ಖರ್ಜೂರ ರುಚಿಕರ ಒಣ ಹಣ್ಣುಗಳ ಪೈಕಿ ಒಂದು. ತಾಜಾ ಹಣ್ಣುಗಳಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ಪ್ರೊಟೀನ್, ಕಾರ್ಬೋಹೈಡ್ರೇಟ್, ಅಗತ್ಯ ವಿಟಮಿನ್ಸ್, ಮಿನರಲ್ಸ್ ಹಾಗು ಫೈಬರ್ನಂತಹ ಅತ್ಯಗತ್ಯ ಅಂಶಗಳು ಇದರಲ್ಲಿವೆ. ಆರೋಗ್ಯಕರ ಜೀವನ ಶೈಲಿಗೆ ಬೇಕಾದ ಎಲ್ಲ ಅಂಶಗಳನ್ನೂ ಒಣ ಹಣ್ಣು ಖರ್ಜೂರ ಸೇವಿಸುವ ಮೂಲಕ ಪಡೆಯಬಹುದು. ಒಣ ಖರ್ಜೂರಗಳಲ್ಲಿ ದೇಹಕ್ಕೆ ಅಗತ್ಯವಿರುವ ಕಾರ್ಬೋಹೈಡ್ರೇಟ್ ಅಧಿಕವಿದೆ. 100 ಗ್ರಾಂ ಖರ್ಜೂರ 75 ಗ್ರಾಂನಷ್ಟು ಕಾರ್ಬೋಹೈಡ್ರೇಟ್ ಹೊಂದಿರುತ್ತದೆ. ಉಳಿದಂತೆ, 7 ಗ್ರಾಂ …
Read More »ಆಕಸ್ಮಿಕವಾಗಿ ಸ್ವಚ್ಛತಾ ಕಾರ್ಮಿಕನಿಗೆ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ಕ್ಷಮೆ ಯಾಚಿಸಿದ್ದಾರೆ
ಬೆಂಗಳೂರು: ಕಾರು ಚಾಲಕನಿಂದಾದ ಆಕಸ್ಮಿಕ ತಪ್ಪಿನಿಂದ ನಿನ್ನೆ (ಸೋಮವಾರ) ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಅವರು ಮುಜುಗರಕ್ಕೆ ಒಳಗಾಗಿದ್ದರು. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹೋಗುವ ಸಂದರ್ಭದಲ್ಲಿ ರಚಿತಾ ರಾಮ್ ಅವರಿದ್ದ ಕಾರು ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ನಟಿ ಕಾರ್ಮಿಕನ ಬಳಿ ಕ್ಷಮೆಯಾಚಿಸದೇ ಸ್ಥಳದಿಂದ ಹೊರಟು ಹೋಗಿದ್ದರು ಎಂದು ಆರೋಪಿಸಲಾಗಿತ್ತು. ಸಾಮಾಜಿಕ ಜಾಲತಾಣ ಸೇರಿದಂತೆ ಕಾರ್ಮಿಕರ ಒಕ್ಕೂಟಗಳಿಂದಲೂ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ …
Read More »ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ; ₹4 ಕೋಟಿಗೂ ಹೆಚ್ಚು ಹಣ ಸಂಗ್ರಹ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿ ತೆರೆಬಿದ್ದಿದ್ದು, ಕೊನೆಯ ದಿನವಾದ ಇಂದು (ಮಂಗಳವಾರ) ಪ್ರದರ್ಶನ ವೀಕ್ಷಿಸಲು ಸಸ್ಯಕಾಶಿಗೆ ಜನಸಾಗರವೇ ಹರಿದುಬಂದಿತ್ತು. ಆಗಸ್ಟ್ 4ರಿಂದ 15ರವರೆಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದು, 4 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಸ್ವಾತಂತ್ರ್ಯೋತ್ಸವದ ದಿನವಾದ ಇಂದು ಜನಜಂಗುಳಿ ನೆರೆದಿತ್ತು. ಫ್ಲವರ್ ಶೋಗೆ 2.45 ಲಕ್ಷಕ್ಕೂ ಹೆಚ್ಚು …
Read More »ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
ನವದೆಹಲಿ : ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ,” ವಾಜಪೇಯಿ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಗಿದೆ, ಅವರ ನಾಯಕತ್ವದಲ್ಲಿ ದೇಶವು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು” ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಕುರಿತು ಟ್ವೀಟ್ …
Read More »ಕೊಪ್ಪಳದ ಗಂಗಾವತಿಯಲ್ಲಿ ಅನಧಿಕೃತವಾಗಿ ಹೋಟೆಲ್ ರೆಸಾರ್ಟ್ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪೊಲೀಸರು
ಗಂಗಾವತಿ: ಹಂಪಿ ಪ್ರಾಧಿಕಾರದ ನಿಯಮ ಮೀರಿಯೂ ಅನಧಿಕೃತವಾಗಿ ಹೋಟೆಲ್ ರೆಸಾರ್ಟ್ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪ್ರಾಧಿಕಾರದ ಅಧಿಕಾರಿಗಳು, ಹನ್ನೊಂದು ರೆಸಾರ್ಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರೂಪಕ ಕುಮಾರ ಬಿಸ್ವಾಸ್, ರಾಜು , ವರುಣ್ , ಕರುಣಾಕರ್ , ಗಾಳೇಶ್ , ಆಸೀಫ್ , ಚಂದ್ರಶೇಖರಗೌಡ , ಶ್ರೀಕಾಂತ್ ಹೊಸಳ್ಳಿ, ರವಿಚಂದ್ರ, ಸಂದೀಪ್ ಶೇಟ್ ಹಾಗೂ ಮೌಲಾಲಿ ಎಂಬುವವರಿಗೆ ಸೇರಿದ ರೆಸಾರ್ಟ್ಗಳ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಈ …
Read More »ವ್ಹೀಲಿಂಗ್ ವೇಳೆ ಮತ್ತೊಂದು ಬೈಕ್ಗೆ ಡಿಕ್ಕಿ.. ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆಗೆ ರಜೆ ಸಿಕ್ಕಿರುವ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಲು ಹೋದ ಯುವಕನೊಬ್ಬ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪ ಇಂದು ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಇಂದು ಸ್ವಾತಂತ್ರ್ಯ ದಿನಾಚರಣೆಯಾಗಿದ್ದು, ಬೆಂಗಳೂರಿನಿಂದ ಆಗಮಿಸುವ ಕೆಲವರು ಏರ್ಪೋರ್ಟ್ ರಸ್ತೆ ಕಡೆ ಬಂದು ವ್ಹೀಲಿಂಗ್ ಮಾಡ್ತಾರೆ. ಹೀಗೆ ದೇವನಹಳ್ಳಿಯಿಂದ ನಂದಿಬೆಟ್ಟದ …
Read More »ಶಿಕಾರಿಪುರದ ನಳಿನಕೊಪ್ಪ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಶಾಲೆಯ ಮುಖ್ಯ ಶಿಕ್ಷಕಿ ಅಮಾನತು
ಶಿವಮೊಗ್ಗ: ಇಂದು ದೇಶಾದ್ಯಂತ ಎಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಆದ್ರೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲಾ ಸರ್ಕಾರಿ ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಇಲಾಖೆಯ ಕಚೇರಿಯಲ್ಲಿ ಕಡ್ಡಾಯವಾಗಿ …
Read More »ಬಸನಗೌಡ ಯತ್ನಾಳ್ ಅವರ ಮನಸ್ಥಿತಿ ಸರಿ ಇಲ್ಲ; ಸಚಿವ ಮಂಕಾಳು ವೈದ್ಯ ತಿರುಗೇಟು
ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು …
Read More »ತಾಯಿಯೊಬ್ಬಳು ತನ್ನ ಮಗನನ್ನೇ ಕೊಂದ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಅಪರಾಧಿಗೆ ಚಿಕ್ಕೋಡಿ ಕೋರ್ಟ್ ದಂಡಸಹಿತ ಜೈಲುಶಿಕ್ಷೆ ವಿಧಿಸಿದೆ.
ಚಿಕ್ಕೋಡಿ (ಬೆಳಗಾವಿ) : ತನ್ನ ಅನೈತಿಕ ಸಂಬಂಧ ಗೊತ್ತಾಯಿತು ಎಂದು ಮಗನನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ ಕರಿಗಾರ (31) ಶಿಕ್ಷೆಗೊಳಗಾದವರು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (22/10/2019ರಲ್ಲಿ) ನಡೆದ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ …
Read More »ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ
ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು …
Read More »
Laxmi News 24×7