ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆಗೆ ರಜೆ ಸಿಕ್ಕಿರುವ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಲು ಹೋದ ಯುವಕನೊಬ್ಬ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪ ಇಂದು ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಇಂದು ಸ್ವಾತಂತ್ರ್ಯ ದಿನಾಚರಣೆಯಾಗಿದ್ದು, ಬೆಂಗಳೂರಿನಿಂದ ಆಗಮಿಸುವ ಕೆಲವರು ಏರ್ಪೋರ್ಟ್ ರಸ್ತೆ ಕಡೆ ಬಂದು ವ್ಹೀಲಿಂಗ್ ಮಾಡ್ತಾರೆ. ಹೀಗೆ ದೇವನಹಳ್ಳಿಯಿಂದ ನಂದಿಬೆಟ್ಟದ …
Read More »ಶಿಕಾರಿಪುರದ ನಳಿನಕೊಪ್ಪ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಶಾಲೆಯ ಮುಖ್ಯ ಶಿಕ್ಷಕಿ ಅಮಾನತು
ಶಿವಮೊಗ್ಗ: ಇಂದು ದೇಶಾದ್ಯಂತ ಎಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಆದ್ರೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲಾ ಸರ್ಕಾರಿ ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಇಲಾಖೆಯ ಕಚೇರಿಯಲ್ಲಿ ಕಡ್ಡಾಯವಾಗಿ …
Read More »ಬಸನಗೌಡ ಯತ್ನಾಳ್ ಅವರ ಮನಸ್ಥಿತಿ ಸರಿ ಇಲ್ಲ; ಸಚಿವ ಮಂಕಾಳು ವೈದ್ಯ ತಿರುಗೇಟು
ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು …
Read More »ತಾಯಿಯೊಬ್ಬಳು ತನ್ನ ಮಗನನ್ನೇ ಕೊಂದ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಅಪರಾಧಿಗೆ ಚಿಕ್ಕೋಡಿ ಕೋರ್ಟ್ ದಂಡಸಹಿತ ಜೈಲುಶಿಕ್ಷೆ ವಿಧಿಸಿದೆ.
ಚಿಕ್ಕೋಡಿ (ಬೆಳಗಾವಿ) : ತನ್ನ ಅನೈತಿಕ ಸಂಬಂಧ ಗೊತ್ತಾಯಿತು ಎಂದು ಮಗನನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ ಕರಿಗಾರ (31) ಶಿಕ್ಷೆಗೊಳಗಾದವರು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (22/10/2019ರಲ್ಲಿ) ನಡೆದ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ …
Read More »ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ
ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು …
Read More »ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ವಿಶ್ವಜ್ಯೋತಿ ಕನಕದಾಸರ ನೂರೆಂಟು ನಾಮಾವಳಿಯ …
Read More »ಆಕ್ಷೇಪಾರ್ಹ ಪದ ಬಳಕೆ ಆರೋಪ; ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು
ಬೆಂಗಳೂರು : ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ರಾಜ್ಯ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದಿವಾಕರ್ ಎಂಬವರು ನೀಡಿದ ದೂರಿನ ಮೇರೆಗೆ ಸಚಿವರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡುವಾಗ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸರಿಗೆ ನೀಡಲಾಗಿದೆ. ಸಚಿವರು ಮಾತನಾಡಿರುವ ಸ್ಥಳ …
Read More »SBI ಗ್ರಾಹಕರೇ, ಯಾವುದೇ ಗ್ಯಾರೆಂಟಿ ಇಲ್ಲದೇ ಬ್ಯಾಂಕ್ 50 ಸಾವಿರ ಸಾಲ ನೀಡ್ತಿದೆ, ನೀವೂ ಅರ್ಜಿ ಸಲ್ಲಿಸಿ
ಕೆಲವರು ತಾವು ಮಾಡುತ್ತಿರುವ ಉದ್ಯೋಗಕ್ಕಿಂತ ವ್ಯಾಪಾರದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಇನ್ನು ಕೆಲವರು ಯಾವುದಾದರೂ ಸಣ್ಣ ವ್ಯಾಪಾರ ಮಾಡಿದರೆ ಉತ್ತಮ ಎಂದು ಭಾವಿಸುತ್ತಾರೆ. ಆದ್ರೆ, ಹಣದ ಸಮಸ್ಯೆ ಅವರನ್ನ ಹಿಂದೆ ಸರಿಯುವಂತೆ ಮಾಡುತ್ತೆ. ಅಂತಹವರ ಪಟ್ಟಿಯಲ್ಲಿ ನೀವೂ ಇದ್ದೀರಾ.? ಹಾಗಿದ್ರೆ, ನಿಮಗಿದು ಗುಡ್ ನ್ಯೂಸ್ ಆಗುವುದು. ನಿಮಗಾಗಿ SBI ಮುದ್ರಾ ಸಾಲವನ್ನ ಒದಗಿಸಲಾಗಿದೆ. ಈ ಯೋಜನೆಯ ಮೂಲಕ ತಕ್ಷಣವೇ 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯುವ ಸೌಲಭ್ಯ ಒದಗಿಸುತ್ತಿದೆ. …
Read More »ಹರ್ ಘರ್ ತಿರಂಗ ವೆಬ್ಸೈಟ್ ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರವನ್ನು ಪಡೆಯುವುದು ಹೇಗೆ ?
ನವದೆಹಲಿ:ಭಾರತವು ನಾಳೆ 76 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲು ಸಿದ್ಧವಾಗಿದೆ. ಈ ದಿನವನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಅಧಿಕೃತ ವೆಬ್‌ಸೈಟ್ ಪ್ರಕಾರ, ಹರ್ ಘರ್ ತಿರಂಗ ವೆಬ್‌ಸೈಟ್‌ನಲ್ಲಿ ಸುಮಾರು 40 ಮಿಲಿಯನ್ ಜನರು ತಮ್ಮ ಸೆಲ್ಫಿಗಳನ್ನು ಉಪಕ್ರಮದ ಭಾಗವಾಗಿ ಅಪ್‌ಲೋಡ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರನ್ನು ಅಭಿಯಾನದ ಭಾಗವಾಗುವಂತೆ ಆಹ್ವಾನಿಸಿದರು ಮತ್ತು ಅಭಿಯಾನದ ಭಾಗವಾಗಿ ತಮ್ಮ …
Read More »ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಶಿಫಾರಸ್ಸು ಮಾಡಲು ಸಿಎಂಗೆ ಮನವಿ ಮಾಡ್ತೇವೆ: ಸಿದ್ಧರಾಮ ಸ್ವಾಮೀಜಿ
ಗದಗ: ”2018ರ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ಗೆ ಸೋಲಾಗಲಿಲ್ಲ. ಕೆಲವರು ಬೇಕಂತಲೇ ಈ ರೀತಿ ಉಯಿಲು ಎಬ್ಬಿಸಿದರು. ನಾವು ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಶಿಫಾರಸ್ಸು ಮಾಡಲು ಸಿಎಂಗೆ ಮನವಿ ಮಾಡ್ತೇವೆ” ಎಂದು ಗದಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಸಿದ್ದರಾಮಯ್ಯನವರು ಬದ್ಧತೆಗೆ ಹೆಸರಾಗಿರುವಂತವರು. ಲಿಂಗಾಯತ ಧರ್ಮವು ಸ್ವತಂತ್ರ ಧರ್ಮ ಅನ್ನೋದನ್ನು ಮನಗಂಡಿದ್ದರು. ಹೀಗಾಗಿ ನಾಗಮೋಹನ್ ದಾಸ್ ಅವರ ವರದಿಯನ್ನು …
Read More »