Breaking News

ರಾಷ್ಟ್ರೀಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ

ಬೆಂಗಳೂರು: ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ. ನೂರು ದಿನಗಳಲ್ಲಿ ಪಂಚ ಗ್ಯಾರಂಟಿಗಳ ಅನುಷ್ಠಾನ ಕೇಂದ್ರೀಕರಿಸಿ ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಾದರಿ ಅಭಿವೃದ್ಧಿ ಆಡಳಿತ ನೀಡಲು ಕಸರತ್ತು ನಡೆಸುತ್ತಿದೆ.   ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದು ನೂರು ದಿನಗಳನ್ನು ಪೂರೈಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತ ಗಳಿಸಿ ಕರುನಾಡ ಅಧಿಕಾರ ಹಿಡಿದ ಕಾಂಗ್ರೆಸ್ …

Read More »

ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆ ಯಾದಗಿರಿಯ ಇಬ್ಬರು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಮತ್ತು ಪ್ರಜ್ಞಾನ್ ಎಂದು ನಾಮಕರಣ

ಯಾದಗಿರಿ : ಭಾರತದ ಬಹುನಿರೀಕ್ಷಿತ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ. ವಿಕ್ರಮ್ ಲ್ಯಾಂಡರ್​ ಚಂದ್ರ ಮೇಲ್ಮೈ ಮೇಲೆ ಸಾಫ್ಟ್​ ಲ್ಯಾಂಡಿಂಗ್ ಮಾಡಿದೆ. ವಿಕ್ರಮ್ ಲ್ಯಾಂಡರ್​ ಚಂದ್ರನ ಮೇಲೆ ಇಳಿದ ಕೆಲವೇ ಗಂಟೆಗಳಲ್ಲಿ, ಲ್ಯಾಂಡರ್​ನಿಂದ ಪ್ರಜ್ಞಾನ್​ ರೋವರ್​ ಹೊರಬಂದಿದೆ. ಸದ್ಯ ವಿಕ್ರಮ್​ ಲ್ಯಾಂಡರ್​ ಮತ್ತು ಪ್ರಗ್ಯಾನ್​ ರೋವರ್​ ಚಂದ್ರನ ಅನ್ವೇಷಣೆಯನ್ನು ಪ್ರಾರಂಭಿಸಿದೆ. ಈ ಸಂಬಂಧ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಐತಿಹಾಸಿಕ ಚಂದ್ರಯಾನದ ಸವಿನೆನಪಿಗಾಗಿ ಇಬ್ಬರು ಪೋಷಕರು ತಮ್ಮ ನವಜಾತ …

Read More »

ಬೆಳಗಾವಿ ಸಸ್ಯ ಸಂತೆ: ಗಮನ ಸೆಳೆದ ದುಬಾರಿ ಮಿಯಾಜಾಕಿ ಮಾವಿನ ಸಸಿ

ಬೆಳಗಾವಿ : ತೋಟಗಾರಿಕೆ ಬೆಳೆ ಬೆಳೆಯುವ ರೈತರು ಹಾಗೂ ಮನೆ ಮುಂದೆ ಮತ್ತು ಟೆರಸ್ ಮೇಲೆ ಕೈತೋಟ ನಿರ್ಮಾಣ ಮಾಡುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ ನಿನ್ನೆಯಿಂದ ಮೂರು ದಿನ ಆಯೋಜಿಸಿರುವ ಸಸ್ಯ ಸಂತೆಗೆ ಚಾಲನೆ ಸಿಕ್ಕಿದ್ದು, ತರಹೇವಾರಿ‌ ಸಸಿಗಳು ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು, ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್​ನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿರುವ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಮತ್ತು ತಾಳೆ ಬೆಳೆ ಸಸಿ ವಿತರಣೆ …

Read More »

ದೂದ್​ ಪೇಡಾ ದಿಗಂತ್ ನಟನೆಯ ‘ಪೌಡರ್​’ ಸಿನಿಮಾದ ಮುಹೂರ್ತ ಸಮಾರಂಭ, ಕಿಚ್ಚ ಸುದೀಪ್​ ಸಾಥ್​

ದೂದ್​ ಪೇಡಾ ದಿಗಂತ್ ನಟನೆಯ ‘ಪೌಡರ್​’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್​ ಪೇಡಾ ದಿಗಂತ್​. ಫಿಟ್ನೆಸ್​ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್​ ಹಂಕ್​ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಚಿತ್ರಕ್ಕೆ ‘ಪೌಡರ್​’ ಎಂದು ವಿಭಿನ್ನವಾಗಿ ಟೈಟಲ್​ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ …

Read More »

ಮೋದಿ ಸ್ವಾಗತಕ್ಕೆ ಸಿಎಂ, ಡಿಸಿಎಂ, ರಾಜ್ಯಪಾಲರು ಯಾಕೆ ಬರಲಿಲ್ಲ?: ಕಾರಣ ತಿಳಿಸಿದ ಪ್ರಧಾನಿ

ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಭೇಟಿ ವೇಳೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಪ್ರಥಮ ಪ್ರಜೆಯಾದ ರಾಜ್ಯಪಾಲರು, ಮುಖ್ಯಮಂತ್ರಿಗಳು ಅಥವಾ ಹಿರಿಯ ಸಚಿವರು ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಮಾಡಬೇಕು. ಆದರೆ, ಇಂದು ಹೆಚ್​ಎಎಲ್ ನಲ್ಲಿ ಅಂತಹ ಸ್ವಾಗತ ಕಾಣಲಿಲ್ಲ. ಕೇವಲ ಅಧಿಕಾರಿಗಳು ಮಾತ್ರ ಹಾಜರಿದ್ದರು. ಈ ಕುರಿತಂತೆ ಸ್ವತಃ ಪ್ರಧಾನಿ ಮೋದಿ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ಆಗಮನದ ಸಂದರ್ಭದಲ್ಲಿ ಕಾರ್ಯಕ್ರಮದ ವಿಷಯವಾಗಿ ಎಂದು ಪಿಎಂ ಕಚೇರಿಯಿಂದ ಮಾಹಿತಿ ಬಂದ ಕಾರಣದಿಂದಾಗಿಯೇ ರಾಜ್ಯ ಸರ್ಕಾರ …

Read More »

ಪ್ರಾರ್ಥನೆ ಸಲ್ಲಿಸುವುದರಿಂದ ಅಪಾಯವಿದೆ’.. ಅರ್ಜಿ ವಜಾಗೊಳಿಸಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು : ವಸತಿ ಪ್ರದೇಶದ ಜಾಗವನ್ನು ಪಾರ್ಥನಾ ಸಭಾಂಗಣವಾಗಿ ಬಳಕೆ ಮಾಡುವುದನ್ನು ಪ್ರಶ್ನಿಸಿ ಬೆಂಗಳೂರು ನಗರದ ಎಚ್‌ಬಿಆರ್ ಬಡಾವಣೆಯ ನೂರಾರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸ್ಯಾಮ್ ಪಿ ಫಿಲಿಪ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಅರ್ಜಿಯನ್ನು ಕೆಲವು ಊಹೆ ಹಾಗೂ ತಪ್ಪು ಕಲ್ಪನೆಗಳಿಂದಾಗಿ …

Read More »

‘ಜೈ ಜವಾನ್, ಜೈ ವಿಜ್ಞಾನ,’ ಇಸ್ರೋ ವಿಜ್ಞಾನಿಗಳನ್ನು ಮನಸಾರೆ ಶ್ಲಾಘಿಸಿದ ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು.     ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಮಹಿಳೆಯರಿಗೆ ಅರಿಶಿಣ, ಕುಂಕುಮ ವಿತರಣೆ

ಬೆಳಗಾವಿ: ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಲಾಯಿತು. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಿದರು. ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯನಿರ್ವಾಹಕ ಅಧಿಕಾರಿ ಎಸ್​ಪಿಬಿ‌ ಮಹೇಶ ಸೇರಿ ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಉಡುಗೊರೆ ಪಡೆದುಕೊಂಡ ಭಕ್ತೆಯರು ಸರ್ಕಾರಕ್ಕೆ ಕೃತಜ್ಞತೆ …

Read More »

ಕಾವೇರಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೇಬಲ್​​ ಹೃದಯಾಘಾತದಿಂದ ಸಾವು

ಚಾಮರಾಜನಗರ : ಕಾವೇರಿ ನೀರು ಬಿಡುಗಡೆ ಸಂಬಂಧ ಕಾನೂನು‌ ಸುವ್ಯವಸ್ಥೆಗಾಗಿ ಕೊಳ್ಳೇಗಾಲಕ್ಕೆ ಬಂದಿದ್ದ ಕೆಎಸ್‌ಆರ್‌ಪಿ ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು (ಶುಕ್ರವಾರ) ನಡೆದಿದೆ. ಮೋಹನ್ (44) ಮೃತರು. ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ಮೋಹನ್ ಸಂಬಂಧಿಕರುಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ನಡೆಯದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್‌ಆರ್‌ಪಿ ಮೈಸೂರು ಬೆಟಾಲಿಯನ್ 23 ಸಿಬ್ಬಂದಿ ಕೊಳ್ಳೇಗಾಲದಲ್ಲಿ ಕರ್ತವ್ಯಕ್ಕೆಂದು ಎರಡು ದಿನಗಳ ಹಿಂದೆ ಆಗಮಿಸಿ …

Read More »

ಪಿಡಿಒ ವರ್ಗಾವಣೆ ಕರಡು ಪಟ್ಟಿಗಳು ಮುಖ್ಯಮಂತ್ರಿ ಅವರ ಅನುಮೋದನೆಗೂ ಮುನ್ನವೇ ಸೋರಿಕೆಯಾಗಿವೆ.

ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಲ್ಲಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆ ಕರಡು ಪಟ್ಟಿಗಳು ಮುಖ್ಯಮಂತ್ರಿ ಅವರ ಅನುಮೋದನೆಗೂ ಮುನ್ನವೇ ಸೋರಿಕೆಯಾಗಿವೆ.   ಇಲಾಖೆಯ ಹಿರಿಯ ಅಧಿಕಾರಿಗಳ ಸಾಮಾಜಿಕ ಜಾಲತಾಣಗಳಲ್ಲಿ ಪಿಡಿಒ ವರ್ಗಾವಣೆಯ ಕರಡು ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆ. 223 ಪಿಡಿಒಗಳ ವರ್ಗಾವಣೆ ಪ್ರಸ್ತಾವಕ್ಕೆ ಅನುಮೋದನೆ ಕೋರಿ ಸಚಿವರು ಸಲ್ಲಿಸಿದ್ದ ಪಟ್ಟಿ ಆಗಸ್ಟ್ 21 ರಂದು ಸೋರಿಕೆಯಾಗಿತ್ತು. …

Read More »