ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, …
Read More »ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ
ಬೆಂಗಳೂರು: 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಇಂದು ಉಧ್ಘಾಟನೆ ಮಾಡಿದರು. ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇದಾಗಿದ್ದು ನೂತನ ತಂತ್ರಜ್ಞಾನಕ್ಕೆ ನಾಂದಿಹಾಡಲಾಯಿತು. ಎಲ್&ಟಿ ಮೂಲಕ ಈ ಅಂಚೆ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು ಐಐಟಿ ಚೆನ್ನೈ ಪ್ರಸ್ತುತ ಯೋಜನೆಯಲ್ಲಿ ತಾಂತ್ರಿಕ ಮಾರ್ಗದರ್ಶನ ಒದಗಿಸಿದೆ. ಒಟ್ಟು 1021 ಚದರ ಅಡಿಗಳ ವಿಸ್ತೀರ್ಣ ಹೊಂದಿರುವ ಈ ಕಟ್ಟವನ್ನು 3ಡಿ ಕಾಂಕ್ರೀಟ್ …
Read More »ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
Read More »ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್ ಕುಲಕರ್ಣಿ
ಬೆಳಗಾವಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ವೀರಶೈವ ಮಹಾಸಭೆಯಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅದರಲ್ಲಿನ ಬಹಳಷ್ಟು ಜನ ನಮಗೆ ಬೆಂಬಲ ಕೂಡ ಕೊಟ್ಟಿದ್ದರು. ಈಗ ನಾವೆಲ್ಲಾ ಒಂದಾಗಿ ಮತ್ತೆ ಹೋರಾಟ ಪ್ರಾರಂಭ ಮಾಡೋಣ ಎಂದು ಮಾತನಾಡಿದ್ದೇವೆ ಅಂತಾ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನನ್ನು ಯಾರೂ ಹೈಜಾಕ್ ಮಾಡಿಲ್ಲ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ರಾಜ್ಯದ ಮುಖಂಡರನ್ನು ಮೊನ್ನೆ …
Read More »ಬಾಕ್ಸ್ ಆಫೀಸ್ನಲ್ಲಿ Gadar 2 vs OMG 2 ಫೈಟ್: 7ನೇ ದಿನದ ಕಲೆಕ್ಷನ್ ಎಷ್ಟು?
Gadar 2 vs OMG 2- Collection Day 7: ಬಿಡುಗಡೆಯಾದ ಏಳನೇ ದಿನದಂದು ಗದರ್ 2 ಮತ್ತು ಓಎಂಜಿ 2 ಸಿನಿಮಾಗಳು ಗಳಿಸಿದೆಷ್ಟು? ಆಗಸ್ಟ್ 11ರಂದು ಬಿಡುಗಡೆಯಾದ ಬ್ಲಾಕ್ಬಸ್ಟರ್ ಸೀಕ್ವೆಲ್ಗಳು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿವೆ. ಸೂಪರ್ಸ್ಟಾರ್ ಸನ್ನಿ ಡಿಯೋಲ್ ಅಭಿನಯದ ಗದರ್ 2 ಮತ್ತು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಓಎಂಜಿ 2 ಸಿನಿಮಾಗೆ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್ ಸಿಕ್ಕಿದೆ. ವಾರದ ದಿನಗಳಲ್ಲಿಯೂ ಸಿನಿ ಪ್ರೇಮಿಗಳನ್ನು ಥಿಯೇಟರ್ಗೆ …
Read More »ಕಾಮಗಾರಿ ಬಿಲ್ ಬಾಕಿ ಪ್ರಕರಣ: 2ನೇ ದಿನವೂ ಮುಂದುವರೆದ ಗುತ್ತಿಗೆದಾರರ ಪೊಲೀಸ್ ವಿಚಾರಣೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿ ಬೇಸತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಪೊಲೀಸ್ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ. 57 ಗುತ್ತಿಗೆದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ನಿನ್ನೆ ಹಾಜರಾಗಿದ್ದ 16 ಜನ ಗುತ್ತಿಗೆದಾರರನ್ನು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸಿದ್ದರು. “ಇಂದು ಕೆಲವೊಂದಿಷ್ಟು ಗುತ್ತಿಗೆದಾರರು ಹಾಜರಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ. 28 ತಿಂಗಳಿನಿಂದ …
Read More »ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಶಾಸಕರ ಜೊತೆ ಬಿಎಸ್ವೈ ಮಹತ್ವದ ಸಭೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲ ದಿನಗಳಿಂದ ತಲೆದೋರಿರುವ ಗೊಂದಲಗಳ ನಿವಾರಣೆಗೆ ಖುದ್ದು ಪಕ್ಷದ ಹಿರಿಯ ನಾಯಕ ಹಾಗೂ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅಖಾಡಕ್ಕಿಳಿದಿದ್ದು, ಬೆಂಗಳೂರು ಶಾಸಕರ ಸಭೆ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಬೆಂಗಳೂರು ಬಿಜೆಪಿ ಶಾಸಕರ ಸಭೆ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ …
Read More »ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ
ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಪ್ರತಿಭಟನೆ ನಡೆಸಿದರು ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ. ಸಂತೋಷ ರಾವ್ ಅವರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡಲಾಗಿದೆ. ಈಗ ಅವರನ್ನು ಅಮಾಯಕ ಎಂದು ಬಿಡುಗಡೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ಹಾಗೂ ಸಂತೋಷ ರಾವ್ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ. ಎಂದು …
Read More »ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ
ಶಹಾಪುರ ಎಸ್ ಬಿಐ ವೃತ್ತದಿಂದ ಹಳೆ ಪಿಬಿ ರಸ್ತೆಯ ಅವೈಜ್ಞಾನಿಕವಾಗಿ ರಸ್ತೆ ಅಗಲೀಕರಣ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ರಾಜಕುಮಾರ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಹಾಪುರದ ಎಸ್ ಬಿಐ ವೃತ್ತದಿಂದ ಹಳೆ ಪಿ.ಬಿ.ರಸ್ತೆಯ ಅಗಲೀಕರಣದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸ್ಮಾಟ್೯ ಸಿಟಿಯಿಂದ ರಸ್ತೆ ಅಗಲೀಕರಣ ಮಾಡಲಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ರಸ್ತೆ ನಿರ್ಮಾಣ …
Read More »ಬಿಜೆಪಿ ಮತ್ತು ಜೆಡಿಎಸ್ನಿಂದ 10 ರಿಂದ 15 ಮಂದಿ ಕಾಂಗ್ರೆಸ್ ಸೇರಲಿದ್ದಾರೆ: ಚಲುವರಾಯಸ್ವಾಮಿ
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 …
Read More »
Laxmi News 24×7