ಮೈಸೂರು: ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಸಂಬಂಧ ಮಾಜಿ ಶಾಸಕ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತಿಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕ ಹಾಗೂ ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವರುಣ ವಿಧಾನಸಭಾ ಕ್ಷೇತ್ರದ …
Read More »ಭದ್ರಾ ನೀರಿಗಾಗಿ ದಾವಣಗೆರೆ ಬಂದ್;
ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. 100 ದಿನಗಳ ಕಾಲ ನಿರಂತರವಾಗಿ ಭದ್ರಾ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ಬಿಜೆಪಿ ಜಿಲ್ಲಾ ಘಟಕ ಬೆಂಬಲ ನೀಡಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣವೇ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದಾರೆ. …
Read More »ಸೆ.26 ರಂದು ಶಾಂತಿಯುತವಾಗಿ ಬೆಂಗಳೂರು ಬಂದ್
ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಾಂತಿಯುತವಾಗಿ ಬಂದ್ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್ ವಿಚಾರವಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ …
Read More »ನಾಳೆ ಭಾರತಕ್ಕೆ ಚಿನ್ನದ ಕನಸು.. ವನಿತೆಯರ ಕ್ರಿಕೆಟ್ ತಂಡ ಲಂಕಾ ಮಣಿಸಿ ಗೆಲ್ಲುತ್ತಾ ಸ್ವರ್ಣ ಪದಕ?
ಹ್ಯಾಂಗ್‌ಝೌ (ಚೀನಾ): ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತಂಡ ಆಡುತ್ತಿದೆ. ಈಗಾಗಲೇ ಭಾರತೀಯ ವನಿತೆಯರ ತಂಡ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ಗೆ ಪ್ರವೇಶಿಸಿದೆ. ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಿದ್ದವು. ಇದರಲ್ಲಿ ಪಾಕಿಸ್ತಾವನ್ನು ಮಣಿಸಿದ ಸಿಂಹಳದ ವನಿತಿಯರು ಅಂತಿಮ ಹಣಾಹಣಿಗೆ ಸಿದ್ಧರಾಗಿದ್ದಾರೆ. ನಾಳೆ ಚಿನ್ನಕ್ಕಾಗಿ ಭಾರತ ಮತ್ತು ಲಂಕಾ ನಡುವೆ ಪೈಪೋಟಿ ನಡೆಯಲಿದೆ. ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 51 ರನ್ಗೆ …
Read More »ಸದ್ಯದಲ್ಲೇ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ : B.S.Y.
ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟ ಸೇರುವ ಮೂಲಕ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳು ಒಟ್ಟಾಗಿ ಹೋಗಬೇಕಿದೆ. ಹಾಗಾಗಿ ಸದ್ಯದಲ್ಲೇ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಹೆಚ್ ಡಿ …
Read More »ಚಂದಗಡದಲ್ಲಿ ಜೊಡೋ ಜಾಗೃತಿ ಕಾರ್ಯಕ್ರಮ ಆಯೋಜನೆ
ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯ ಚಂದಗಡದಲ್ಲಿ ಶ್ರೀ ಗಣೇಶ ಯುವಕ ಮಂಡಲ ವತಿಯಿಂದ ಜೂಡೋ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿತು ಕುಂದಾನಗರಿಯ ಚಂದಗಡ ದಲ್ಲಿ ಜೂಡೋ ತರಬೇತುದಾರರಾದ ರೋಹಿಣಿ ಪಾಟೀಲ್ ಅವರು ಜೂಡೋ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು , ಇನ್ನೂ ಈ ಕಾರ್ಯಕ್ರಮದಲ್ಲಿ ಕಾಮನ್ವೆಲ್ತ್ ಚಾಂಪಿಯನ್ಶಿಪ್ ಚಿನ್ನದ ಪದಕ ವಿಜೇತೆ ಪೂಜಾ ಶಹಾಪುರಕರ್, ರಾಷ್ಟ್ರೀಯ ಪದಕ ವಿಜೇತೆ ಪಾರ್ವತಿ ಅಂಬಲಿ, ಪೂಜಾ ಗಾವಡೆ, ಸಾಯಿಶ್ವರಿ ಕೆ, ಸಂಜನಾ ಶೇಟ್, ಸಹನಾ, ಶ್ವೇತಾ ಅಲಕನೂರ, …
Read More »ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರು : ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲ್ ಗೆ ಸಾಥ್ ನೀಡಿದರು. ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಬಿಜೆಪಿ-ಜೆಡಿಎಸ್ …
Read More »ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿನಯ್ ಕುಲಕರ್ಣಿಗೆ ವಿಧಿಸಿದ್ದ ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿತು. ವಿಚಾರಣೆಯಲ್ಲಿ ಸಿಬಿಐ ಪರ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಅರ್ಜಿದಾರರ ವಿರುದ್ಧ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ …
Read More »ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಶುರು: 2 ಬೆಳ್ಳಿ, 1 ಕಂಚು, ಫೈನಲ್‌ಗೇರಿದ ಮಹಿಳಾ ಕ್ರಿಕೆಟ್ ತಂಡ
ಹ್ಯಾಂಗ್‌ಝೌ (ಚೀನಾ): ಇಂದು(ಭಾನುವಾರ) ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ ಲೈಟ್‌ವೇಟ್ ಡಬಲ್ಸ್ ಸ್ಕಲ್ ಫೈನಲ್‌ನಲ್ಲಿ ಭಾರತದ ಅರ್ಜುನ್ ಲಾಲ್ ಜಾತ್ ಮತ್ತು ಅರವಿಂದ್ ಸಿಂಗ್ ಜೋಡಿ ಬೆಳ್ಳಿ ಪದಕ ಗೆದ್ದುಕೊಂಡರು. ಇವರು 6.28.18 ನಿಮಿಷ ಸಮಯದಲ್ಲಿ ನಿಗದಿತ ಗುರಿ ತಲುಪಿ ಈ ಸಾಧನೆ ತೋರಿದರು. ಚೀನಾದ ಫ್ಯಾನ್ ಜುಂಜಿ ಮತ್ತು ಸನ್ ಮ್ಯಾನ್ ಜೋಡಿ 6:23.16 ನಿಮಿಷಗಳಲ್ಲಿ ಸಮಯದಲ್ಲಿ ಗುರಿ ತಲುಪುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನ ಗೆದ್ದರು. ಮೊದಲ ಪದಕ ಗೆದ್ದುಕೊಟ್ಟ …
Read More »ಸೋಮವಾರ ದಾವಣಗೆರೆ ಬಂದ್ಗೆ ಕರೆ ನೀಡಿದ ಭಾರತೀಯ ರೈತ ಒಕ್ಕೂಟ..
ದಾವಣಗೆರೆ: ಮಂಡ್ಯದಲ್ಲಿ ಕಾವೇರಿ ಕಾವು ಜೋರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು ರೈತರು ಬಂದ್ ಮಾಡಿದರು. ಇತ್ತ ದಾವಣಗೆರೆಯಲ್ಲೂ ಕೂಡ ಭದ್ರಾ ಕಿಚ್ಚು ಕಾವೇರಿದ್ದು, ನೀರು ಹರಿಸುವಂತೆ ಭತ್ತ ನಾಟಿ ಮಾಡಿರುವ ರೈತರು ಕಳೆದ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಭದ್ರಾ ನೀರಿಗಾಗಿ ಬೀದಿಗಿಳಿದ ರೈತರು ಒಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ಭದ್ರಾ ನೀರು ಹರಿಸದೇ ಇರುವುದರ ಹಿನ್ನೆಲೆ ಭಾರತೀಯ ರೈತ ಒಕ್ಕೂಟದಿಂದ ಸೋಮವಾರ ದಾವಣಗೆರೆ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ. …
Read More »
Laxmi News 24×7