Breaking News

ರಾಷ್ಟ್ರೀಯ

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ ಕಾಣಿತು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮುಜರಾಯಿ ಇಲಾಖೆಯ ಆಧಿನದಲ್ಲಿರುವ ಕೊಣ್ಣೂರಿನ ಶ್ರೀಲಕ್ಷ್ಮೀ ದೇವಸ್ಥಾನದ ಅರ್ಚಕರ ಕುಟುಂಬ ಮತ್ತು ಕಮಿಟಿಯವರ ನಡುವೆ ದೇವಸ್ಥಾನದ ಆಭರಣಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ನಡೆದಿದ್ದ ಜಗಳವನ್ನು ಸಂಧಾನ ಮಾಡಲು ಹಲವಾರು ಬಾರಿ ಗೋಕಾಕ ತಹಸಿಲ್ದಾರ ಕೆ, ಮಂಜುನಾಥ ಮತ್ತು ಪೋಲಿಸ್ ಅಧಿಕಾರಿಗಳು ಪ್ರಯತ್ನ ಪಟ್ಟರು ಸಹ ಹೊಂದಾಣಿಕೆ ಆಗದೆ …

Read More »

ಪಿಎಂ ಮಿತ್ರ ಟೆಕ್ಸ್​ ಟೈಲ್​ ಪಾರ್ಕ್.. ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ್ ಬಳಿ ಕೇಂದ್ರ ಸರ್ಕಾರದ ಪಿಎಂ ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ ಜಮೀನನ್ನು ಜವಳಿ ಇಲಾಖೆಗೆ ಒಂದು ತಿಂಗಳೊಳಗೆ ಹಸ್ತಾಂತರಿಸಿ, ಆರ್.ಟಿ.ಸಿಯಲ್ಲಿ ಹೆಸರು ಸೇರಿಸಬೇಕೆಂದು ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟೆ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ …

Read More »

ಯೋಧರ ಸೇವೆ ಸದಾ ಸ್ಮರಣೀಯ..’: ಲಡಾಖ್‌ ದುರಂತಕ್ಕೆ ಮೋದಿ, ಖರ್ಗೆ, ರಾಹುಲ್‌ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ : ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಜಿಲ್ಲೆಯ ಕಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ಸೇನಾ ಟ್ರಕ್​ ಆಳವಾದ ಕಂದಕಕ್ಕೆ ಉರುಳಿಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ ಜೆಸಿಒ (Junior Commissioned Officer-JCO) ಸೇರಿದಂತೆ ಒಂಬತ್ತು ಮಂದಿ ಸೈನಿಕರು ಮೃತಪಟ್ಟ ದುರ್ಘಟನೆ ನಿನ್ನೆ ನಡೆದಿದೆ. ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.     ಪ್ರಧಾನಮಂತ್ರಿ ಕಾರ್ಯಾಲಯವು ಸಾಮಾಜಿಕ …

Read More »

ರಾಜೀವ್ ಗಾಂಧಿ 79ನೇ ಜನ್ಮದಿನ: ‘ವೀರ ಭೂಮಿ’ಗೆ ಸೋನಿಯಾ, ಪ್ರಿಯಾಂಕಾ, ಖರ್ಗೆ ಪುಷ್ಪ ನಮನ

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಇಂದು ಬೆಳಗ್ಗೆ ದೆಹಲಿಯ ‘ವೀರ ಭೂಮಿ’ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಮಗಳು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪತಿ ರಾಬರ್ಟ್ ವಾದ್ರಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮಾಜಿ ಪ್ರಧಾನಿಯ ಸಮಾಧಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ವೀರಭೂಮಿಯ ಹೊರಗೆ …

Read More »

ಚಂದ್ರಯಾನ-3: ಲ್ಯಾಂಡರ್‌ನ ವೇಗ ತಗ್ಗಿಸುವ ಅಂತಿಮ ಹಂತದ ಪ್ರಕ್ರಿಯೆ ಯಶಸ್ವಿ

Chandrayaan-3: ‘ಚಂದ್ರಯಾನ-3’ ಯೋಜನೆಯ ಲ್ಯಾಂಡರ್‌ ಘಟಕವನ್ನು ಆಗಸ್ಟ್‌ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ (South Pole) ಇಸ್ರೋ ಸಾಫ್ಟ್‌ ಲ್ಯಾಂಡಿಂಗ್ ಮಾಡಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಈ ನಿಟ್ಟಿನಲ್ಲಿ ಡೀಬೂಸ್ಟ್‌ (ಲ್ಯಾಂಡರ್‌ನ ವೇಗ ತಗ್ಗಿಸುವುದು) ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸುತ್ತಿದೆ. ಬೆಂಗಳೂರು/ನವದೆಹಲಿ : ಚಂದ್ರಯಾನ-3 ಗಗನನೌಕೆಯು ಭೂಮಿಯ ಏಕೈಕ ಉಪಗ್ರಹ ಚಂದ್ರನಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಇಂದು …

Read More »

ಈರುಳ್ಳಿ ರಫ್ತು ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ : ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಅಭಾವ ತಗ್ಗಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ ರಫ್ತಾಗುವ ಈರುಳ್ಳಿಗೆ ಶೇ.40ರಷ್ಟು ಸುಂಕ ವಿಧಿಸಿದೆ. ರಫ್ತು ಸುಂಕವನ್ನು ಡಿಸೆಂಬರ್ 31ರ ವರೆಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ನವದೆಹಲಿಯಲ್ಲಿ ಶನಿವಾರ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ 37 ರೂ ಇತ್ತು. ಈ ದರವು ಸೆಪ್ಟೆಂಬರ್​ದಲ್ಲಿ ಏರಿಕೆ ಆಗುವ ಸಾಧ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ …

Read More »

ಉತ್ತರ ಕನ್ನಡದಲ್ಲಿ ಗೋವಾ ಸರ್ಕಾರದ ‘ಮಿಷನ್ ರೇಬೀಸ್’ ಯೋಜನೆ ಅನುಷ್ಠಾನ

ಕಾರವಾರ (ಉತ್ತರಕನ್ನಡ) : ಗೋವಾ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರ ನಡುವೆ ಗಡಿ ಹಂಚಿಕೊಂಡಿರುವ ಕರ್ನಾಟಕದ ತಾಲೂಕುಗಳಿಗೆ ಅಲ್ಲಿನ ಸರ್ಕಾರ ತನ್ನ ಯೊಜನೆಯೊಂದನ್ನು ವಿಸ್ತರಿಸಿದೆ. ಗಡಿ ತಾಲೂಕುಗಳಲ್ಲಿ ಮಿಷನ್ ರೇಬೀಸ್ ಅನುಷ್ಠಾನ ಮಾಡುತ್ತಿದೆ. ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯೊಂದಿಗೆ ರೇಬೀಸ್ ಚುಚ್ಚುಮದ್ದು ನೀಡುವಂತೆ ಅನೇಕ ವರ್ಷಗಳಿಂದ ಜನರು ಆಗ್ರಹಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಷ್ಟೇ ಕರ್ನಾಟಕ ಸರ್ಕಾರ ಈ …

Read More »

ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು: ವಿನಯ ಕುಲಕರ್ಣಿ

ವಿಜಯಪುರ: ಕಾಂಗ್ರೆಸ್​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಹೈ ಕಮಾಂಡ್‌ಗೆ ಬಿಟ್ಟಿದ್ದು ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಾಕಷ್ಟು ಜನರು ಇದ್ದಾರೆ. ಎರಡುವರೆ ವರ್ಷದಲ್ಲಿ ಪೂರ್ಣ ಟೀಂ ಬದಲಾಗಲಿದೆ. ಆಗ ಉಳಿದವರಿಗೂ ಸಚಿವ ಸ್ಥಾನದ ಭಾಗ್ಯ ದೊರೆಯಲಿದೆ. 135 ಜನ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ 34 ಶಾಸಕರಿಗೆ ಸಚಿವ ಸ್ಥಾನ ದೊರೆಯುತ್ತದೆ. ಹೀಗಾಗಿ ಎಲ್ಲರಿಗೂ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹಾವೇರಿ ನ್ಯಾಯಾಲಯ

ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನ ಅನುಭವಿಸಿದ ಮಹಿಳೆಗೆ ಹಾವೇರಿ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 19 ಸಾವಿರ ರೂಪಾಯಿ ದಂಡ ಮತ್ತು 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.   ಹಾವೇರಿ ಜಿಲ್ಲಾ ಶಿಗ್ಗಾಂವಿ ತಾಲೂಕಿನ ವನಹಳ್ಳಿ ಲಕ್ಷ್ಮಿ ಕಬ್ಬೇರ ಶಿಕ್ಷೆಗೆ ಒಳಗಾದ ಮಹಿಳೆ. ಇವರು ಮೂಲತಃ ಗಂಗಾಮತಕ್ಕೆ ಸೇರಿದವರು. ಈ ಮಹಿಳೆ ಶಿಗ್ಗಾಂವಿ …

Read More »

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ , ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು …

Read More »