Breaking News

ರಾಷ್ಟ್ರೀಯ

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಶುಕ್ರವಾರ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಯಿತು ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಕೊಡಗನ್ನವರ ಮಾತುನಾಡಿ, ರಾಜ್ಯದಲ್ಲಿ ಈ ವರ್ಷ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ …

Read More »

ಆಸ್ಟ್ರೇಲಿಯಾ ವಿರುದ್ಧ ಟಾಸ್​ ಗೆದ್ದ ಭಾರತ ಬೌಲಿಂಗ್; ಅಯ್ಯರ್​, ಸೂರ್ಯಗೆ ಪರೀಕ್ಷೆ

ಮೊಹಾಲಿ (ಪಂಜಾಬ್)​: ತವರಿನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಏಕದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಾಸ್​ ಗೆದ್ದ ಭಾರತ ತಂಡ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟ್​ ಮಾಡುವಂತೆ ಆಹ್ವಾನಿಸಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. …

Read More »

ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್‌ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …

Read More »

ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಮೌನಕ್ಕೆ ಶರಣಾಗಿದ್ದಾರೆ.

ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದರೆ, ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಬಂಧಿತೆ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ವೇಳೆ ಮೌನವಾಗಿದ್ದಾರೆ.   ಉದ್ಯಮಿ ಗೋವಿಂದ ಬಾಬು ಪೂಜಾರಿ 5 ಕೋಟಿ ರೂ. ವಂಚನೆ ಆರೋಪದಡಿ ಬಂಧಿತರಾಗಿದ್ದ ಚೈತ್ರಾ, ಮಾಧ್ಯಮಗಳ ಮುಂದೆ ಸ್ವಾಮೀಜಿ ಹಾಲಶ್ರೀ ಬಂಧಿಸಿದರೆ ದೊಡ್ಡವರ ಹೆಸರು ಹೊರಬರಲಿದೆ ಎಂದು …

Read More »

ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನ ಉಗ್ರನ ಹತ್ಯೆ: ದುಷ್ಕರ್ಮಿಗಳ ಗುಂಡೇಟಿಗೆ ಸುಖ್ದೂಲ್ ಸಿಂಗ್ ಬಲಿ

ನವದೆಹಲಿ : ಖಲಿಸ್ತಾನಿ ಉಗ್ರ ಹರ್​ದೀಪ್​ ಸಿಂಗ್​ ನಿಜ್ಜರ್​ ಸಾವಿನ ಕಾರಣ ಕೆನಡಾ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ ಹಳಸಿದ ಬೆನ್ನಲ್ಲೇ ಇನ್ನೊಬ್ಬ ಖಲಿಸ್ತಾನ ಉಗ್ರ ಮತ್ತು ಮೋಸ್ಟ್ ವಾಂಟೆಡ್​ ಗ್ಯಾಂಗ್​ಸ್ಟರ್​ ಸುಖ್ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಎಂಬಾತನ ಹತ್ಯೆ ನಡೆದಿದೆ. ಈಚೆಗೆ ನಡೆದ ಗುಂಡಿನ ದಾಳಿಯಲ್ಲಿ ಈತ ಮೃತಪಟ್ಟಿದ್ದಾನೆ ಎಂದು ತನಿಖಾ ಸಂಸ್ಥೆಗಳು ದೃಢಪಡಿಸಿವೆ. ಕೆನಡಾದ ವಿನ್ನಿಪೆಗ್‌ನಲ್ಲಿ ಸೆಪ್ಟೆಂಬರ್ 18 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಸುಖ್ದೂಲ್ …

Read More »

ಕಾವೇರಿ ಪರ ದನಿ ಎತ್ತಿದ ರಾಘವೇಂದ್ರ ರಾಜ್​​ಕುಮಾರ್

ಬೆಂಗಳೂರು: ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗ ದನಿ ಎತ್ತಿದೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಟ ರಾಘವೇಂದ್ರ ರಾಜ್​​ಕುಮಾರ್, ನನ್ನ ತಂದೆ ಕೆಲ ವಿಚಾರ ಕಲಿಸಿಕೊಟ್ಟು ಹೋಗಿದ್ದಾರೆ. ನಾಡು, ನುಡಿ, ಭಾಷೆ ವಿಚಾರ ಬಂದಾಗ ಜೊತೆಗಿರಬೇಕೆಂದು ಹೇಳಿದ್ದಾರೆ. ಅದಕ್ಕಾಗಿ ಪ್ರಾಣ ಮುಡಿಪಾಗಿಡುತ್ತೇವೆ ಎಂದು ತಿಳಿಸಿದರು. ಹೋರಾಟಕ್ಕೆ ಬರುತ್ತೇವೆ: ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದೆ. ನಮ್ಮ ನಮ್ಮ ಪಾತ್ರ ಬಂದಾಗ ಜನರೇ ನಮ್ಮನ್ನು ಕರೆಸಿಕೊಳ್ಳುತ್ತಾರೆ, ಆಗ ಬರುತ್ತೇವೆ. ಕೊನೆವರೆಗೂ ನಾವು ಜನರ …

Read More »

ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. …

Read More »

ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಪಾಗಲ್ ಪ್ರೇಮಿ

ಕೋಲಾರ: ಪ್ರೀತಿಸಲು ನಿರಾಕರಿಸಿದ ಹಿನ್ನೆಲೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್​ನ ಚಾಂಪಿಯನ್ ರೀಫ್ ನಗರದಲ್ಲಿರುವ ಖಾಸಗಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.   ದ್ವಿತೀಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ಪ್ರೀತಮ್ ಪ್ರಭು ಎಂಬ ಯುವಕ, ಪ್ರಥಮ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದರಂತೆ ಇಂದು ಸಹ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ …

Read More »

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು: ಸಿಡಬ್ಲ್ಯೂಎಂಎ ಆದೇಶ ಮರುಪರಿಶೀಲನೆ ಕೋರಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಜ್ಯ ಸರ್ಕಾರ

ನವದೆಹಲಿ: ನೀರಿನ ತೀವ್ರ ಕೊರತೆ ಇದ್ದರೂ, ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದ್ದು, ಅದನ್ನು ಮರುಪರಿಶೀಲನೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಜೊತೆಗೆ ಇದೊಂದು ವಿಕೃತ ಮತ್ತು ಕಾನೂನುಬಾಹಿರ ಆದೇಶವಾಗಿದೆ ಎಂದೂ ಅಸಮಾಧಾನ ವ್ಯಕ್ತಪಡಿಸಿದೆ. ಮುಂಗಾರು ಮಳೆಯ ಕೊರತೆಯಿಂದಾಗಿ ಅಣೆಕಟ್ಟೆಗಳಲ್ಲಿ ನೀರು ಸಂಗ್ರಹವಾಗಿಲ್ಲ. ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆ ವರುಣನ …

Read More »

ಇದೇ ಮೊದಲು! ಲೋಕಸಭೆ ಚುನಾವಣೆಗೆ ಮತದಾನದ ಅವಕಾಶ ಪಡೆದ 997 ಲೈಂಗಿಕ ಕಾರ್ಯಕರ್ತೆಯರು

ಕಾನ್ಪುರ (ಉತ್ತರ ಪ್ರದೇಶ): ಈ ಬಾರಿ ಲೈಂಗಿಕ ಕಾರ್ಯಕರ್ತೆಯರೂ ಕೂಡ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿದೆ. ಕಾನ್ಪುರ ಜಿಲ್ಲಾಡಳಿತ 997 ಮಂದಿ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದೆ.   ಉತ್ತರ ಪ್ರದೇಶದಲ್ಲಿ ಈವರೆಗೆ, ಮತದಾರರ ಪಟ್ಟಿಗಳು ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಎಂಬ ಮೂರು ವರ್ಗದ ಮತದಾರರನ್ನು ಮಾತ್ರ ಒಳಗೊಂಡಿದ್ದವು. ಆದರೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನೂ ಮತದಾರರ ಪಟ್ಟಿಗೆ …

Read More »