Breaking News

ರಾಷ್ಟ್ರೀಯ

ನಿನ್ನೆ ಕೊಲೆ ಮಾಡಿ ಇಂದು ನೇಣಿಗೆ ಶರಣಾದ ವಾಚಮನ್

ಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಪರಸಪ್ಪ‌, ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ (50) ನೇಣಿಗೆ ಶರಣಾದ ಆರೋಪಿಯಾಗಿದ್ದು, ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪ ಈತನ ಮೇಲಿತ್ತು. ಪೊಲೀಸರು ಈತನನ್ನು ವಶಕ್ಕೆ …

Read More »

ಬಾಂಬ್​ನಂತೆ ಸಿಡಿದ ಜಾರ್ಜಿಂಗ್​ ಇಟ್ಟ ಮೊಬೈಲ್ ಫೋನ್​: ಮನೆಗೆ ಭಾರಿ ಹಾನಿ, ಮೂವರಿಗೆ ತೀವ್ರ ಗಾಯ

(ಮಹಾರಾಷ್ಟ್ರ) : ಮೊಬೈಲ್​ಗಳು ಸ್ಫೋಟಗೊಳ್ಳುತ್ತಿರುವ ವರದಿಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಮಹಾರಾಷ್ಟ್ರದ ನಾಸಿಕ್​ನಲ್ಲೂ ಇಂಥದ್ದೊಂದು ಸುದ್ದಿಯಾಗಿದೆ. ಜಾರ್ಜ್​ ಮಾಡುವ ವೇಳೆ ಮೊಬೈಲ್​ ಬಾಂಬ್​ನಂತೆ ಸಿಡಿದು ಇಡೀ ಮನೆಯನ್ನು ಧ್ವಂಸ ಮಾಡಿದೆ. ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿಟಕಿ, ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಸುತ್ತಮುತ್ತ ಮನೆಗಳಿಗೂ ಹಾನಿಯಾಗಿದೆ. ಮೊಬೈಲ್ ಫೋನ್ ಸ್ಫೋಟದಿಂದಾಗಿ ಇಷ್ಟು ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರ ಪೈಕಿ ಒಬ್ಬರ ಸ್ಥಿತಿ …

Read More »

ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಂಡಿಯಾಕ್ಕೆ ಬಂದ ಬಾಬರ್​ ಪಡೆ..

ಹೈದರಾಬಾದ್: ಏಕದಿನ ವಿಶ್ವಕಪ್​ಗೆ ಭಾರತ ಪ್ರವಾಸಕ್ಕೆ ವೀಸಾ ಸಿಕ್ಕಿಲ್ಲ ಎಂದು ಆರೋಪಿಸಿದ್ದ ಪಾಕಿಸ್ತಾನಕ್ಕೆ ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಭಾರತ ಸರ್ಕಾರ ಪಾಕಿಸ್ತಾನ ತಂಡಕ್ಕೆ ಸೂಕ್ತ ಸಮಯಕ್ಕೆ ವೀಸಾ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಆದರೆ ಪಾಕಿಸ್ತಾನ ಕ್ರಿಕೆಟ್​ ತಂಡದ ನಿರ್ವಹಣಾ ಕಮಿಟಿ​ ಮಾತ್ರ ಎರಡು ದಿನಗಳ ಹಿಂದೆ ವೀಸಾ ಸಮಸ್ಯೆ ಆಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಐಸಿಸಿಗೂ ಪತ್ರ ಬರೆದಿದ್ದರು. ಆದರೆ …

Read More »

ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿಂದು ನಗರದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು. ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಥ ಸಂಚಲನ ಶನಿವಾರ ಕೂಟ, ಗಣಪತಿ ಗಲ್ಲಿ, ಕಂಬಳಿಕೂಟ, ಮಾರುತಿ ಗಲ್ಲಿ, …

Read More »

ಕನ್ನಡ ಶಾಲೆಯ ಅಭಿವೃದ್ಧಿಗೆ ಟೊಂಕಕಟ್ಟಿ ನಿಂತ ಶಿಕ್ಷಕರು.. ವೇತನದಲ್ಲಿ ಪ್ರತಿ ತಿಂಗಳು 10 ಸಾವಿರ ರೂ. ನೀಡುವ ಗುರುಗಳು

ಮಂಗಳೂರು : ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಮತ್ತು ಅನುದಾನಿತ ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಕನ್ನಡ ಶಾಲೆಗಳಲ್ಲಿ ವಿವಿಧ ಮೂಲ ಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ತಪ್ಪಿಸಲು ಮಂಗಳೂರಿನ ಅನುದಾನಿತ ಶಾಲೆಯ ಶಿಕ್ಷಕರು ಮಾದರಿ ಕಾರ್ಯವನ್ನು ಮಾಡುತ್ತಿದ್ದಾರೆ. ಮಂಗಳೂರಿನ ಗೋರಿಗುಡ್ಡದ ಯುಬಿಯಂಸಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕಿಟ್ಟೆಲ್ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿತ್ತು. ಜೊತೆಗೆ ಶಿಕ್ಷಕರು ನಿವೃತ್ತರಾಗುತ್ತಿದ್ದಂತೆ ಶಿಕ್ಷಕರ ಸಂಖ್ಯೆಯು ಕಡಿಮೆಯಾಗುತ್ತಿತ್ತು. ಈ …

Read More »

ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ

ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ.   ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …

Read More »

ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್‌ ಮಾಡ್ತೀವಿ: ಸಿದ್ದರಾಮಯ್ಯ

ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು (CWRC) ತಮಿಳುನಾಡಿಗೆ 18 ದಿನಗಳಲ್ಲಿ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್​ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು …

Read More »

ಪ್ರಥಮ ಬಾರಿಗೆ 16 ಕೋಟಿ ನಿವ್ವಳ ಲಾಭ ಗಳಿಸಿದ ಓಯೋ

ನವದೆಹಲಿ: ಜಾಗತಿಕ ಟ್ರಾವೆಲ್ ಟೆಕ್ ಬ್ರಾಂಡ್ ಓಯೋ ಇದೇ ಮೊದಲ ಬಾರಿಗೆ ಲಾಭ ಗಳಿಸಿರುವುದಾಗಿ ವರದಿ ಮಾಡಿದೆ. 2024ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಮೊದಲ ಬಾರಿಗೆ ತೆರಿಗೆ ನಂತರ 16 ಕೋಟಿ ರೂ. ಲಾಭ ಮಾಡಿರುವುದಾಗಿ ಓಯೋ ಹೇಳಿದೆ. ಕಂಪನಿಯ ಉನ್ನತ ಆಡಳಿತ ಮಂಡಳಿಗೆ ಬರೆದ ಪತ್ರದಲ್ಲಿ, ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರು 2024 ರ ಎರಡನೇ ತ್ರೈಮಾಸಿಕವು ಕಂಪನಿಯ ಮೊದಲ ಲಾಭದಾಯಕ ತ್ರೈಮಾಸಿಕವಾಗಿದ್ದು, ತೆರಿಗೆ ನಂತರದ ಲಾಭವು …

Read More »

ಗೃಹಲಕ್ಷ್ಮೀ, ಗೃಹಜ್ಯೋತಿ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ ಫೋಟೋ ಬಳಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಗಳ ಜಾಹೀರಾತು ಮತ್ತು ಒಪ್ಪಿಗೆ ಆದೇಶಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಭಾವಚಿತ್ರ, ಹೆಸರು ಬಳಕೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.   ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ …

Read More »

ಬೆಂಗಳೂರು ಬಂದ್ : ವ್ಯಾಪಾರ ವಹಿವಾಟು ಸ್ಥಗಿತದಿಂದ ಅಂದಾಜು 200 ಕೋಟಿ ನಷ್ಟ: ಎಫ್‌ಕೆಸಿಸಿಐ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್​ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್​​ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಬಹುತೇಕ ಕಡೆ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು, ಹೋಟೆಲ್​ಗಳನ್ನು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು. ಬಂದ್ ಹಿನ್ನೆಲೆ ನಗರದಲ್ಲಿ …

Read More »