ಹೈದರಾಬಾದ್ (ತೆಲಂಗಾಣ) : ಹೈದರಾಬಾದ್ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ. ಪ್ರಸಿದ್ಧ ಸ್ಮಾರಕವಾಗಿರುವ ಚಾರ್ಮಿನಾರ್ ಮುಂಭಾಗದ ವಿದ್ಯುದ್ದೀಪದ ವ್ಯವಸ್ಥೆಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ರಾತ್ರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ್ಮಿನಾರ್ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಅದ್ಭುತವಾಗಿ ಬೆಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರೆಡ್ಡಿ, “ಇನ್ನು ಮುಂದೆ ವರ್ಷವಿಡೀ ಪ್ರತಿದಿನ ಸಂಜೆ ಚಾರ್ಮಿನಾರ್ ಅನ್ನು ವಿದ್ಯುದ್ದೀಪಗಳಿಂದ …
Read More »ಜಲ ಮೂಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಕರು, ಗ್ರಾಮೀಣ ಸಮುದಾಯದ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಚಿಂತನೆ
ಬೆಂಗಳೂರು: ”ಜಲ ಮೂಲಗಳಾದ ನದಿ, ಕೆರೆ ಮತ್ತು ನಾಲೆಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಚಿಂತನೆ ನಡೆಸಿದೆ” ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ವಿಕಾಸಸೌಧದಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಆರ್ಟ್ ಆಫ್ ಲಿವಿಂಗ್ ರಿವರ್ ರಿಜ್ಯೂವಿನೇಷನ್ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕರಾದ ಡಾ. ಲಿಂಗರಾಜು ಯಾಲೆ ಅವರ ನೇತೃತ್ವದ ತಂಡದೊಂದಿಗೆ …
Read More »ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲ
ಚಿಕ್ಕೋಡಿ (ಬೆಳಗಾವಿ) : ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ ಬೆಳೆ ಖರೀದಿ ಮಾಡಿ ತಮ್ಮ ನೆರವಿಗೆ ಬರುವಂತೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಬಿಟ್ಟರೆ ಬೆಳಗಾವಿ ಜಿಲ್ಲೆಯ ರಾಯಬಾಗ, ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಅತಿ ಹೆಚ್ಚು ದ್ರಾಕ್ಷಿ ಬೆಳೆಗಾರರನ್ನು ಹೊಂದಿರುವ ಪ್ರದೇಶ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ, ಈ ಬಾರಿ ಬೆಲೆ ಕುಸಿತದಿಂದ ಸಾವಿರಾರು ಟನ್ …
Read More »ಜಾಗತಿಕವಾಗಿ ಅಕ್ಕಿ ದರ ಭಾರಿ ಹೆಚ್ಚಳ
ನವದೆಹಲಿ : ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆಯ (ಎಫ್‌ಎಒ) ಎಲ್ಲಾ ಅಕ್ಕಿ ಬೆಲೆ ಸೂಚ್ಯಂಕವು (All Rice Price Index) ತಿಂಗಳಲ್ಲಿ ಶೇಕಡಾ 2.8 ರಷ್ಟು ಹೆಚ್ಚಾಗಿ ಶೇ 19.7ಕ್ಕೆ ತಲುಪಿದೆ. ಸೆಪ್ಟೆಂಬರ್ 2011 ರ ನಂತರ ಆಲ್ ರೈಸ್ ಪ್ರೈಸ್ ಇಂಡೆಕ್ಸ್ನ ಅತ್ಯಧಿಕ ಮಟ್ಟ ಇದಾಗಿದೆ. ಜುಲೈ 20ರಂದು ಭಾರತವು ಸ್ಟೀಮ್ ಮಾಡದ ಭಾರತೀಯ ಅಕ್ಕಿಯ ರಫ್ತನ್ನು ನಿಷೇಧಿಸಿದ್ದರಿಂದ ಇತರ ಮಾದರಿಯ ಅಕ್ಕಿಯ ಬೆಲೆಗಳು ಹೆಚ್ಚಾಗಬಹುದು ಎಂಬ ನಿರೀಕ್ಷೆಯಿಂದ …
Read More »ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ,:H.D.K
ಬೆಂಗಳೂರು : ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ, ಕೋಟಿ ಹಣ ಲೂಟಿಯಾಗಿದೆ. ನೈಸ್ ಸಂಸ್ಥೆ ವಿರುದ್ಧ ದೂರು ನೀಡಲು ಪ್ರಧಾನಿ ನರೇಂದ್ರ ಮೋದಿ …
Read More »ಆರಗ ಜ್ಞಾನೇಂದ್ರರಿಗೆ ಬುದ್ಧಿ ಭ್ರಮಣೆಯಾಗಿದೆ:ಶಿವರಾಜ ತಂಗಡಗಿ
ಕೊಪ್ಪಳ: ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಬುದ್ಧಿ ಭ್ರಮಣೆ ಆಗಿದ್ದು, ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಅವರು ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿರುದ್ಧ ಗುಡುಗಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿ ಉಪನಾಮ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಆದರೆ ಈಗ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ …
Read More »ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಬೆಂಗಳೂರಿನ ಆರ್ಮಿ ಸರ್ವಿಸ್ ಕಾರ್ಪ್ಸ್ ಸೆಂಟರ್ನಲ್ಲಿ(ಉತ್ತರ) ಮೊದಲ ಬ್ಯಾಚಿನ 113 ಅಗ್ನಿವೀರರು ತರಬೇತಿ ಪೂರ್ಣಗೊಳಿಸಿದ್ದಾರೆ. ಕೇಂದ್ರ ಸಶಸ್ತ್ರ ಪಡೆಗಳ ಮೂರು ಸೇವೆಗಳಿಗೆ ಸೈನಿಕರ ನೇಮಕಾತಿಗಾಗಿ 2022ರ ಜೂನ್ 16ರಂದು ಭಾರತ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಅನುಮೋದನೆಗೊಳಿಸಿತ್ತು. ಯೋಜನೆಯ ಭಾಗವಾಗಿ ಇದೇ ವರ್ಷ ಜನವರಿ 2023 ರಿಂದ ಪ್ರಾರಂಭವಾದ ತರಬೇತಿಯಲ್ಲಿ ಆಗಸ್ಟ್ 5 ರ ವರೆಗೆ 85 ಅಗ್ನಿವೀರರು (ಎಂಟಿ) ಉತ್ತೀರ್ಣರಾಗಿ ಹೊರಹೊಮ್ಮಿದ್ದಾರೆ. ಬೆಂಗಳೂರಿನಲ್ಲಿರುವ ಆರ್ಮಿ ಸರ್ವಿಸ್ ಕಾರ್ಪ್ಸ್ …
Read More »ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಚಂದ್ರಯಾನ -3 ಪ್ರವೇಶ – ಇಸ್ರೋ
ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಸಂಜೆ ತಿಳಿಸಿದೆ. ಇದು ಚಂದ್ರಯಾನ-3. ನಾನು ಚಂದ್ರನ ಗುರುತ್ವಾಕರ್ಷಣೆಯನ್ನು ಅನುಭವಿಸುತ್ತಿದ್ದೇನೆ. ಚಂದ್ರಯಾನ-3 ಅನ್ನು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರಿಸಲಾಗಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ. ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಕಡಿತ 2023ರ ಆಗಸ್ಟ್ 6ರ ರಾತ್ರಿ 11 ಗಂಟೆ ಸುಮಾರಿಗೆ ಗದಿಪಡಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. …
Read More »ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವು ಯಾರೂ ಅಲ್ಲ:
ಕಲಬುರಗಿ: ಐದು ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಆದರೆ ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವು ಯಾರೂ ಅಲ್ಲ. ಈಗಾಗಲೇ ಉಚಿತ ಅಕ್ಕಿ, ಶಕ್ತಿ ಯೋಜನೆ, ಇಂದು ಗೃಹಜ್ಯೋತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಿ ಮಾದರಿಯಾಗುತ್ತೇವೆ. ಬಿಜೆಪಿಯವರೇ ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ದೇಶದ …
Read More »ಭಯೋತ್ಪಾದಕ ನಂಟು ಇರುವ ಕಾರಣ ಎನ್ಐಎ ಈ ಪ್ರಕರಣವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿದೆ.
ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಎರಡು ಬಾರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ನಾಗ್ಪುರದಿಂದ ಮುಂಬೈಗೆ ವರ್ಗಾವಣೆ ಮಾಡುವಂತೆ ಕೋರಿ ಮುಂಬೈ ಹೈಕೋರ್ಟ್ಗೆ ಎನ್ಐಎ ಮನವಿ ಸಲ್ಲಿಸಿದೆ. ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಮುಂಬೈ ಹೈಕೋರ್ಟ್ನ ನಾಗ್ಪುರ ಪೀಠದಲ್ಲಿ ಎನ್ಐಎ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಪ್ರಮುಖ ಆರೋಪಿ …
Read More »