ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …
Read More »ಅಣ್ಣ ಚಿರು ಸಮಾಧಿ ಬಳಿ ಪತ್ನಿ ಸೀಮಂತ ನೆರವೇರಿಸಿದ ಧ್ರುವ ಸರ್ಜಾ
ಕನ್ನಡ ಚಿತ್ರರಂಗದಲ್ಲಿ ನಟನೆ ಮತ್ತು ಗುಣದಿಂದ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನಟ ಧ್ರುವ ಸರ್ಜಾ. ಸಿನಿಮಾ ಮತ್ತು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕೆಲ ದಿನಗಳ ಹಿಂದೆ ಅಣ್ಣ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿದ್ದ ಧ್ರುವ ಸರ್ಜಾ ಅವರ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಆಯಕ್ಷನ್ ಪ್ರಿನ್ಸ್ ಮನೆಯಲ್ಲಿ ಸೀಮಂತದ ಸಂಭ್ರಮ ಮನೆ ಮಾಡಿದೆ. ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರವನ್ನು ವಿಶೇಷ …
Read More »ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆ ಸಂಬಂಧ 12 ಜನರನ್ನು ಬಂಧಿಸಲಾಗಿದೆ
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಮಾಲೀಕರ ಒಕ್ಕೂಟ ಕರೆ ನೀಡಿದ್ದ ಬೆಂಗಳೂರು ಬಂದ್ ವೇಳೆ ರಾಪಿಡೊ ಹಾಗೂ ಆಟೊ ಚಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದೂರು ನೀಡಿದರೆ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಇಂದು ಬಂದ್ ವೇಳೆ ನಗರದ ಕೆಲವೆಡೆ ಬೈಕ್ ಟಾಕ್ಸಿಗಳ ಮೇಲೆ ಹಾಗೂ ಆಟೊ ಚಾಲಕರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿ, ಅಲ್ಲದೇ ವಾಹನಗಳನ್ನ ಜಖಂಗೊಳಿಸಿದ್ದರು. ಈ …
Read More »ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು.: ಸಿದ್ದರಾಮಯ್ಯ
ಮೈಸೂರು : ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ …
Read More »ಮಳೆ ನಮ್ಮನ್ನು ಉಳಿಸಿದೆ’: ಭಾರತ – ಪಾಕ್ ಹಣಾಹಣಿ ಬಗ್ಗೆ ಶೋಯೆಬ್ ಅಖ್ತರ್ ಹೇಳಿಕೆ
ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಳೆ ಎರಡನೇ ಬಾರಿಗೆ ಅಡ್ಡಿ ಮಾಡಿದೆ. ಲೀಗ್ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್ ಮಾತ್ರ ಆಡಲು ಸಾಧ್ಯವಾಯಿತು. ಸೂಪರ್ ಫೋರ್ ಹಂತದ ಪಂದ್ಯ ನಿನ್ನೆ (ಭಾನುವಾರ) ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ 24.1 ಓವರ್ ವರೆಗೆ ಸುಸೂತ್ರವಾಗಿ ನಡೆದಿತ್ತು. ಆದರೆ ಈ ವೇಳೆ ಬಂದ ಮಳೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ …
Read More »G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ.
ನವದೆಹಲಿ: G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ. ಹಿಂದೆಂದೂ ಕಾಣದಷ್ಟು ಘೋಷಣೆಗಳಿಗೆ ಸಭೆಯ ಎಲ್ಲ ಸದಸ್ಯರಿಂದ ಅನುಮೋದನೆ ಪಡೆಯಲಾಗಿದೆ. ರಷ್ಯಾ- ಉಕ್ರೇನ್ ವಿಚಾರದ ಬಗ್ಗೆ ಅತ್ಯಂತ ಸಮಚಿತ್ತದ ನಿರ್ಣಯ ಕೈಗೊಳ್ಳುವಲ್ಲಿ ಜಿ-20 ಅಧ್ಯಕ್ಷತೆ ವಹಿಸಿದ್ದ ಭಾರತ ಯಶಸ್ವಿಯಾಗಿದೆ. ಒಟ್ಟಾರೆ ಶೃಂಗದ ಯಶಸ್ವಿಯಾದ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಭಾರತವನ್ನು ಹೊಗಳಿವೆ. ಜಾಗತಿಕ ದಕ್ಷಿಣದ ಧ್ವನಿ(ಗ್ಲೋಬಲ್ ಸೌತ್)ನ ಗುಣಗಾನ ನಡೆದಿದೆ. ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಕಾಳಜಿ ವಹಿಸುವಲ್ಲಿ ಭಾರತದ …
Read More »ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾದ ಮಹಾನಗರ ಪಾಲಿಕೆ
ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತವು ನಗರದ ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ನಗರದ ಇಂದ್ರಪ್ರಸ್ಥನಗರದಲ್ಲಿರುವ ಜಕ್ಕಿನಹೊಂಡ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ನಗರದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆಯನ್ನು ಕಪಿಲೇಶ್ವರ ಕೆರೆ, ಜಕ್ಕಿನಹೊಂಡ ಕೆರೆ, ಅಂಗೋಲ್ ಕೆರೆ ಮುಂತಾದೆಡೆ ಮಾಡಲಾಗುತ್ತದೆ. ಈ ಎಲ್ಲ ಕೆರೆಗಳ ಸ್ವಚ್ಛತೆ, ಸಣ್ಣಪುಟ್ಟ ದುರಸ್ತಿ, ಬಣ್ಣ ಬಳಿಯುವುದು ಇತ್ಯಾದಿ ಕಾರ್ಯ …
Read More »ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ
ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಬಿಎಂಟಿಸಿ ಹೆಚ್ಚುವರಿ ಬಸ್ಗಳ ಜೊತೆಗೆ ಟ್ರಿಪ್ ಸಂಖ್ಯೆಯಲ್ಲೂ ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ …
Read More »ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಆರನೇ ಹಂತದ ಹೋರಾಟದ ಸಮಾವೇಶದಲ್ಲಿ ಶಾಸಕ ವಿನಯ್ ಕುಲಕರ್ಣಿ ಭಾಗಿ
ಚಿಕ್ಕೋಡಿ (ಬೆಳಗಾವಿ): ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ ಮಾಡಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ …
Read More »ಶಕ್ತಿ ಯೋಜನೆ’ಯಿಂದ ನಷ್ಟ, ಬಂದ್ ಕರೆ: ನಾಳೆ ಆಟೋ, ಕ್ಯಾಬ್, ಖಾಸಗಿ ಬಸ್ ಸೇವೆ ಇರಲ್ಲ
ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದಾರೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ …
Read More »
Laxmi News 24×7