Breaking News

ರಾಷ್ಟ್ರೀಯ

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ: ಡಿ ಕೆ ಶಿ

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ   ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು …

Read More »

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.

ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ದುರಂತ ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ. ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ …

Read More »

ಸೂಪರ್​ ಸ್ಟಾರ್​’ ರಜನಿಕಾಂತ್‌ಗೆ ರಾಜ್ಯಪಾಲ ಹುದ್ದೆ?

ಮಧುರೈ (ತಮಿಳುನಾಡು): ”ಎಲ್ಲವೂ ದೇವರ ಕೈಯಲ್ಲಿದೆ. ರಜಿನಿ ಅವರಿಗೆ ಇದು (ರಾಜ್ಯಪಾಲರ ಹುದ್ದೆ) ಇಷ್ಟವಿಲ್ಲ. ಆದರೆ, ಬಹುಶಃ ಅವರು ಸಿಕ್ಕರೆ ಹಿಂಜರಿಯುವುದಿಲ್ಲ” ಎಂದು ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಹೇಳಿದ್ದಾರೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡು ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಬಳಿಕ, ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ. ರಜನಿಕಾಂತ್​ಗೆ ರಾಜ್ಯಪಾಲರ ಹುದ್ದೆ?: ”ರಜನಿಕಾಂತ್ ರಾಜಕೀಯಕ್ಕೆ ಬರಲು ಯೋಚಿಸಿಲ್ಲ” ಎಂದು ರಜನಿ ಸಹೋದರ ಸತ್ಯನಾರಾಯಣ ರಾವ್ …

Read More »

‘ಸನಾತನ ಧರ್ಮ’ ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ‘ತಾನು ನೀಡಿದ ಹೇಳಿಕೆಗೆ ಬದ್ಧವಾಗಿದ್ದು, ಯಾವುದೇ ರೀತಿಯ ಸವಾಲಿಗೆ ಸಿದ್ಧ’ ಎಂದು ಉದಯನಿಧಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಯುವ ಸಚಿವ, ಸನಾತನ ಧರ್ಮ ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ ವೈರಸ್ ಮತ್ತು ಸೊಳ್ಳೆಗಳಿಂದ ಉಂಟಾಗುವ ಜ್ವರವಿದ್ದಂತೆ. ಇಂಥದ್ದನ್ನು ಬೇರು ಸಮೇತ ಕಿತ್ತು ಹಾಕಬೇಕು. ಸನಾತನ ಜಾತಿ …

Read More »

ಬೆಳಗಾವಿ ಜಿಲ್ಲೆಯಲ್ಲಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಬೆಳಗಾವಿ : ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಬೆಳಗಾವಿ: ಜಿಲ್ಲೆಯ ಪ್ರತಿ ಹಳ್ಳಿಯ ಜನರಿಗೆ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ 150 ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ನಾಗರಿಕ, ಬ್ಯಾಂಕಿಂಗ್ ಸೇವೆಗಳು, ಆರ್ ಟಿಐ ಸೇರಿದಂತೆ ಗ್ರಾಮ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಕೇಂದ್ರೀತ ಚಟುವಟಿಕೆಗಳಿಗಾಗಿ ನೆರವು …

Read More »

ಮಾಜಿ ಸಚಿವರು, ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕೊಡಬೇಡಿ.. ಕಾರ್ಯಕರ್ತರನ್ನೇ ಪರಿಗಣಿಸಿ- ಕೈ ಮುಖಂಡರ ಆಗ್ರಹ

ಬೆಂಗಳೂರು: ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಕೈ ಕಾರ್ಯಕರ್ತರು ನಿಗಮ‌ ಮಂಡಳಿಗೆ ಶಾಸಕರನ್ನು ನೇಮಕ ಮಾಡದಂತೆ ಒಕ್ಕೋರಲಿನ ಆಗ್ರಹ ಮಾಡಿದರು.‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್, ನಿಗಮ ಮಂಡಳಿಗಳ ಅಧ್ಯಕ್ಷ, ಸದಸ್ಯ ಸ್ಥಾನವನ್ನು ಈ ತಿಂಗಳಾತ್ಯಕ್ಕೆ ನೇಮಿಸುವಂತೆ ಸಲಹೆ ನೀಡಿದರು.   ಎಲ್ಲರಿಗೂ ಅವಾಕಶ ಸಿಗುವ ನಿಟ್ಟಿನಲ್ಲಿ …

Read More »

ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಕೇಸ್: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಆ.30ರಂದು ರಾತ್ರಿ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಾಳಮಾರುತಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ರಾಜಾರಾಮಪುರಿ ಬಾಯಪಾಸ್ ಚಾಳ ಗಲ್ಲಿಯ ಪ್ರಥಮೇಶ ಧರ್ಮೇಂದ್ರ ಕಸಬೇಕರ್ (20) ಹಾಗೂ ಆಕಾಶ ಕಾಡಪ್ಪಾ ಪವಾರ್(21) ಬಂಧಿತ ಆರೋಪಿಗಳು. ಆ.30ರ ರಾತ್ರಿ ಶಿವಬಸವ ನಗರದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನಾಗರಾಜ ಈರಪ್ಪ ಗಾಡಿವಡ್ಡರ್ (26) ಎಂಬ ಯುವಕನನ್ನು ಬೈಕ್‍ನಲ್ಲಿ …

Read More »

ಚಂದ್ರಯಾನ-3: ಕೆಲಸ ಮುಗಿಸಿ ‘ಸ್ಲೀಪ್​ ಮೋಡ್​’ಗೆ ಜಾರಿದ ಪ್ರಗ್ಯಾನ್; ಸೆಪ್ಟೆಂಬರ್ 22ರಿಂದ ಮತ್ತೆ ಕಾರ್ಯಾರಂಭದ ಭರವಸೆ

ನವದೆಹಲಿ: ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್‌ ಮೊದಲು ಸ್ಪರ್ಶಿಸಿದ ಸ್ಥಳವಾದ ‘ಶಿವಶಕ್ತಿ ಪಾಯಿಂಟ್‌’ನಿಂದ ಸುಮಾರು 100 ಮೀಟರ್ ಚಲಿಸಿದ ಬಳಿಕ ಪ್ರಗ್ಯಾನ್ ರೋವರ್ ಅನ್ನು ಸುರಕ್ಷಿತವಾಗಿ ಸ್ಲೀಪ್​ ಮೋಡ್​ನಲ್ಲಿ ಇರಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿನ್ನೆ (ಶನಿವಾರ) ತಿಳಿಸಿದೆ.   ಈ ಕುರಿತು ‘ಎಕ್ಸ್’ ಆಯಪ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, “ರೋವರ್ ತನ್ನ ಕಾರ್ಯ ಯೋಜನೆಗಳನ್ನು ಪೂರ್ಣಗೊಳಿಸಿದೆ. ಇದೀಗ ಸುರಕ್ಷಿತವಾಗಿ ಅದನ್ನು ನಿಲುಗಡೆ ಮಾಡಲಾಗಿದ್ದು, ಸ್ಲೀಪ್ ಮೋಡ್‌ಗೆ ಹೊಂದಿಸಲಾಗಿದೆ. …

Read More »

ಏಕಕಾಲಕ್ಕೆ ಚುನಾವಣೆ ನಡೆದರೆ ಇವಿಎಂ-ವಿವಿಪ್ಯಾಟ್ ಖರೀದಿಗೆ ₹9,300 ಕೋಟಿ ವೆಚ್ಚ: ಚುನಾವಣಾ ಆಯೋಗ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಹೆಚ್ಚುವರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂ) ಮತ್ತು ಪೇಪರ್-ಟ್ರಯಲ್ ಯಂತ್ರಗಳನ್ನು ಖರೀದಿಸಲು ಸುಮಾರು 9,300 ಕೋಟಿ ವೆಚ್ಚವಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಒಂದೇ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ಅಗತ್ಯ ಕಾರ್ಯಸೂಚಿಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ‘ಒಂದು ರಾಷ್ಟ್ರ ಒಂದು ಚುನಾವಣೆ’ಯಡಿ ಏಕಕಾಲಕ್ಕೆ ಚುನಾವಣೆ ನಡೆಸುವಾಗ …

Read More »

ಎದ್ದು ನಿಂತು ಮರ್ಯಾದೆ ಕೊಟ್ಟಿಲ್ಲವೆಂದು ಯುವಕನ ಮೇಲೆ ಅಟ್ಟಾಡಿಸಿ ಮಾರಕಾಸ್ತ್ರ ಬೀಸಿದ ಪುಂಡರು

ಬೆಂಗಳೂರು: ರಸ್ತೆಯಲ್ಲಿ ತಾವು ಬಂದಾಗ ಎದ್ದು ಮರ್ಯಾದೆ ಕೊಡಲಿಲ್ಲವೆಂದು ಯುವಕನೊಬ್ಬನನ್ನು ಪುಂಡರ ಗುಂಪೊಂದು ಮಾರಕಾಸ್ತ್ರ ಹಿಡಿದು ಅಟ್ಟಾಡಿಸಿ ಹಲ್ಲೆ ಮಾಡಿರುವ ಘಟನೆ ಆಗಸ್ಟ್ 27ರಂದು ಮಡಿವಾಳದ ವೆಂಕಟಾಪುರದಲ್ಲಿ ನಡೆದಿದೆ. ರಮೇಶ್ ಹಲ್ಲೆಗೊಳಗಾದ ಯುವಕ. ಸಂಜೆ 6:30 ರ ಸುಮಾರಿಗೆ ರಮೇಶ್ ವೆಂಕಟಾಪುರ ಬಳಿ ಟೀ ಕುಡಿಯಲು ತೆರಳಿದ್ದ. ಈ ವೇಳೆ ಟೀ ಅಂಗಡಿ ಬಳಿ ಬಂದಿದ್ದ ಕಾವೇರಿ ಶಿವು ಮತ್ತವನ ಗ್ಯಾಂಗ್ ರಮೇಶನಿಗೆ ‘ಏನೋ ನಾವ್ ಬಂದ್ರು ಎದ್ದೇಳಲ್ವಾ?’ ಎಂದು ಅವಾಜ್ …

Read More »