ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್ …
Read More »ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ. ಅನುದಾನ ನೀಡಲಾಗಿದೆ. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ. ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …
Read More »ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಾಟ್ಸ್‌ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …
Read More »ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ
ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ …
Read More »ನಾಳೆ ‘ಆದಿತ್ಯ-ಎಲ್1’ ಉಡ್ಡಯನ: ಇಸ್ರೋ ತಿಳಿಸಿದ 3 ಸಂಗತಿಗಳಿವು..
ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಂಶೋಧನಾ ಸಂಸ್ಥೆಯ (ಇಸ್ರೋ) ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ (ಶನಿವಾರ) ಬೆಳಗ್ಗೆ 11:50ಕ್ಕೆ ನೌಕೆ ನಭಕ್ಕೆ ಚಿಮ್ಮಲಿದೆ. ಇದಕ್ಕೂ ಮುನ್ನ ದಿನವಾದ ಇಂದು ಇಸ್ರೋ ಕೆಲ ವಾಸ್ತವ ಸಂಗತಿಗಳನ್ನು ತಿಳಿಸಿದೆ. ಆದಿತ್ಯ-ಎಲ್1 ಸೂರ್ಯನ ಸಮಗ್ರ ಅಧ್ಯಯನಕ್ಕೆ ಮೀಸಲಾದ ನೌಕೆ. ಸ್ಥಳೀಯವಾಗಿ ಅಭಿವೃದ್ಧಿ ಪಡಿಸಲಾದ 7 ವಿಭಿನ್ನವಾದ ಪೇಲೋಡ್‌ಗಳನ್ನು (ಉಪಕರಣ) ಹೊಂದಿದೆ. ಏಳರ ಪೈಕಿ …
Read More »ನಟ ಗಣೇಶ್ ಅವರಿಗೆ ಮನೆ ನಿರ್ಮಿಸಲು ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು : ಬಂಡೀಪುರ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ನಟ ಗಣೇಶ್ ಕಿಶನ್ ಅವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್ ಕಿಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …
Read More »ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ
ನವದೆಹಲಿ: ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್-2023 ಫೈನಲ್‌ನ (Chess World Cup Final 2023) ಟೈ ಬ್ರೇಕರ್ನಲ್ಲಿ ಅಮೋಘ ಪ್ರದರ್ಶನದ ಹೊರತಾಗಿಯೂ ವಿರೋಚಿತ ಸೋಲನುಭವಿಸಿದ ಚೆಸ್ ಯುವ ಗ್ರ್ಯಾಂಡ್ ಮಾಸ್ಟರ್ ಭಾರತದ ಆರ್.ಪ್ರಜ್ಞಾನಂದ (Praggnanandhaa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ. ಪ್ರಜ್ಞಾನಂದಗೆ ವಿಶೇಷ ಸಂದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಜ್ಞಾನಂದ ಕುಟುಂಬವನ್ನ ಭೇಟಿ ಮಾಡಿದ ಪ್ರಧಾನಿ ಮೋದಿ, ಕುಟುಂಬದೊಂದಿಗೆ ನಿಮ್ಮನ್ನ ಭೇಟಿಯಾಗಿದ್ದು ತುಂಬಾ …
Read More »ಶಿವಮೊಗ್ಗದಲ್ಲಿ ಇಂದಿನಿಂದ ಲೋಹದ ಹಕ್ಕಿಗಳ ಹಾರಾಟ
ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ …
Read More »ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಭಾರಿ ಮಳೆ ಕೊರತೆಯಿಂದ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ನಾಶ
ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ. ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ. ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್ ಅಡಿಕೆ, ನೂರಾರು ಎಕರೆ ಮೆಕ್ಕೆ ಜೋಳ, …
Read More »ತಮಿಳು ನೆಲದಲ್ಲಿ ಕಿಂಗ್ ಖಾನ್ ಶಾರುಖ್ ಹವಾ
ಚೆನ್ನೈನ ಶ್ರೀ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜವಾನ್ ಪ್ರೀ ರಿಲೀಸ್ ಈವೆಂಟ್ ನಡೆಯಲಿದ್ದು, ಶಾರುಖ್ ಖಾನ್ ಆಗಮಿಸಿದ್ದಾರೆ. ಬಾಲಿವುಡ್ ಕಿಂಗ್ ಖಾನ್ ಶಾರುಖ್ ಮತ್ತೊಮ್ಮೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲು ಸಜ್ಜಾಗಿದ್ದಾರೆ. ಪಠಾಣ್ ಬಳಿಕ ಮತ್ತೊಂದು ಆಯಕ್ಷನ್ ಪ್ಯಾಕ್ಡ್ ಸಿನಿಮಾದೊಂದಿಗೆ ಗಲ್ಲಾಪೆಟ್ಟಿಗೆ ದಾಖಲೆಗಳನ್ನು ಮುರಿಯಲು ಬರುತ್ತಿದ್ದಾರೆ. ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಜವಾನ್’. ಸೆಪ್ಟೆಂಬರ್ 7 ರಂದು ವಿಶ್ವಾದ್ಯಂತ ಚಿತ್ರಮಂದಿಗಳಲ್ಲಿ ಜವಾನ್ ಬಿಡುಗಡೆ ಆಗಲಿದ್ದು, ಪ್ರಮೋಶನ್ ವರ್ಕ್ ಜೋರಾಗೇ ನಡೆಯುತ್ತಿದೆ. …
Read More »