Breaking News

ರಾಷ್ಟ್ರೀಯ

ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ:H.D.K.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. …

Read More »

ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು.

ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು. ಹೌದು ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಹತ್ತಿರ ಬತ್ತಿ ಶಿರಾಳ ಗ್ರಾಮದಲ್ಲಲ್ಲಿ ಪ್ರತಿವರ್ಷ ನಾಗರ ಪಂಚಮಿ ಯಂದು ನಿಜ ನಾಗರ ಹಾವಿನೊಂದಿಗೆ ಆಚರಿಸುತ್ತಾರೆ. ಒಂದು -ಎರೆಡು ದಿನ ಮುಂಚೆ ಕಾಡಿಗೆ ಹೋಗಿ ಸಾವಿರಾರು ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ, ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ, ಮಣ್ಣಿನ ಮಡಿಕೆಯಲ್ಲಿ …

Read More »

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More »

ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು.

ಬೆಂಗಳೂರು : ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ​ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್​ ಆದೇಶದಿಂದಾಗಿ ರೂಪಾ ಮೌದ್ಗಿಲ್​ ಪ್ರಕರಣದ ವಿಚಾರಣೆ ಎದುರಿಸಬೇಕಾದ …

Read More »

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ

ಬೆಂಗಳೂರು : ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …

Read More »

ಚುನಾವಣೆ ಮುಹೂರ್ತಕ್ಕೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್​!

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್​ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು. ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್​ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ. ಬಿಆರ್​ಎಸ್​ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ …

Read More »

ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!

ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ …

Read More »

ನಮಗೆ ಒಟ್ಟು 124 ಟಿಎಂಸಿ ನೀರು ಬೇಕು; ಈಗ ಇರುವುದು 55 ಟಿಎಂಸಿ ಮಾತ್ರ: ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …

Read More »

ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು …

Read More »

ಸದ್ದಿಲ್ಲದೇ ‘ಆಪರೇಷನ್ ಹಸ್ತ’: ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ತೊರೆದು ತಮ್ಮ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಾಸಕರು ಬಿಜೆಪಿ ತೊರೆಯದಂತೆ ನಿಗಾ ವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಬೆನ್ನಲ್ಲೇ ಸದ್ದಿಲ್ಲದೇ ‘ಆಪರೇಷನ್ ಹಸ್ತ’ ಕಾರ್ಯಾಚರಣೆ ಬಿರುಸುಗೊಂಡಿದೆ.   ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯದಂತೆ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ …

Read More »