ಬೆಳಗಾವಿ: ನೆರೆಯ ರಾಜ್ಯ ಪುಣೆ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಮೂರು ದಿನಗಳವರೆಗೆ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ ತಂಡವು ದ್ವೀತಿಯ ಸ್ಥಾನ ಪಡೆದು, ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದೆ. ಸೆ. 9 ರಿಂದ 11 ವರೆಗೆ ಮೂರು ದಿನಗಳ ಕಾಲ ಪುಣೆನ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ …
Read More »ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದ ಯುವಕರು ಚೇತರಿಸಿಕೊಂಡಿದ್ದಾರೆ
ಬೆಳಗಾವಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಝಾನ್ಸಿ ಮೂಲದ 8 ಜನ ಯುವಕರು ಚೇತರಿಸಿಕೊಂಡಿದ್ದಾರೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ. ಈ ಘಟನೆ ಹಿಂದೆ ಚಾಕೊಲೇಟ್ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ಸೆ. 11ರಂದು ರಾತ್ರಿ ಗೋವಾದಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ 8 ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಅಸ್ವಸ್ತಗೊಂಡಿದ್ದರು. ತಕ್ಷಣವೇ …
Read More »ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದೂಡಿಕೆ: ಫೆಬ್ರವರಿಯಲ್ಲಿ ನಡೆಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿಜಯನಗರ – ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ …
Read More »ಬೀದರ್: ಕುಡಿಯಲು ಹಣ ನೀಡುವಂತೆ ಪೀಡಿಸಿ ಹೆತ್ತ ತಾಯಿಯನ್ನೇ ಕೊಂದ ಪುತ್ರ
ಬೀದರ್: ಹೆತ್ತ ತಾಯಿಯನ್ನೇ ಮಗ ಕೊಡಲಿಯಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಚೆಟ್ಟಿ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ. ಶಂಕುತಲಾ ರಾಜಕುಮಾರ ಸಿಂಧೆ (55) ಹತ್ಯೆಯಾದವರು. ಮಗ ದೀಪಕ ಆರೋಪಿ. ದೀಪಕ ಕುಡಿತದ ಚಟಕ್ಕೆ ದಾಸನಾಗಿದ್ದ. ಪ್ರತಿನಿತ್ಯ ಹಣ ನೀಡುವಂತೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎಂದು ಸಂಬಂಧಿಕರು ತಿಳಿಸಿದ್ದಾರೆ. ಮಂಗಳವಾರವೂ ಸಹ ಕುಡಿಯಲು ಹಣ ನೀಡುವಂತೆ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದೆ. ಕುಪಿತ ಆರೋಪಿ ಕೊಡಲಿಯಿಂದ ತಾಯಿಯ …
Read More »ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ಈರುಳ್ಳಿಯದ್ದೇ ದರ್ಬಾರ್
ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಈರುಳ್ಳಿ ಬೆಳೆ ಕುಂಠಿತವಾಗಿದೆ. ಇದರ ಪರಿಣಾಮ, ಸ್ಥಳೀಯ ಮಾರುಕಟ್ಟೆಯಲ್ಲಿ ಮಹಾರಾಷ್ಟ್ರದ ನಾಸಿಕ್ ಈರುಳ್ಳಿಯದ್ದೇ ದರ್ಬಾರ್ ಮುಂದುವರೆದಿದೆ. ಸಾಮಾನ್ಯವಾಗಿ ಗಣೇಶ ಹಬ್ಬ ಹಾಗೂ ದಸರಾ ನಂತರ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಈ ಬಾರಿ ಅದಕ್ಕೂ ಮುನ್ನವೇ ಬೆಲೆ ಏರಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆಯಲು ಮಳೆ ಕೊರತೆಯಾಗಿದೆ. ದಾವಣಗೆರೆಗೆ ನಾಸಿಕ್ ಈರುಳ್ಳಿ ಲಗ್ಗೆಯಿಟ್ಟಿದ್ದು, ಕೆಜಿಗೆ 27 ರೂಪಾಯಿಗೆ ಮಾರಾಟವಾಗುತ್ತಿದೆ. ಟೊಮೆಟೊ ಬಳಿಕ ಈರುಳ್ಳಿ ಬೆಲೆ ಗಗನಕ್ಕೇರಲಿದೆ ಎಂಬುದನ್ನು ಮನಗಂಡು …
Read More »ಮೈಸೂರು ವಿವಿ ಕುಲಪತಿ ಲೋಕನಾಥ್ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್ ಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ …
Read More »ಬಿಜೆಪಿ – ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಈ ತಿಂಗಳ 19 ಅಥವಾ 20 ರಂದು ಫೈನಲ್ ಆಗಲಿದೆ. ಮುಂದಿನ ವಾರ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ಸೆ.19 ಇಲ್ಲವೇ 20 ರಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …
Read More »ತಮಿಳುನಾಡಿಗೆ ನೀರು ಬಿಡುಗಡೆಗೆ ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸರ್ವಪಕ್ಷ ಸಭೆ
ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಸೂಚಿಸಿರುವ ಹಿನ್ನೆಲೆ ಇಂದು (ಬುಧವಾರ) ರಾಜ್ಯ ಸರ್ಕಾರ ತುರ್ತು ಸರ್ವಪಕ್ಷ ಸಭೆ ಕರೆದಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12:30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ …
Read More »ಬಿ ಕೆ ಹರಿಪ್ರಸಾದ್ಗೆ ಶೋಕಾಸ್ ನೊಟೀಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ …
Read More »ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು. ಎಸ್‌ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ …
Read More »
Laxmi News 24×7