Breaking News

ರಾಷ್ಟ್ರೀಯ

ಈರುಳ್ಳಿ ರಫ್ತು ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ : ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಅಭಾವ ತಗ್ಗಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ ರಫ್ತಾಗುವ ಈರುಳ್ಳಿಗೆ ಶೇ.40ರಷ್ಟು ಸುಂಕ ವಿಧಿಸಿದೆ. ರಫ್ತು ಸುಂಕವನ್ನು ಡಿಸೆಂಬರ್ 31ರ ವರೆಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ನವದೆಹಲಿಯಲ್ಲಿ ಶನಿವಾರ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ 37 ರೂ ಇತ್ತು. ಈ ದರವು ಸೆಪ್ಟೆಂಬರ್​ದಲ್ಲಿ ಏರಿಕೆ ಆಗುವ ಸಾಧ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ …

Read More »

ಉತ್ತರ ಕನ್ನಡದಲ್ಲಿ ಗೋವಾ ಸರ್ಕಾರದ ‘ಮಿಷನ್ ರೇಬೀಸ್’ ಯೋಜನೆ ಅನುಷ್ಠಾನ

ಕಾರವಾರ (ಉತ್ತರಕನ್ನಡ) : ಗೋವಾ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರ ನಡುವೆ ಗಡಿ ಹಂಚಿಕೊಂಡಿರುವ ಕರ್ನಾಟಕದ ತಾಲೂಕುಗಳಿಗೆ ಅಲ್ಲಿನ ಸರ್ಕಾರ ತನ್ನ ಯೊಜನೆಯೊಂದನ್ನು ವಿಸ್ತರಿಸಿದೆ. ಗಡಿ ತಾಲೂಕುಗಳಲ್ಲಿ ಮಿಷನ್ ರೇಬೀಸ್ ಅನುಷ್ಠಾನ ಮಾಡುತ್ತಿದೆ. ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯೊಂದಿಗೆ ರೇಬೀಸ್ ಚುಚ್ಚುಮದ್ದು ನೀಡುವಂತೆ ಅನೇಕ ವರ್ಷಗಳಿಂದ ಜನರು ಆಗ್ರಹಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಷ್ಟೇ ಕರ್ನಾಟಕ ಸರ್ಕಾರ ಈ …

Read More »

ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು: ವಿನಯ ಕುಲಕರ್ಣಿ

ವಿಜಯಪುರ: ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ. ಎರಡುವರೆ ವರ್ಷದಲ್ಲಿ ಪೂರ್ಣ ಟೀಂ ಬದಲಾಗಲಿದೆ. ಆಗ ಉಳಿದವರಿಗೂ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ. 135 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ 34 ಶಾಸಕರಿಗೆ ಸಚಿವ ಸ್ಥಾನ ದೊರೆಯುತ್ತದೆ. ಹೀಗಾಗಿ ಎಲ್ಲರಿಗೂ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹಾವೇರಿ ನ್ಯಾಯಾಲಯ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನ ಅನುಭವಿಸಿದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 19 ಸಾವಿರ ರೂಪಾಯಿ ದಂಡ ಮತ್ತು 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.   ಹಾವೇರಿ ಜಿಲ್ಲಾ ಶಿಗ್ಗಾಂವಿ ತಾಲೂಕಿನ ವನಹಳ್ಳಿ ಲಕ್ಷ್ಮಿ ಕಬ್ಬೇರ ಶಿಕ್ಷೆಗೆ ಒಳಗಾದ ಮಹಿಳೆ. ಇವರು ಮೂಲತಃ ಗಂಗಾಮತಕ್ಕೆ ಸೇರಿದವರು. ಈ ಮಹಿಳೆ ಶಿಗ್ಗಾಂವಿ …

Read More »

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ , ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು …

Read More »

ದಸರಾ 2023: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, …

Read More »

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ

ಬೆಂಗಳೂರು: 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಇಂದು ಉಧ್ಘಾಟನೆ ಮಾಡಿದರು. ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇದಾಗಿದ್ದು ನೂತನ ತಂತ್ರಜ್ಞಾನಕ್ಕೆ ನಾಂದಿಹಾಡಲಾಯಿತು. ಎಲ್&ಟಿ ಮೂಲಕ ಈ ಅಂಚೆ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು ಐಐಟಿ ಚೆನ್ನೈ ಪ್ರಸ್ತುತ ಯೋಜನೆಯಲ್ಲಿ ತಾಂತ್ರಿಕ ಮಾರ್ಗದರ್ಶನ ಒದಗಿಸಿದೆ. ಒಟ್ಟು 1021 ಚದರ ಅಡಿಗಳ ವಿಸ್ತೀರ್ಣ ಹೊಂದಿರುವ ಈ ಕಟ್ಟವನ್ನು 3ಡಿ ಕಾಂಕ್ರೀಟ್ …

Read More »

ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Read More »

ಪ್ರತ್ಯೇಕ ಲಿಂಗಾಯತ ಧರ್ಮ‌ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್​ ಕುಲಕರ್ಣಿ

ಬೆಳಗಾವಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ವೀರಶೈವ ಮಹಾಸಭೆಯಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅದರಲ್ಲಿನ ಬಹಳಷ್ಟು ಜನ ನಮಗೆ ಬೆಂಬಲ ಕೂಡ ಕೊಟ್ಟಿದ್ದರು. ಈಗ ನಾವೆಲ್ಲಾ ಒಂದಾಗಿ ಮತ್ತೆ ಹೋರಾಟ ಪ್ರಾರಂಭ ಮಾಡೋಣ ಎಂದು ಮಾತನಾಡಿದ್ದೇವೆ ಅಂತಾ ಮಾಜಿ ಸಚಿವ ವಿನಯ್​ ಕುಲಕರ್ಣಿ ಹೇಳಿದರು. ಬೆಳಗಾವಿಯ‌ಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನನ್ನು ಯಾರೂ ಹೈಜಾಕ್ ಮಾಡಿಲ್ಲ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ರಾಜ್ಯದ ಮುಖಂಡರನ್ನು ಮೊನ್ನೆ …

Read More »

ಬಾಕ್ಸ್​ ಆಫೀಸ್​ನಲ್ಲಿ Gadar 2 vs OMG 2 ಫೈಟ್​: 7ನೇ ದಿನದ ಕಲೆಕ್ಷನ್​ ಎಷ್ಟು?

Gadar 2 vs OMG 2- Collection Day 7: ಬಿಡುಗಡೆಯಾದ ಏಳನೇ ದಿನದಂದು ಗದರ್​ 2 ಮತ್ತು ಓಎಂಜಿ 2 ಸಿನಿಮಾಗಳು ಗಳಿಸಿದೆಷ್ಟು? ಆಗಸ್ಟ್​ 11ರಂದು ಬಿಡುಗಡೆಯಾದ ಬ್ಲಾಕ್​ಬಸ್ಟರ್​ ಸೀಕ್ವೆಲ್​ಗಳು ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿವೆ. ಸೂಪರ್​ಸ್ಟಾರ್​ ಸನ್ನಿ ಡಿಯೋಲ್​ ಅಭಿನಯದ ಗದರ್​ 2 ಮತ್ತು ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ನಟನೆಯ ಓಎಂಜಿ 2 ಸಿನಿಮಾಗೆ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್​ ಸಿಕ್ಕಿದೆ. ವಾರದ ದಿನಗಳಲ್ಲಿಯೂ ಸಿನಿ ಪ್ರೇಮಿಗಳನ್ನು ಥಿಯೇಟರ್​ಗೆ …

Read More »