ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬಾಕಿ ಪರಿಹಾರ ಮೊತ್ತ ನೀಡದ ಹಿನ್ನೆಲೆ ಸೋಮವಾರ ನ್ಯಾಯಾಲಯದ ಆದೇಶದ ಮೇರೆಗೆ ಎರಡು ವಾಯುವ್ಯ ಕರ್ನಾಟಕ ಸಾರಿಗೆ ಬಸ್‍ಗಳನ್ನು ಜಪ್ತಿ ಮಾಡಲಾಯಿತು. ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹಾವೇರಿ ಡಿಪೋಗೆ ಸೇರಿದ ಎರಡು ಬಸ್‍ಗಳನ್ನು ನ್ಯಾಯಾಂಗ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೊಡಬೇಕಿದ್ದ ಪರಿಹಾರದ ಬಾಕಿ ಮೊತ್ತ ಉಳಿಸಿಕೊಂಡಿರುವ ಕೆಎಸ್ಆರ್ಟಿಸಿ ಸಂಸ್ಥೆಯ ಚರಾಸ್ತಿ ಜಪ್ತಿಗೆ ದಾವಣಗೆರೆ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ …
Read More »ಬಾಗೇಪಲ್ಲಿ ಬಳಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿ.. ಸಿನಿಮಾ ಸ್ಟೈಲ್ನಲ್ಲಿ ವೇಗವಾಗಿ ಹೊರಟಿದ್ದವರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಚಾಲಕನ ನಿಂಯತ್ರಣ ತಪ್ಪಿ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ನೆರೆಯ ರಾಜ್ಯ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ರಕ್ತ ಚಂದನ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಭೇಟಿ ಕೊಟ್ಟು ಗಾಯಾಳುಗಳನ್ನು …
Read More »ಒಂದೇ ಕುಟುಂಬದ 15 ಮಂದಿಯಿಂದ ಪರಿಸರಸ್ನೇಹಿ ಗಣಪತಿ ನಿರ್ಮಾಣ: ಗ್ರಾಹಕ ನಿಗದಿಪಡಿಸಿದ ದುಡ್ಡಿಗೆ ಮೂರ್ತಿ ಮಾರಾಟ
ಹಾವೇರಿ: ಇಲ್ಲಿನಗುತ್ತಲ ಪಟ್ಟಣದಲ್ಲೊಂದು ಗಣಪತಿ ತಯಾರಿಸುವ ವಿಶೇಷ ಅನ್ನಿಸುವ ಕುಟುಂಬವಿದೆ. ನೆಗಳೂರುಮಠ ಎಂಬ ಹೆಸರಿನ ಕುಟುಂಬದ ಸುಮಾರು 15 ಮಂದಿ ಗಣಪತಿ ವಿಗ್ರಹ ತಯಾರಿಸುತ್ತಾರೆ. ಮೂರ್ತಿ ಸಿದ್ಧಪಡಿಸುವ ಈ ಕಲಾವಿದರೆಲ್ಲರೂ ಸರ್ಕಾರಿ ನೌಕರಿಯಲ್ಲಿದ್ದಾರೆ. ಗಣೇಶೋತ್ಸವಕ್ಕೆ ಈ ಮನೆಯ ಅಳಿಯಂದಿರು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಒಟ್ಟು ಸೇರಿದರೆ ಇವರ ಸಂಖ್ಯೆ 25 ದಾಟುತ್ತದೆ. ಹಬ್ಬ ಸಮೀಪಿಸುತ್ತಿದ್ದಂತೆ ಸರ್ಕಾರಿ ಕೆಲಸಕ್ಕೆ ರಜೆ ಹಾಕುವ ಇವರು ವಿಘ್ನವಿನಾಶಕನ ತಯಾರಿಯಲ್ಲಿ ಸಂಪೂರ್ಣವಾಗಿ ತೊಡುಗುತ್ತಾರೆ. ಯುಗಾದಿಯಂದು ಗಣೇಶ ಮೂರ್ತಿಗಳ …
Read More »ಗ್ಯಾರಂಟಿ ಯೋಜನೆಗೆ ‘SCSPTSP’ ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?
ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (SCSP TSP) ಅನುದಾನ ಬಳಕೆ ಮಾಡುತ್ತಿದೆ. ಸರ್ಕಾರದ ನಡೆಗೆ ಪ್ರತಿಪಕ್ಷ ಬಿಜೆಪಿ ಹಾಗು ದಲಿತ ನಾಯಕರು ಟೀಕಾಸಮರ ನಡೆಸಿದ್ದಾರೆ. ಸರ್ಕಾರ ಈಗಾಗಲೇ ಎಸ್ಸಿಎಸ್ಪಿಟಿಎಸ್ಪಿ ಅನುದಾನದಿಂದ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಬಿಡುಗಡೆ ಮಾಡಿದೆ. ಈವರೆಗೆ ಬಿಡುಗಡೆಯಾದ ಹಣ ಎಷ್ಟು?, ಎಷ್ಟು ಹಣ ಹಂಚಿಕೆಯಾಗಿದೆ? ನೋಡೋಣ. ಕಾಂಗ್ರೆಸ್ ಸರ್ಕಾರ ತನ್ನ ಶತದಿನಗಳ ಆಡಳಿತದಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ …
Read More »ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ …
Read More »ಬಹಿರಂಗ ಹೇಳಿಕೆ ನೀಡದಂತೆ ಬಿ.ಕೆ.ಹರಿಪ್ರಸಾದ್ಗೆ ಕಾಂಗ್ರೆಸ್ ಹೈಕಮಾಂಡ್ ತಾಕೀತು
ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …
Read More »ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಆಯಕ್ಷನ್ ಪ್ರಿನ್ಸ್ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …
Read More »ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆ ಸಂಬಂಧ 12 ಜನರನ್ನು ಬಂಧಿಸಲಾಗಿದೆ
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಮಾಲೀಕರ ಒಕ್ಕೂಟ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದರೆ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಇಂದು ಬಂದ್ ವೇಳೆ ನಗರದ ಕೆಲವೆಡೆ ಬೈಕ್ ಟಾಕ್ಸಿಗಳ ಮೇಲೆ ಹಾಗೂ ಆಟೊ ಚಾಲಕರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿ, ಅಲ್ಲದೇ ವಾಹನಗಳನ್ನ ಜಖಂಗೊಳಿಸಿದ್ದರು. ಈ …
Read More »ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು.: ಸಿದ್ದರಾಮಯ್ಯ
ಮೈಸೂರು : ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ …
Read More »ಮಳೆ ನಮ್ಮನ್ನು ಉಳಿಸಿದೆ’: ಭಾರತ – ಪಾಕ್ ಹಣಾಹಣಿ ಬಗ್ಗೆ ಶೋಯೆಬ್ ಅಖ್ತರ್ ಹೇಳಿಕೆ
ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಳೆ ಎರಡನೇ ಬಾರಿಗೆ ಅಡ್ಡಿ ಮಾಡಿದೆ. ಲೀಗ್ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್ ಮಾತ್ರ ಆಡಲು ಸಾಧ್ಯವಾಯಿತು. ಸೂಪರ್ ಫೋರ್ ಹಂತದ ಪಂದ್ಯ ನಿನ್ನೆ (ಭಾನುವಾರ) ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ 24.1 ಓವರ್ ವರೆಗೆ ಸುಸೂತ್ರವಾಗಿ ನಡೆದಿತ್ತು. ಆದರೆ ಈ ವೇಳೆ ಬಂದ ಮಳೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ …
Read More »