Breaking News

ರಾಷ್ಟ್ರೀಯ

ಹಾಲಿ 107 ಶಾಸಕ, ಸಂಸದರ ಮೇಲಿದೆ ದ್ವೇಷ ಭಾಷಣ ಕೇಸ್​; ಇದರಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಹೆಚ್ಚು-ಎಡಿಆರ್​ ವರದಿ

ನವದೆಹಲಿ: ಕಳೆದ ಕಳೆದ 5 ವರ್ಷಗಳಲ್ಲಿ ವಿವಿಧ ಚುನಾವಣೆಯಲ್ಲಿ ಸ್ಪರ್ಧಿಸಿದ 480 ಅಭ್ಯರ್ಥಿಗಳ ವಿರುದ್ಧ ದ್ವೇಷ ಭಾಷಣದ ಕೇಸ್​ ಹಾಕಲಾಗಿದೆ. ಅದರಲ್ಲಿ ಹಾಲಿ ಇರುವ 107 ಶಾಸಕ, ಸಂಸದರ ಮೇಲೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಪ್ರಚೋದನಕಾರಿ, ದ್ವೇಷ ಭಾಷಣ ಮಾಡಿದ ಪ್ರಕರಣ ಇದೆ. ಜೊತೆಗೆ ಇದರಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಹೆಚ್ಚು ಎಂಬುದು ಗಮನಾರ್ಹ ಅಂಶವಾಗಿದೆ. ಈ ಬಗ್ಗೆ ದೆಹಲಿ ಮೂಲದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR), ನ್ಯಾಷನಲ್​ ಎಲೆಕ್ಷನ್​ ವಾಚ್​ …

Read More »

ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ …

Read More »

ಕುರುಬ ಸಮುದಾಯಕ್ಕೆ 5 ಸಾವಿರ ಕೋಟಿ ಅನುದಾನದ ಗ್ಯಾರಂಟಿ ಕೊಡಿ: ಬಂಡೆಪ್ಪ ಕಾಶಂಪುರ

ಬೆಳಗಾವಿ, ಅ.3: ಕುರುಬ ಸಮುದಾಯಕ್ಕೆ ಐದು ಸಾವಿರ ಕೋಟಿ ಕುರಿಗಾರರಿಗೆ ಅನುದಾನದ ಗ್ಯಾರಂಟಿ ಕೊಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ (Bandeppa Kashempur) ಅವರು ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಸಂಘಟನೆ ವತಿಯಿಂದ ನಡೆದ ಕುರುಬ ಸಮುದಾಯದ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಎರಡು ವರ್ಷದಲ್ಲಿ ಐದರಿಂದ ಹತ್ತು ಪಟ್ಟು ಸರ್ಕಾರಕ್ಕೆ ಕೊಡುವ ಶಕ್ತಿ ನಮ್ಮ ಸಮಾಜಕ್ಕಿದೆ ಎಂದರು. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಕೊಟ್ಟಿದ್ದು ಸ್ವಾಗತ. ಈ ವೇಳೆ ಕುರುಬ …

Read More »

ಕನ್ನಡದ ಬಿಗ್​ ಬಾಸ್​ ಸೀಸನ್​ 10ಕ್ಕೆ ‘ಚಾರ್ಲಿ’ ಶ್ವಾನ ಸೇರಿದಂತೆ 17 ಸ್ಪರ್ಧಿಗಳು ಎಂಟ್ರಿಯಾಗಲಿದ್ದಾರೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ‘ಬಿಗ್​ ಬಾಸ್’​ ಕೂಡ ಒಂದು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಈವರೆಗೆ ಒಂಬತ್ತು ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್​ ಬಾಸ್​ ಇದೀಗ ಮತ್ತೆ ಬಂದಿದೆ. ಬಿಗ್​ ಬಾಸ್​ 10ನೇ ಸೀಸನ್​ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದೆ. ಈ ಹಿಂದಿನ ಎಲ್ಲಾ ಸೀಸನ್​ಗಿಂತ ಈ ಬಾರಿಯ ಬಿಗ್​ ಬಾಸ್​ ಸಂಥಿಂಗ್​ ಸ್ಪೆಷಲ್​ ಆಗಿರಲಿದೆ. ಸದ್ಯ ಪ್ರೋಮೋದಿಂದಲೇ ಕುತೂಹಲ …

Read More »

ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು

ನಾಂದೇಡ್ (ಮಹಾರಾಷ್ಟ್ರ): ಅಕ್ಟೋಬರ್ 1 ರಂದು ನಾಂದೇಡ್‌ನಲ್ಲಿರುವ ಡಾ. ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಮತ್ತೆ ಅಕ್ಟೋಬರ್ 2 ರಂದು ಇದೇ ಆಸ್ಪತ್ರೆಯಲ್ಲಿ 7 ರೋಗಿಗಳು ಮೃತಪಟ್ಟಿದ್ದಾರೆ. ಪ್ರಸ್ತುತ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಂದೇಡ್‌ನ ಡಾ. ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನದಲ್ಲಿ ರೋಗಿಗಳ ಹೆಚ್ಚಳವಾಗಿದೆ. ಆಸ್ಪತ್ರೆಯಲ್ಲಿ 76 ರೋಗಿಗಳ ಸ್ಥಿತಿ ಗಂಭೀರ: ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಪ್ರಸ್ತುತ …

Read More »

ಟಿಳಕವಾಡಿಯ ವೀರಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು

ಬೆಳಗಾವಿ : ಜಗತ್ತಿಗೆ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ಬೋಧಿಸಿದ ಮಹಾತ್ಮ ಗಾಂಧೀಜಿಯವರ ಮಾರ್ಗವೇ ಸರಿಯಾದ ಮಾರ್ಗ. ಭಾರತೀಯರಾದ ನಾವು ಪರಸ್ಪರ ಗೌರವಿಸುವ ಮೂಲಕ ಸದಾ ಭಾರತೀಯರಾಗುವ ಜತೆಗೆ ಗಾಂಧೀಜಿ ಹಾಕಿಕೊಟ್ಟ ಮಾರ್ಗದಲ್ಲಿಯೇ ನಡೆಯಬೇಕು ಎಂದು ಶಾಸಕ ಆಸೀಫ್ ಸೇಠ್ ಕರೆ ಕೊಟ್ಟರು. ಇಂದಿನ ಯುವಪೀಳಿಗೆ ಗಾಂಧೀಜಿ ತತ್ವಗಳನ್ನು ಸ್ವೀಕರಿಸಬೇಕು. ಅವರ ಪುಸ್ತಕಗಳನ್ನು ಓದಿ ವಿಚಾರ, ಚಿಂತನೆಗಳನ್ನು ತಿಳಿದುಕೊಳ್ಳಬೇಕು. ಭವಿಷ್ಯದಲ್ಲಿ ಮಾದರಿ ವ್ಯಕ್ತಿಗಳಾಗಲು ಕಠಿಣ ಶ್ರಮವಹಿಸಿ, ನಿರಂತರ ಅಭ್ಯಾಸ ಮಾಡಿದರೆ …

Read More »

ವಾಣಿಜ್ಯ ಸಿಲಿಂಡರ್​ ಬೆಲೆ 209 ರೂ ಏರಿಕೆ.. ಹೋಟೆಲ್​ ಉದ್ಯಮಿಗಳಿಗೆ ಶಾಕ್​

ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ಹೋಟೆಲ್​ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ. ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ …

Read More »

ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ

ಟೊರೊಂಟೊ : ಖ್ಯಾತ ಲೇಖಕಿ, ಸಮಾಜ ಸೇವಕಿ, ಇನ್ಫೊಸಿಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ನೀಡಿ ಗೌರವಿಸಿದೆ. 50,000 ಡಾಲರ್ ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರತಿ ವರ್ಷ ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪ್ರಮುಖ ಛಾಪು ಮೂಡಿಸಿದ ಭಾರತೀಯರಿಗೆ ನೀಡಲಾಗುತ್ತದೆ. “ಸುಧಾ ಮೂರ್ತಿ ಅವರಿಗೆ ಗ್ಲೋಬಲ್ ಇಂಡಿಯನ್ ಪ್ರಶಸ್ತಿ …

Read More »

ಬಿಎಸ್​ವೈ ಜೈಲಿಗೆ ಹೋಗಲು ಎಚ್ ಡಿ ಕುಮಾರಸ್ವಾಮಿ ಕಾರಣ: ಶಾಸಕ ಸವದಿ

ಚಿಕ್ಕೋಡಿ: ಮಾಜಿ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪ ಮಾಡಿ ದ್ವೇಷ ಸಾಧಿಸಲು ಯಡಿಯೂರಪ್ಪ ಹೋಗಿದ್ದವರು. ಅದೇ ಕುಮಾರಸ್ವಾಮಿ ಅವರು ಬಿಎಸ್​ವೈ ಅವರನ್ನು ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಆದರೆ, ಇವತ್ತು ಅಧಿಕಾರಿಗೋಸ್ಕರ ಇಬ್ಬರು ನಾಯಕರು ಸ್ವಾಭಿಮಾನ ಬದಿಗೆ ಒತ್ತಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, …

Read More »

3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ತಂಬಾಕು ಅಂಗಡಿ ಮೇಲೆ ಪೊಲೀಸರ​ ದಾಳಿ

ಕಡಬ (ದಕ್ಷಿಣಕನ್ನಡ) : ಶಾಲೆ ಬಳಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಕಚೇರಿ ಸ್ಪಂದಿಸಿದೆ. ಈ ಸಂಬಂಧ ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಶಾಲೆಯ ಬಳಿ ಇರುವ ಅಂಗಡಿ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಮತ್ತು ಸಿಗರೇಟ್​ ಮುಂತಾದವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ಇಲ್ಲಿನ …

Read More »