ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …
Read More »ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು
ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 …
Read More »ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾ ಶಕ್ತಿ: 39 ಸದಸ್ಯರ ಪೈಕಿ 15 ಮಂದಿಗೆ ಸ್ಥಾನ
ನವದೆಹಲಿ : ಈ ವರ್ಷಾಂತ್ಯದ ಪಂಚರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ 84 ಜನರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ರಚಿಸಿದೆ. ಅದರಲ್ಲಿ ಪಕ್ಷದ ವಿರುದ್ಧ ಬಹಿರಂಗವಾಗಿ ಬಂಡಾಯವೇಳುತ್ತಿದ್ದ ನಾಯಕರೂ ಸೇರಿದಂತೆ 15 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಗೆ ಇಷ್ಟು ಪ್ರಮಾಣದಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, …
Read More »ಬಗರ್ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …
Read More »ಕೊಲೆ ಪ್ರಕರಣದಲ್ಲಿ ಪುತ್ರ ಮತ್ತು ಪತಿ ಭಾಗಿಯಾಗಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ
ಮೈಸೂರು: ಯುವಕನ ಕೊಲೆ ಪ್ರಕರಣದಲ್ಲಿ ಮಗ ಮತ್ತು ಪತಿ ಜೈಲುಪಾಲಾದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಸಾವಿನ ವಿಚಾರ ತಿಳಿದು ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟವರನ್ನು ಸಾಮ್ರಾಟ್ ಹಾಗೂ ಆತ್ಮಹತ್ಯೆಗೆ ಶರಣಾದವರನ್ನು ಇಂದ್ರಾಣಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕಳೆದ ಶನಿವಾರ ರಾತ್ರಿ ಮೈಸೂರು ನಗರದ ವಿದ್ಯಾನಗರದ 4 ನೇ ಕ್ರಾಸ್ನ ನಿವಾಸಿ ಬಾಲರಾಜ್ ಎಂಬುವನನ್ನು ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. …
Read More »ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ:H.D.K.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. …
Read More »ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು.
ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು. ಹೌದು ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಹತ್ತಿರ ಬತ್ತಿ ಶಿರಾಳ ಗ್ರಾಮದಲ್ಲಲ್ಲಿ ಪ್ರತಿವರ್ಷ ನಾಗರ ಪಂಚಮಿ ಯಂದು ನಿಜ ನಾಗರ ಹಾವಿನೊಂದಿಗೆ ಆಚರಿಸುತ್ತಾರೆ. ಒಂದು -ಎರೆಡು ದಿನ ಮುಂಚೆ ಕಾಡಿಗೆ ಹೋಗಿ ಸಾವಿರಾರು ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ, ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ, ಮಣ್ಣಿನ ಮಡಿಕೆಯಲ್ಲಿ …
Read More »ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
Read More »ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು.
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ರೂಪಾ ಮೌದ್ಗಿಲ್ ಪ್ರಕರಣದ ವಿಚಾರಣೆ ಎದುರಿಸಬೇಕಾದ …
Read More »ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ
ಬೆಂಗಳೂರು : ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …
Read More »
Laxmi News 24×7