ಹಾವೇರಿ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ ನೀಡಿದರು. ಸಿಂದಗಿ ಮಠದ ಶಾಂತವೀರೇಶ್ವರ ಗದ್ದುಗಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನಕ್ಕೆ ಆಶೀರ್ವಾದ ಮಾಡಿರುವ ಮಠ “ಸಿಂದಗಿಮಠ” ಎಂದು ತಿಳಿಸಿದರು. ಟಿಕೆಟ್ ವಿಚಾರವನ್ನು ರಾಜ್ಯ, ರಾಷ್ಟ್ರೀಯ ಸಮಿತಿ ನಾಯಕರು ನಿರ್ಧರಿಸುತ್ತಾರೆ: 25 ವರ್ಷಗಳಿಂದ ನಾನು ಈ ಮಠದೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದೇನೆ. ಇದು ಸಮಾಜವನ್ನು ಒಂದೂಗೂಡಿಸುವ ಮಠ. …
Read More »ಏಷ್ಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಬುರಗಿಯ ಬಾಲಕ
ಕಲಬುರಗಿ : ಕೋವಿಡ್ ಸಂದರ್ಭದಲ್ಲಿ ಶಾಲೆಗಳಿಗೆ ಸಾಲು ಸಾಲು ರಜೆ ನೀಡಿದ್ದ ಪರಿಣಾಮ ಮನೆಯಲ್ಲಿ ಕುಳಿತಿದ್ದ ಬಹುತೇಕ ಮಕ್ಕಳು ಮೊಬೈಲ್ ಬಳಕೆಗೆ ಅಂಟಿಕೊಂಡಿದ್ರು. ಆದ್ರೆ ಇಲ್ಲೊಬ್ಬ ಪೋರ ರಜೆ ಸಮಯ ಸದುಪಯೋಗ ಮಾಡಿಕೊಂಡು ದಾಖಲೆ ಬರೆಯುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ಮೊದಲು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಪಟ್ಟಿಗೆ ಸೇರಿದ್ದ ಈ ಬಾಲಕ, ಇದೀಗ ಏಷ್ಯಾ ಬುಕ್ ಆಪ್ ರೆಕಾರ್ಡ್‌ನಲ್ಲಿ ಗ್ರಾಂಡ್ ಮಾಸ್ಟರ್ ಎಂಬ ಬಿರುದು ಪಡೆದು …
Read More »ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ಉಪೇಂದ್ರ ಅವರ ವಿರುದ್ಧ F.I.R. ದಾಖಲ
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಾಗಿದೆ. ಜಾತಿಯೊಂದರ ಭಾವನೆಗಳಿಗೆ ಧಕ್ಕೆಯಾಗುವ ಪದ ಬಳಸಿದ್ದಾರೆ ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ದೂರು ನೀಡಿದ್ದರು. ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ನೇರಪ್ರಸಾರದಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ …
Read More »ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ.
ಬೆಂಗಳೂರು): ರೋಗ ಉಲ್ಬಣಗೊಂಡು ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕಿರಣ್ (22) ಮೃತಪಟ್ಟ ಯುವಕ. ಆಗಸ್ಟ್ 9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಿರಣ್ ರೇಬೀಸ್ ರೋಗದಿಂದಾಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಯುವಕನಿಗೆ ತನ್ನ ಸಾವಿನ ಕ್ಷಣಗಳು ಸಮೀಪಿಸುತ್ತಿರುವ ಅರಿವಾಗಿತ್ತು. ಹೀಗಾಗಿ, ಪ್ರೀತಿಸಿದ ಹುಡುಗಿಯ ನೆನಪಾಗಿ ಬದುಕಿನ ಕಡೇಯ ಕ್ಷಣಗಳಲ್ಲಿ …
Read More »ಬೆಂಗಳೂರಿನ ಹೋಟೆಲ್ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಮೀಪದಲ್ಲಿರುವಾಗಲೇ ಕೆಲ ಕಿಡಿಗೇಡಿಗಳು ಬೆಂಗಳೂರಿನ ಹೋಟೆಲ್ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪ್ರತಿಷ್ಠಿತ ಐಶಾರಾಮಿ ಹೋಟೆಲ್ಗಳಲ್ಲಿ ಒಂದಾದ ಶಾಂಗ್ರೀಲಾಗೆ ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಲಾಗಿದೆ. ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸೇರಿ ದೇಶದ ಎಲ್ಲಾ ಬ್ರಾಂಚ್ಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. luisamaclare@proton.me ಎಂಬ ಇ -ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲ ಬ್ರಾಂಚ್ಗಳಲ್ಲೂ ಬಾಂಬ್ ಇಟ್ಟಿರೋದಾಗಿ ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ …
Read More »ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ವಿವಿಧ ಸಶಸ್ತ್ರ ಪಡೆಗಳ ಸಂಪೂರ್ಣ ಉಡುಗೆ ಪೂರ್ವಾಭ್ಯಾಸ
ನವದೆಹಲಿ: ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ, ಭಾರತೀಯ ಸಶಸ್ತ್ರ ಪಡೆಗಳ ಡ್ರೆಸ್ ರಿಹರ್ಸಲ್ ಇಂದು ಇಲ್ಲಿನ ರಾಷ್ಟ್ರೀಯ ರಾಜಧಾನಿಯ ಕೆಂಪು ಕೋಟೆಯಲ್ಲಿ ಪ್ರಾರಂಭವಾಗಿದೆ. ಇಂದಿನ ಫುಲ್ ಡ್ರೆಸ್ ರಿಹರ್ಸಲ್(ಸಂಪೂರ್ಣ ಉಡುಗೆ ಪೂರ್ವಾಭ್ಯಾಸ)ನಲ್ಲಿ ಮಿಲಿಟರಿ ಬ್ಯಾಂಡ್, ನೌಕಾ ಮತ್ತು ವಾಯುಪಡೆಯ ಘಟಕಗಳು ಸೇರಿದಂತೆ ವಿವಿಧ ತುಕಡಿಗಳು ಭಾಗವಹಿಸಿದ್ದವು. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಭದ್ರತೆ ಬಿಗಿಗೊಳಿಸಲಾಗಿದೆ. ಭಾರತ ಮಂಗಳವಾರ ತನ್ನ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಪ್ರಧಾನ …
Read More »ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ
ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ಮೃತರನ್ನು ಸಂಗನಬಸವ (36), ರೇಖಾ (29), ಅಗಸ್ತ್ಯ (7) ಹಾಗೂ ಭೀಮಾಶಂಕರ್ (26) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಖಾಸಗಿ ಬ್ಯಾಂಕ್ ನೌಕರರಾಗಿರುವ …
Read More »3 ಮಂದಿ ವಿರುದ್ಧ ದೂರು ದಾಖಲು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಬೆಳಗಾವಿ: ಆ ಕುಟುಂಬ ಬದುಕು ಕಟ್ಟಿಕೊಳ್ಳಲು ತಮ್ಮ ಹುಟ್ಟೂರು ಬಿಟ್ಟು ಬೆಳಗಾವಿಗೆ ವಲಸೆ ಬಂದಿತ್ತು. ಪ್ರಾಮಾಣಿಕವಾಗಿ ಕಷ್ಟ ಪಟ್ಟು ದುಡಿಯುತ್ತಿದ್ದವರಿಗೆ ಆ ದೇವರು ಮಾತ್ರ ಕೈ ಹಿಡಿಯಲಿಲ್ಲ. ಹೌದು, ವಿಧಿಯಾಟಕ್ಕೆ ಮೂರು ಅಮಾಯಕ ಜೀವಗಳು ಬಲಿಯಾಗಿವೆ. ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಶಾಹು ನಗರದ 7ನೇ ಕ್ರಾಸ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ಅವಘಡದಿಂದ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ಈರಪ್ಪ …
Read More »ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ, ಲೋಕಸಭೆಗೆ ಸ್ಪರ್ಧಿಸಲ್ಲ: ಬಸವರಾಜ ರಾಯರಡ್ಡಿ
ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …
Read More »ಶಾರುಖ್ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ
ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಪುತ್ರಿ ಸುಹಾನಾ ಖಾನ್ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು. ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ …
Read More »