ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸಿಎಂ ಸಿದ್ಧರಾಮಯ್ಯಗೆ ಮತ್ತೆ ಪತ್ರ ಬರೆದಿದ್ದು, ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದ್ದಾರೆ. ಶಾಸಕರ ಅಹವಾಲು ಕೇಳುವಂತೆ ಕೋರಿ ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಇದೀಗ ಜೆಸ್ಕಾಂ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಜೊತೆ …
Read More »ತಲೆ ಮೇಲೆ ಕಲ್ಲು ಹೊತ್ತುಕೊಂಡು ಮಂಡ್ಯದಲ್ಲಿ ರೈತರ ಪ್ರತಿಭನೆ.. ಕಾವೇರಿ ಕಿಚ್ಚಿಗೆ ದಳಪತಿಗಳು ಎಂಟ್ರಿ, ಸರ್ಕಾರಕ್ಕೆ ಎಚ್ಚರಿಕೆ
ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಮಂಡ್ಯದಲ್ಲಿ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಹಲವು ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇವತ್ತು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ನಾಯಕರು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರೋ ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …
Read More »ಸ್ನೇಹಿತನನ್ನೇ ಕೊಂದು, ಬೇರೊಬ್ಬರ ಮೇಲೆ ಹಾಕಲು ಯತ್ನಿಸಿ ಸಿಕ್ಕಿಬಿದ್ದ ಖದೀಮರು
ಮೈಸೂರು : ಸ್ನೇಹಿತನ ಕೊಲೆ ಮಾಡಿ, ಕೃತ್ಯವನ್ನು ಮತ್ತೊಬ್ಬರ ಹೆಸರಿಗೆ ಕಟ್ಟಲು ಯತ್ನಿಸಿದ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದ ಸಿನಿಮೀಯ ಶೈಲಿಯ ಪ್ರಕರಣ ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಒಂದೇ ದಿನದಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ : ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಬೀಚನಹಳ್ಳಿಯ ಯುವಕ ಭಾನುಪ್ರಕಾಶ್ ಅಲಿಯಾಸ್ ಸಿದ್ದು ಎಂಬಾತ ಮಹಿಳೆಯೊಬ್ಬರಿಗೆ …
Read More »ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ …
Read More »ಅಕ್ರಮ ಕಂಟ್ರಿ ಪಿಸ್ತೂಲ್ ಹೊಂದಿದ್ದವನ ಬಂಧನ
ವಿಜಯಪುರ ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡು ಹೋಗುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಕಂಟ್ರಿ ಪಿಸ್ತೂಲ್,ಜೀವಂತ ಗುಂಡು ಜಪ್ತಿಗೈದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇವನೂರ ಬಳಿ ದಾಳಿಗೈದಿದ್ದಾರೆ. ಚಡಚಣದ ದೇವರ ನಿಂಬರಗಿ ಗ್ರಾಮದ ಪ್ರಶಾಂತ ನಾವಿ ಬಂಧಿತ ಆರೋಪಿ. ಇನ್ನು ಇಂಡಿಯಿಂದ ಚಿಕ್ಕಬೇವನೂರ ಕಡೆಗೆ ಹೋಗುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿಗೈದು ಒಂದು ಕಂಟ್ರಿ ಪಿಸ್ತೂಲ್, ಏಳು ಜೀವಂತ ಗುಂಡು, …
Read More »ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ
ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್ …
Read More »ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ. ಅನುದಾನ ನೀಡಲಾಗಿದೆ. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ. ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …
Read More »ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಾಟ್ಸ್‌ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …
Read More »ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ
ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ …
Read More »ನಾಳೆ ‘ಆದಿತ್ಯ-ಎಲ್1’ ಉಡ್ಡಯನ: ಇಸ್ರೋ ತಿಳಿಸಿದ 3 ಸಂಗತಿಗಳಿವು..
ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಂಶೋಧನಾ ಸಂಸ್ಥೆಯ (ಇಸ್ರೋ) ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ (ಶನಿವಾರ) ಬೆಳಗ್ಗೆ 11:50ಕ್ಕೆ ನೌಕೆ ನಭಕ್ಕೆ ಚಿಮ್ಮಲಿದೆ. ಇದಕ್ಕೂ ಮುನ್ನ ದಿನವಾದ ಇಂದು ಇಸ್ರೋ ಕೆಲ ವಾಸ್ತವ ಸಂಗತಿಗಳನ್ನು ತಿಳಿಸಿದೆ. ಆದಿತ್ಯ-ಎಲ್1 ಸೂರ್ಯನ ಸಮಗ್ರ ಅಧ್ಯಯನಕ್ಕೆ ಮೀಸಲಾದ ನೌಕೆ. ಸ್ಥಳೀಯವಾಗಿ ಅಭಿವೃದ್ಧಿ ಪಡಿಸಲಾದ 7 ವಿಭಿನ್ನವಾದ ಪೇಲೋಡ್‌ಗಳನ್ನು (ಉಪಕರಣ) ಹೊಂದಿದೆ. ಏಳರ ಪೈಕಿ …
Read More »
Laxmi News 24×7