ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿ ಬೇಸತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಪೊಲೀಸ್ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ. 57 ಗುತ್ತಿಗೆದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ನಿನ್ನೆ ಹಾಜರಾಗಿದ್ದ 16 ಜನ ಗುತ್ತಿಗೆದಾರರನ್ನು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸಿದ್ದರು. “ಇಂದು ಕೆಲವೊಂದಿಷ್ಟು ಗುತ್ತಿಗೆದಾರರು ಹಾಜರಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ. 28 ತಿಂಗಳಿನಿಂದ …
Read More »ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಶಾಸಕರ ಜೊತೆ ಬಿಎಸ್ವೈ ಮಹತ್ವದ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲ ದಿನಗಳಿಂದ ತಲೆದೋರಿರುವ ಗೊಂದಲಗಳ ನಿವಾರಣೆಗೆ ಖುದ್ದು ಪಕ್ಷದ ಹಿರಿಯ ನಾಯಕ ಹಾಗೂ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಖಾಡಕ್ಕಿಳಿದಿದ್ದು, ಬೆಂಗಳೂರು ಶಾಸಕರ ಸಭೆ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಬೆಂಗಳೂರು ಬಿಜೆಪಿ ಶಾಸಕರ ಸಭೆ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ …
Read More »ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ
ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಪ್ರತಿಭಟನೆ ನಡೆಸಿದರು ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ. ಸಂತೋಷ ರಾವ್ ಅವರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡಲಾಗಿದೆ. ಈಗ ಅವರನ್ನು ಅಮಾಯಕ ಎಂದು ಬಿಡುಗಡೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ಹಾಗೂ ಸಂತೋಷ ರಾವ್ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ. ಎಂದು …
Read More »ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ
ಶಹಾಪುರ ಎಸ್ ಬಿಐ ವೃತ್ತದಿಂದ ಹಳೆ ಪಿಬಿ ರಸ್ತೆಯ ಅವೈಜ್ಞಾನಿಕವಾಗಿ ರಸ್ತೆ ಅಗಲೀಕರಣ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ರಾಜಕುಮಾರ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಹಾಪುರದ ಎಸ್ ಬಿಐ ವೃತ್ತದಿಂದ ಹಳೆ ಪಿ.ಬಿ.ರಸ್ತೆಯ ಅಗಲೀಕರಣದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸ್ಮಾಟ್೯ ಸಿಟಿಯಿಂದ ರಸ್ತೆ ಅಗಲೀಕರಣ ಮಾಡಲಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ರಸ್ತೆ ನಿರ್ಮಾಣ …
Read More »ಬಿಜೆಪಿ ಮತ್ತು ಜೆಡಿಎಸ್ನಿಂದ 10 ರಿಂದ 15 ಮಂದಿ ಕಾಂಗ್ರೆಸ್ ಸೇರಲಿದ್ದಾರೆ: ಚಲುವರಾಯಸ್ವಾಮಿ
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 …
Read More »ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ
ಬೆಂಗಳೂರು : ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆಯುತ್ತಿರುವ ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೈಸ್ ವಿಚಾರವಾಗಿ ಸಂಸದ ಡಿ ಕೆ ಸುರೇಶ್ …
Read More »ಕಾಂಗ್ರೆಸ್ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭ
ಬೆಂಗಳೂರು: ಕಾಂಗ್ರೆಸ್ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭವಾಗಿದೆ. ಈ ಬಾರಿ ವಿಧಾನ ಪರಿಷತ್ ನಾಮನಿರ್ದೇಶನ ವಿಚಾರದಲ್ಲಿ ಜಟಾಪಟಿ ಶುರುವಾಗಿದ್ದು, ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಕ್ಷೇಪಿಸಿ ಎಐಸಿಸಿ ಅಧ್ಯಕ್ಷರಿಗೆ ನಾಲ್ವರು ಸಚಿವರು ಪತ್ರ ಬರೆದಿದ್ದಾರೆ. ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ ಹಾಗು ಆರ್.ಬಿ.ತಿಮ್ಮಾಪುರ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಸುಧಾಮ್ ದಾಸ್ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಯಾಗಿ ಇದ್ದವರು. ಕೆಲ ವರ್ಷಗಳ ಹಿಂದೆ ಏಕಾಏಕಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 2023ಕ್ಕೆ ಮಾಹಿತಿ ಆಯುಕ್ತರ …
Read More »ಯಾರೂ ಪಕ್ಷ ಬಿಟ್ಟು ಹೋಗಲ್ಲ, ಮೈತ್ರಿ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ಕೊಟ್ಟ ಗುತ್ತಿಗೆದಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದ್ರೆ, ಗುತ್ತಿಗೆದಾರರನ್ನು ಹೆದರಿಸಿ, ಬೆದರಿಸಿ ಕೇಸ್ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, “ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?. ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ?, ಸದ್ಯದಲ್ಲೇ ಪ್ರತಿಪಕ್ಷ ನಾಯಕನ ನೇಮಕವಾಗುತ್ತದೆ. ಚಲುವರಾಯಸ್ವಾಮಿ ಸೇರಿದಂತೆ …
Read More »ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಖಂಡಿಸಿ ರೈತರ ಪ್ರತಿಭಟನೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಥ್
ಮಂಡ್ಯ : ತಮಿಳುನಾಡಿಗೆ ಕಾವೇರಿಯಿಂದ ಹೆಚ್ಚುವರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಜಿಲ್ಲೆಯಲ್ಲಿ ರೈತರು ಪ್ರತಿಭಟಿಸಿದ್ದಾರೆ. ಕಾವೇರಿಯಿಂದ ತಮ್ಮ ಪಾಲಿಗೆ ಬರಬೇಕಾದ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕಳೆದ ಹಲವು ದಿನಗಳಿಂದ ಕೆಆರ್ಎಸ್ ಜಲಾಶಯದಿಂದ ಕಾವೇರಿ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ಮಧ್ಯೆ ತಮಿಳುನಾಡು ಸರ್ಕಾರ ತಗಾದೆ ತೆಗೆದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೀಗಾಗಿ ಜಲಾಶಯದಿಂದ ಕಾವೇರಿಯ …
Read More »ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಕೆಜಿಗೆ 100 ರಿಂದ 140 ರೂ ತಲುಪಿದೆ.
ಬೆಂಗಳೂರು: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ. …
Read More »