ಬೆಂಗಳೂರು : ಬಂಡೀಪುರ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ನಟ ಗಣೇಶ್ ಕಿಶನ್ ಅವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್ ಕಿಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …
Read More »ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ
ನವದೆಹಲಿ: ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್-2023 ಫೈನಲ್‌ನ (Chess World Cup Final 2023) ಟೈ ಬ್ರೇಕರ್ನಲ್ಲಿ ಅಮೋಘ ಪ್ರದರ್ಶನದ ಹೊರತಾಗಿಯೂ ವಿರೋಚಿತ ಸೋಲನುಭವಿಸಿದ ಚೆಸ್ ಯುವ ಗ್ರ್ಯಾಂಡ್ ಮಾಸ್ಟರ್ ಭಾರತದ ಆರ್.ಪ್ರಜ್ಞಾನಂದ (Praggnanandhaa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ. ಪ್ರಜ್ಞಾನಂದಗೆ ವಿಶೇಷ ಸಂದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಜ್ಞಾನಂದ ಕುಟುಂಬವನ್ನ ಭೇಟಿ ಮಾಡಿದ ಪ್ರಧಾನಿ ಮೋದಿ, ಕುಟುಂಬದೊಂದಿಗೆ ನಿಮ್ಮನ್ನ ಭೇಟಿಯಾಗಿದ್ದು ತುಂಬಾ …
Read More »ಶಿವಮೊಗ್ಗದಲ್ಲಿ ಇಂದಿನಿಂದ ಲೋಹದ ಹಕ್ಕಿಗಳ ಹಾರಾಟ
ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ …
Read More »ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಭಾರಿ ಮಳೆ ಕೊರತೆಯಿಂದ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ನಾಶ
ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ. ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ. ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್ ಅಡಿಕೆ, ನೂರಾರು ಎಕರೆ ಮೆಕ್ಕೆ ಜೋಳ, …
Read More »ತಮಿಳು ನೆಲದಲ್ಲಿ ಕಿಂಗ್ ಖಾನ್ ಶಾರುಖ್ ಹವಾ
ಚೆನ್ನೈನ ಶ್ರೀ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜವಾನ್ ಪ್ರೀ ರಿಲೀಸ್ ಈವೆಂಟ್ ನಡೆಯಲಿದ್ದು, ಶಾರುಖ್ ಖಾನ್ ಆಗಮಿಸಿದ್ದಾರೆ. ಬಾಲಿವುಡ್ ಕಿಂಗ್ ಖಾನ್ ಶಾರುಖ್ ಮತ್ತೊಮ್ಮೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲು ಸಜ್ಜಾಗಿದ್ದಾರೆ. ಪಠಾಣ್ ಬಳಿಕ ಮತ್ತೊಂದು ಆಯಕ್ಷನ್ ಪ್ಯಾಕ್ಡ್ ಸಿನಿಮಾದೊಂದಿಗೆ ಗಲ್ಲಾಪೆಟ್ಟಿಗೆ ದಾಖಲೆಗಳನ್ನು ಮುರಿಯಲು ಬರುತ್ತಿದ್ದಾರೆ. ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಜವಾನ್’. ಸೆಪ್ಟೆಂಬರ್ 7 ರಂದು ವಿಶ್ವಾದ್ಯಂತ ಚಿತ್ರಮಂದಿಗಳಲ್ಲಿ ಜವಾನ್ ಬಿಡುಗಡೆ ಆಗಲಿದ್ದು, ಪ್ರಮೋಶನ್ ವರ್ಕ್ ಜೋರಾಗೇ ನಡೆಯುತ್ತಿದೆ. …
Read More »ಅಕ್ರಮ ಜಾಹೀರಾತುದಾರರ ವಿರುದ್ಧ 264 ಎಫ್‌ಐಆರ್
ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಸಲು ಪ್ರತಿ ಅಕ್ರಮ ಜಾಹೀರಾತು ಅಳವಡಿಕೆಗೆ 50 ಸಾವಿರ ರೂ ದಂಡ ವಿಧಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ. ಅಲ್ಲದೆ, ಈ ಸಂಬಂಧ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ. ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ …
Read More »9 ಅಡಿ ಉದ್ದದ ಅತಿ ದೊಡ್ಡ ಬಿಳಿ ಹೆಬ್ಬಾವು ಕುಮಟಾದಲ್ಲಿ ಪತ್ತೆ!
ಕಾರವಾರ (ಉತ್ತರ ಕನ್ನಡ) : ಸಾಮಾನ್ಯವಾಗಿ ಕಂದು ಬಣ್ಣದ ಹೆಬ್ಬಾವುಗಳು ಎಲ್ಲೆಂದರಲ್ಲಿ ಕಾಣಸಿಗುತ್ತವೆ. ಆದರೆ ಕುಮಟಾದಲ್ಲಿ 2ನೇ ಬಾರಿಗೆ ಬಿಳಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಭಾರತದಲ್ಲಿ ಈವರೆಗೆ ಸಿಕ್ಕ ಬಿಳಿ ಹೆಬ್ಬಾವಿನ ಪೈಕಿ ಇದು ಅತಿ ದೊಡ್ಡದೆಂದು ಉರಗ ತಜ್ಞರು ಹೇಳುತ್ತಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಹೆಗಡೆ ಗ್ರಾಮದ ಗಾಂಧಿ ನಗರದ ದೇವಿ ನಾರಾಯಣ ಮುಕ್ರಿ ಎಂಬವರ ಮನೆಯ ಅಂಗಳದಲ್ಲಿ ಮಂಗಳವಾರ ಈ ಬಿಳಿ ಹೆಬ್ಬಾವು ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಶುಭ್ರ …
Read More »ಅದ್ಧೂರಿಯಾಗಿ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ‘ಕೈ’ ಪಕ್ಷಕ್ಕೆ ಮತ್ತಷ್ಟು ಹತ್ತಿರವಾದ ಎಸ್.ಟಿ.ಸೋಮಶೇಖರ್
ಬೆಂಗಳೂರು : ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರಿಂದು ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆ ಗೃಹಲಕ್ಷ್ಮಿ ಜಾರಿಗೆ ಅದ್ಧೂರಿ ಕಾರ್ಯಕ್ರಮ ಮಾಡಿದರು. “ಗೃಹಲಕ್ಷ್ಮಿ ಯೋಜನೆ ಜಾರಿಗೆ ನನ್ನದೂ ಕೂಡಾ ಒಂದು ಅಳಿಲು ಸೇವೆ. ನನ್ನ ಕ್ಷೇತ್ರದಲ್ಲಿ ಯೋಜನೆ ಬಗ್ಗೆ ಮಾಹಿತಿ ನೀಡಲು ಏನೆಲ್ಲ ಕ್ರಮ ವಹಿಸಬಹುದೋ ಅದನ್ನು ಮಾಡುತ್ತಿದ್ದೇನೆ ಅಷ್ಟೇ” ಎಂದು ಸಮರ್ಥನೆ ನೀಡಿದರು. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮೋಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ …
Read More »ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್ ಠಾಣೆಗೆ ಬಂದ ತಮ್ಮ
ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …
Read More »ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.
ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …
Read More »
Laxmi News 24×7