Breaking News

ರಾಷ್ಟ್ರೀಯ

ಕಾಂತಾರ 2′ ಚಿತ್ರಕ್ಕಾಗಿ 11 ಕೆ.ಜಿ ತೂಕ ಇಳಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಬಹುನಿರೀಕ್ಷೆಯ ಕಾಂತಾರ 2 ಸಿನಿಮಾಗಾಗಿ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ಸುಮಾರು 11 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಕಳೆದ ವರ್ಷ ತೆರೆಕಂಡು ಬ್ಲಾಕ್‌ ಬಸ್ಟರ್ ಹಿಟ್ ಆಗಿ, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿರುವ …

Read More »

ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ನಡೆಯುತ್ತದೆ: ಜಿ.ಟಿ.ದೇವೇಗೌಡ

ಬೆಂಗಳೂರು : ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ …

Read More »

ಟೈಮ್ ಮ್ಯಾಗಜೀನ್​ನ ವಿಶ್ವದ 100 ಅತ್ಯುತ್ತಮ ಕಂಪನಿಗಳಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ.

ನವದೆಹಲಿ : ಟೈಮ್ ಮ್ಯಾಗಜೀನ್ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. 100ರ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕಂಪನಿ ಇನ್ಪೋಸಿಸ್ ಆಗಿದೆ. ಬೆಂಗಳೂರು ಮೂಲದ ಇನ್ಪೋಸಿಸ್ ಟಾಪ್ 100 ಪಟ್ಟಿಯಲ್ಲಿ 64 ನೇ ಸ್ಥಾನದಲ್ಲಿದೆ. “ಟೈಮ್ ಮ್ಯಾಗಜೀನ್​ನ ವಿಶ್ವದ ಅತ್ಯುತ್ತಮ ಕಂಪನಿಗಳ 2023ರ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. ನಾವು ಅಗ್ರ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿ ಒಂದಾಗಿದ್ದೇವೆ ಮತ್ತು …

Read More »

S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಿದ: ಸೋಮಶೇಖರ್ ಹುಡೆದ

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ …

Read More »

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …

Read More »

ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿ

ರಾಯಚೂರು: ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಸಂಗಮ ಬಾರ್​ ಹಿಂಭಾಗದ ಬಡಾವಣೆಯ ಮನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಪಾರ್ವತಮ್ಮ ಲಿಂಗಯ್ಯ ಗುಂತಗೋಳ ಎಂಬುವರ ಮನೆಯಲ್ಲಿ ಕೃತ್ಯ ಎಸಗಲಾಗಿದೆ. ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕಳ್ಳರು ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಇದ್ದ ವಯೋವೃದ್ಧೆ ಕಳ್ಳರ ಕೃತ್ಯಕ್ಕೆ ಪ್ರತಿರೋಧ ತೋರಿದಾಗ ಖದೀಮರು ಬಾಯಿಯಲ್ಲಿ ಬಟ್ಟೆಯನ್ನು ಇಟ್ಟು, …

Read More »

ಸಂವಿಧಾನ ಪೀಠಿಕೆಯ ಜಾಗತಿಕ ವಾಚನ

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. …

Read More »

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂಡಸ್ಟ್ರೀಯಲ್​ ಡೆವಲ್ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು …

Read More »

ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ವಿರುದ್ಧ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಹೋರಾಟಕ್ಕೆ ರೂಪುರೇಷೆ ತಯಾರಿಸುತ್ತಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ‌. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ …

Read More »

ಭೂಸ್ವಾಧೀನಾಧಿಕಾರಿ, ಉಪತಹಶೀಲ್ದಾರ್​ಗೆ ತಲಾ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ತುಮಕೂರು : ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸುಮ್​ ಜಹೇರಾ ಹಾಗೂ ಬೆಳ್ಳಾವಿ ಉಪ ತಹಶೀಲ್ದಾರ್ ಶಬ್ಬೀರ್​ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ರಾಮಲಿಂಗೇಗೌಡ ಈ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ …

Read More »