Breaking News

ರಾಷ್ಟ್ರೀಯ

ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ, ಡಿಸಿಪಿ‌ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದ ಸಿಎಂ

ಬೆಂಗಳೂರು: ರಾಜ್ಯದ ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ನಡೆಯುತ್ತಿದ್ದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಸ್ಪಿ ಅಥವಾ ಡಿಸಿಪಿ‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಂದು ಐಪಿಎಸ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.‌ ಇದಕ್ಕೂ ಮೊದಲು ವಾಹನ ಕಳುವಾದರೆ ಆನ್ ಲೈನ್‌ನಲ್ಲಿ ದೂರು ನೀಡಲು ಇ-ಎಫ್‌ಐಆರ್ ಹಾಗೂ ದಂಡ …

Read More »

ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ

ಬೆಂಗಳೂರು : ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕುಮಾರಕೃಪಾ ಅತಿಥಿಗೃಹದ ಬಳಿ ಇಂದು ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗೆ ನಿರಾಕ್ಷೇಪಣಾ ಪತ್ರ ತರಲು …

Read More »

ಬಾಂಗ್ಲಾ ವಿರುದ್ಧ ಸೋಲು ಕಂಡ ಭಾರತ…

ಕೊಲಂಬೊ (ಶ್ರೀಲಂಕಾ): ಯುವ ಆಟಗಾರ ಶುಭಮನ್​ ಗಿಲ್​ ಶತಕದ ಹೊರತಾಗಿಯೂ ಭಾರತ ತಂಡ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಮುಗ್ಗಿಸಿದೆ. ಪ್ರಿನ್ಸ್​ ಗಿಲ್​ ಶತಕವು ತಂಡದ ಜಯಕ್ಕೆ ಕೊಡುಗೆ ಆಗಲಿಲ್ಲ, ಅವರ ಆಟ ವ್ಯರ್ಥ ಪ್ರಯತ್ನದಂತಾಯಿತು. ಭಾರತ 49.5 ಓವರ್​ಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 259 ರನ್​ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಬಾಂಗ್ಲಾ ಆರು ರನ್​ಗಳ​ ಗೆಲುವು ದಾಖಲಿಸಿತು. ಏಷ್ಯಾ ಕಪ್​ ಟೂರ್ನಿಯ ಆರನೇ ಸೂಪರ್​ 4 ಪಂದ್ಯದಲ್ಲಿ ಐದು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿದ …

Read More »

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ …

Read More »

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಇಂದು ಭಾರತ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ

ಬೆಂಗಳೂರು : ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯ ಅಂಗವಾಗಿ ಇಂದು ಬೆಳಗ್ಗೆ 10:00 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಬಾಂಕ್ವೆಟ್ ಹಾಲ್‌ನಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಏಕಕಾಲದಲ್ಲಿ ಓದುವ ಕಾರ್ಯಕ್ರಮದಲ್ಲಿ ಅಧಿಕಾರಿ, ಸಿಬ್ಬಂದಿ ಹಾಜರಾಗಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವರ ನೇತೃತ್ವದಲ್ಲಿ ಬಾಂಕ್ವೆಟ್ ಹಾಲ್‌ನಲ್ಲಿ ಭಾರತ …

Read More »

ಕಾಂತಾರ 2′ ಚಿತ್ರಕ್ಕಾಗಿ 11 ಕೆ.ಜಿ ತೂಕ ಇಳಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಬಹುನಿರೀಕ್ಷೆಯ ಕಾಂತಾರ 2 ಸಿನಿಮಾಗಾಗಿ ಡಿವೈನ್ ಸ್ಟಾರ್ ಖ್ಯಾತಿಯ ರಿಷಬ್​ ಶೆಟ್ಟಿ ಸುಮಾರು 11 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಭಾರತೀಯ ಚಿತ್ರರಂಗ ಮಾತ್ರವಲ್ಲದೇ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಕಳೆದ ವರ್ಷ ತೆರೆಕಂಡು ಬ್ಲಾಕ್‌ ಬಸ್ಟರ್ ಹಿಟ್ ಆಗಿ, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಕರಾವಳಿ ಭಾಗದ ದೈವಾರಾಧನೆ ಕಥೆ ಹೊಂದಿರುವ …

Read More »

ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ನಡೆಯುತ್ತದೆ: ಜಿ.ಟಿ.ದೇವೇಗೌಡ

ಬೆಂಗಳೂರು : ಬಿಜೆಪಿ-ಜೆಡಿಎಸ್‌ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ …

Read More »

ಟೈಮ್ ಮ್ಯಾಗಜೀನ್​ನ ವಿಶ್ವದ 100 ಅತ್ಯುತ್ತಮ ಕಂಪನಿಗಳಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ.

ನವದೆಹಲಿ : ಟೈಮ್ ಮ್ಯಾಗಜೀನ್ ಬಿಡುಗಡೆ ಮಾಡಿರುವ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. 100ರ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕಂಪನಿ ಇನ್ಪೋಸಿಸ್ ಆಗಿದೆ. ಬೆಂಗಳೂರು ಮೂಲದ ಇನ್ಪೋಸಿಸ್ ಟಾಪ್ 100 ಪಟ್ಟಿಯಲ್ಲಿ 64 ನೇ ಸ್ಥಾನದಲ್ಲಿದೆ. “ಟೈಮ್ ಮ್ಯಾಗಜೀನ್​ನ ವಿಶ್ವದ ಅತ್ಯುತ್ತಮ ಕಂಪನಿಗಳ 2023ರ ಪಟ್ಟಿಯಲ್ಲಿ ಇನ್ಫೋಸಿಸ್ ಸ್ಥಾನ ಪಡೆದಿದೆ. ನಾವು ಅಗ್ರ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿ ಒಂದಾಗಿದ್ದೇವೆ ಮತ್ತು …

Read More »

S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಿದ: ಸೋಮಶೇಖರ್ ಹುಡೆದ

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ …

Read More »

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …

Read More »