; ತಿನ್ನಲು ಕೂಳಿಲ್ಲದಿದ್ದರೂ ಕುಂದದ ಕುಸ್ತಿ ಪ್ರೇಮ; ಪೈಲ್ವಾನ್ ಗೆ ಬೇಕಿದೆ ಸಹಾಯ ಹಸ್ತ!

ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಬಾಗಲಕೋಟೆ: ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಇದು ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ಅಪ್ಪಾಸಿ ತೇರದಾಳ ಅವರ ಕಥೆ. 42 ವರ್ಷದ ಅಪ್ಪಾಸಿ ರಾಜ್ಯ, ರಾಷ್ಟ್ರಮಟ್ಟದ ಕುಸ್ತಿ …

Read More »

ಕಾವೇರಿ ನೆಪದಲ್ಲಿ ಬಿಜೆಪಿ – ಜೆಡಿಎಸ್‌ನಿಂದ ರಾಜಕೀಯ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ (Cauvery water dispute) ಬಿಜೆಪಿ ಮತ್ತು ಜೆಡಿಎಸ್ (BJP and JDS) ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ (ಸೆಪ್ಟೆಂಬರ್‌ 25) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವಪಕ್ಷ ಸಭೆಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಪ್ರಶ್ನಿಸಿದರು. ಪ್ರತಿಭಟನೆಗೆ ಅವಕಾಶವಿದೆ ಕಾವೇರಿ ನೀರಿನ ಸಂಬಂಧ ಸೆಪ್ಟೆಂಬರ್‌ …

Read More »

ಮುಖ್ಯಮಂತ್ರಿ ಚಂದ್ರು ಅವರಿಂದ ಸರ್ಕಾರಕ್ಕೆ ಐದು ಒತ್ತಾಯ

ತಮಿಳುನಾಡಿಗೆ  ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹೀಗಾಗಿ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸುಪ್ರೀಂ ಆದೇಶ ಹೊರ ಬಿದ್ದ ದಿನದಿಂದ ಪ್ರತಿ ದಿನ ರಸ್ತೆಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಗುತ್ತಿದೆ. ರಾಜ್ಯದ ಪ್ರಸಕ್ತ ವಿದ್ಯಮಾನದ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.ಮುಂಗಾರು ಮಳೆ ಕೈ ಕೊಟ್ಟು ಸರಿಯಾದ ಸಮಯಕ್ಕೆ ಮಳೆ ಆಗದೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಇದರ ನಡುವೆ ತಮಿಳು ನಾಡಿಗೆ ಪ್ರತಿ …

Read More »

ಚುನಾವಣೆ ವೇಳೆ ಕುಕ್ಕರ್ ಹಂಚಿಕೆ ಕುರಿತ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪೊಲೀಸರಿಗೆ ದೂರು

ಮೈಸೂರು: ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಸಂಬಂಧ ಮಾಜಿ ಶಾಸಕ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತಿಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕ ಹಾಗೂ ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವರುಣ ವಿಧಾನಸಭಾ ಕ್ಷೇತ್ರದ …

Read More »

ಭದ್ರಾ ನೀರಿಗಾಗಿ ದಾವಣಗೆರೆ ಬಂದ್‌;

ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್‌ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. 100 ದಿನಗಳ ಕಾಲ ನಿರಂತರವಾಗಿ ಭದ್ರಾ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ಬಿಜೆಪಿ ಜಿಲ್ಲಾ ಘಟಕ ಬೆಂಬಲ ನೀಡಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣವೇ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದಾರೆ. …

Read More »

ಸೆ.26 ರಂದು ಶಾಂತಿಯುತವಾಗಿ ಬೆಂಗಳೂರು ಬಂದ್

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಾಂತಿಯುತವಾಗಿ ಬಂದ್‌ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.   ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್‌ ವಿಚಾರವಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ …

Read More »

ನಾಳೆ ಭಾರತಕ್ಕೆ ಚಿನ್ನದ ಕನಸು.. ವನಿತೆಯರ ಕ್ರಿಕೆಟ್​ ತಂಡ ಲಂಕಾ ಮಣಿಸಿ ಗೆಲ್ಲುತ್ತಾ ಸ್ವರ್ಣ ಪದಕ?

ಹ್ಯಾಂಗ್‌ಝೌ (ಚೀನಾ): ಮೊದಲ ಬಾರಿಗೆ ಏಷ್ಯನ್​ ಗೇಮ್ಸ್​ನಲ್ಲಿ ಭಾರತ ತಂಡ ಆಡುತ್ತಿದೆ. ಈಗಾಗಲೇ ಭಾರತೀಯ ವನಿತೆಯರ ತಂಡ ಬಾಂಗ್ಲಾದೇಶವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದೆ. ಎರಡನೇ ಸೆಮಿ ಫೈನಲ್​ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಿದ್ದವು. ಇದರಲ್ಲಿ ಪಾಕಿಸ್ತಾವನ್ನು ಮಣಿಸಿದ ಸಿಂಹಳದ ವನಿತಿಯರು ಅಂತಿಮ ಹಣಾಹಣಿಗೆ ಸಿದ್ಧರಾಗಿದ್ದಾರೆ. ನಾಳೆ ಚಿನ್ನಕ್ಕಾಗಿ ಭಾರತ ಮತ್ತು ಲಂಕಾ ನಡುವೆ ಪೈಪೋಟಿ ನಡೆಯಲಿದೆ. ಇಂದು ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 51 ರನ್​ಗೆ …

Read More »