ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್ ಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ …
Read More »ಬಿಜೆಪಿ – ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಈ ತಿಂಗಳ 19 ಅಥವಾ 20 ರಂದು ಫೈನಲ್ ಆಗಲಿದೆ. ಮುಂದಿನ ವಾರ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ಸೆ.19 ಇಲ್ಲವೇ 20 ರಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …
Read More »ತಮಿಳುನಾಡಿಗೆ ನೀರು ಬಿಡುಗಡೆಗೆ ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸರ್ವಪಕ್ಷ ಸಭೆ
ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಸೂಚಿಸಿರುವ ಹಿನ್ನೆಲೆ ಇಂದು (ಬುಧವಾರ) ರಾಜ್ಯ ಸರ್ಕಾರ ತುರ್ತು ಸರ್ವಪಕ್ಷ ಸಭೆ ಕರೆದಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12:30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ …
Read More »ಬಿ ಕೆ ಹರಿಪ್ರಸಾದ್ಗೆ ಶೋಕಾಸ್ ನೊಟೀಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ …
Read More »ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು. ಎಸ್‌ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ …
Read More »ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …
Read More »ಸೆಪ್ಟೆಂಬರ್ ಕೊನೆಯಲ್ಲಿ ಈ 3 ಸಿನಿಮಾಗಳು ತೆರೆಗೆ
ಸೆಪ್ಟೆಂಬರ್ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್, ಪಠಾಣ್, ಜೈಲರ್ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆ. ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು …
Read More »ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್ಗೆ ದೂರು: ಬಿ ಕೆ ಹರಿಪ್ರಸಾದ್
ಕೊಪ್ಪಳ: ‘ಕೆಲವರು ತಾವು ಮಾಡಿದ ಹಗರಣಗಳಿಂದ ಪಾರಾಗಲು ನನ್ನ ವಿರುದ್ಧ ಹೈಕಮಾಂಡ್ಗೆ ದೂರು ನೀಡುವ ನಾಟಕವಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ದರೆ ಮೊದಲು ಹಗರಣಗಳಿಂದ ಹೊರಗೆ ಬರಲಿ. ಅದು ಬಿಟ್ಟು ನನ್ನ ಮೇಲೆ ದೂರು ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು. ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ”ನನ್ನ …
Read More »ಬಿಟ್ ಕಾಯಿನ್ ಹಗರಣ: ಆರೋಪಿಗಳಿಗೆ ಮುಂದಿನ ವಿಚಾರಣೆವರೆಗೂ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿದ ಹೈಕೋರ್ಟ್
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ …
Read More »ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು:C.M.
ಬೆಂಗಳೂರು: ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಕಚೇರಿಯಲ್ಲಿರಬೇಕು, ಇಲ್ಲವೆ ಜಿಲ್ಲೆಯಲ್ಲಿ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home …
Read More »