Breaking News

ರಾಷ್ಟ್ರೀಯ

ಕ್ವಿಟ್ ಇಂಡಿಯಾ ದಿನಾಚರಣೆ.. ರ‍್ಯಾಲಿ ನಡೆಸದಂತೆ ಮುಂಬೈನಲ್ಲಿ ಗಾಂಧೀಜಿ ಮರಿ ಮೊಮ್ಮಗ ತುಷಾರ್​ ಗಾಂಧಿ ಬಂಧನ, ಬಿಡುಗಡೆ

ಮುಂಬೈ (ಮಹಾರಾಷ್ಟ್ರ) : ಕ್ವಿಟ್​ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್​ ಗಾಂಧಿ ಆರೋಪಿಸಿದ್ದಾರೆ.   ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್​ ಸಾಂತಾ ಕ್ರೂಝ್​ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …

Read More »

ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು

ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …

Read More »

ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಬೈಕ್‌ ಸವಾರರಿಬ್ಬರ ದುರ್ಮರಣ

ಕಲಬುರಗಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ‌ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ.‌ ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್‌ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …

Read More »

ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ನಲ್ಲಿ ಮಗಳು ಅಧ್ಯಕ್ಷರಾಗಿ ಆಯ್ಕೆಯಾದರೆ, ತಾಯಿ ಉಪಾಧ್ಯಕ್ಷರಾಗಿ ಆಯ್ಕೆ

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆದ್ದು ಅಮ್ಮ, ಮಗಳು ಇಬ್ಬರು ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನ ಅಲಂಕರಿಸಿ ಗಮನ ಸೆಳೆದಿದ್ದಾರೆ. ಅಧ್ಯಕ್ಷೆಯಾಗಿ ಮಗಳು ಸ್ನೇಹ ಆಯ್ಕೆಯಾದರೆ, ತಾಯಿ ನೇತ್ರಾವತಿ ಉಪಾಧ್ಯಕ್ಷೆಯಾದರು. ಗರ್ಜೆ ಹಾಗೂ ಜಿ.ಮಾದಾಪುರ ಗ್ರಾಮಗಳನ್ನು ಸೇರಿಸಿ ಒಂದು ಪಂಚಾಯತ್​ ಮಾಡಲಾಗಿದೆ. ಎರಡು ಗ್ರಾಮಗಳಿಂದ ಒಟ್ಟು 7 ಜನ ಗ್ರಾ.ಪಂ ಸದಸ್ಯರಿದ್ದಾರೆ. ಕಳೆದ ಅವಧಿಗೆ ಬೇರೆಯವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಧ್ಯಕ್ಷ …

Read More »

ಹಾಸನದ ಹೊರವಲಯದ ಬಳಿ ಗ್ರಾನೈಟ್​ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ

ಹಾಸನ : ಹಳೆಯ ದ್ವೇಷದ ಹಿನ್ನೆಲೆ ಹಾಡಹಗಲೇ ಗ್ರಾನೈಟ್​ ಉದ್ಯಮಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಹೊರವಲಯದ ಬಳಿ ನಡೆದಿದೆ. ಕೃಷ್ಣೇಗೌಡ (55) ಕೊಲೆಯಾದ ಮೃತ ಗ್ರಾನೈಟ್ ಉದ್ಯಮಿ. ಹಾಸನ ಮೂಲದ ಕೃಷ್ಣೇಗೌಡ, ಹಾಸನದ ಡೈರಿ ವೃತ್ತದ ಸಮೀಪ ಶ್ರೀರಾಮ ಮಾರ್ಬಲ್ ಎಂಬ ಉದ್ಯಮವನ್ನು ನಡೆಸುತ್ತಿದ್ದರು. ಜೊತೆಗೆ ಜೆಡಿಎಸ್ ಮುಖಂಡರಾಗಿರುವ ಇವರು ಮಾಜಿ ಸಚಿವ ಹೆಚ್​ ಡಿ ರೇವಣ್ಣ ಅವರ ಆಪ್ತರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ತಮ್ಮ ಗ್ರಾನೈಟ್ ಫ್ಯಾಕ್ಟರಿಗೆ ಹೋಗಿ …

Read More »

ಮಂಡ್ಯದ ಜಂಟಿ ಕೃಷಿ ಇಲಾಖೆ ಕಚೇರಿಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ

ಮಂಡ್ಯ : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.   ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ, ಐಜಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದ ತಂಡ ಜಿಲ್ಲಾಧಿಕಾರಿ …

Read More »

ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ : ಈಶ್ವರಖಂಡ್ರೆ

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ …

Read More »

ಅಕ್ಕಿ, ಗೋಧಿ ಮಾರಾಟ; ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ

ನವದೆಹಲಿ : ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ಹೆಚ್ಚುವರಿ 50 ಲಕ್ಷ ಟನ್ ಗೋಧಿ ಮತ್ತು 25 ಲಕ್ಷ ಟನ್ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿ ಅಕ್ಕಿ ಮತ್ತು ಗೋಧಿಯ ಬೆಲೆಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಆಗಸ್ಟ್ 7 ರ ಹೊತ್ತಿಗೆ ಕಳೆದ ಒಂದು ವರ್ಷದಲ್ಲಿ ಗೋಧಿ ಬೆಲೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಶೇಕಡಾ 6.77 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇಕಡಾ 7.37 …

Read More »

ಸತತ ಮಳೆ ಮತ್ತು ವರದಾ ನದಿಯ ಪ್ರವಾಹದಿಂದ ರೈತ ನಾಲ್ಕೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ಹಾನಿ

ಹಾವೇರಿ: ಕಳೆದ ಎರಡು ತಿಂಗಳಿಂದ ಎಲ್ಲೆಡೆ ಕಿಚನ್​ ಕ್ವೀನ್​ ಟೊಮೆಟೊದ್ದೇ ಮಾತು. ಟೊಮೆಟೊ ಬೆಳೆ ಈ ಬಾರಿ ರೈತರ ಕೈ ಹಿಡಿದಿದ್ದು, ಅಧಿಕ ಲಾಭ ತಂದುಕೊಟ್ಟಿದೆ. ಇದರ ನಡುವೆ ಕೆಲ ರೈತರು ಟೊಮೆಟೊ ಕಳ್ಳತನವಾಗಬಾರದು ಎಂದು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಆದರೆ ಹಾವೇರಿ ಸಮೀಪದ ದೇವಗಿರಿ ಗ್ರಾಮದ ಟೊಮೆಟೊ ಬೆಳೆಗಾರ ದುರ್ಗಪ್ಪ ಎಂಬುವನ ಕಥೆ ಇದಕ್ಕೆ ಭಿನ್ನವಾಗಿದೆ. ದೇವಗಿರಿಯ ವರದಾ ನದಿ ತಟದಲ್ಲಿ ನಾಲ್ಕೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ …

Read More »

ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.

ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …

Read More »