ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …
Read More »ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ ಜೊತೆ …
Read More »ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರತಿಭಟನೆ
ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳಿಗೆ …
Read More »ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …
Read More »ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ
ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ. ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು
ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಸಂಕೇಶ್ವರ ಪೊಲೀಸ್ ಠಾಣೆ ಎದುರು ಬಾಣಂತಿ ಶವ ಇಟ್ಟು ದರಣಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣಕೇರಿ ಗ್ರಾಮಸ್ಥೆ ಕಿರಣ ಮಹಾದೇವ ಟಿಕ್ಕೆ ಅವರನ್ನು ಹುಕ್ಕೇರಿ ತಾಲೂಕಿನ ನಿಡಸೋಸಿ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕಳೆದ ಹನ್ನೆರಡು ದಿನಗಳ ಹಿಂದೆ ಹೆರಿಗೆಗಾಗಿ ದಾಖಲಿಸಲಾಗಿತ್ತು. ನಂತರ ಶಸ್ತ್ರ ಚಿಕಿತ್ಸೆ ಮಾಡುವ ಮುಖಾಂತರ ಹೆರಿಗೆಯನ್ನು ಮಾಡಿಸಲಾಗಿತ್ತು, ಮೃತ ಕಿರಣಿ ಗಂಡು ಮಗುವಿಗೆ …
Read More »ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ,
ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ …
Read More »ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ
ಬೆಂಗಳೂರು, ಆ.5: ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್(Rowdy Sheeter) ಸಿದ್ದಾಪುರ ಮಹೇಶ್ನನ್ನು ಹೊಸ ರೋಡ್ ಜಂಕ್ಷನ್ ಬಳಿ ದುಷ್ಕರ್ಮಿಗಳುಕೊಚ್ಚಿ ಕೊಲೆಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಿ ಗ್ಯಾಂಗ್ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ್, ಸುನೀಲ್ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇಬ್ಬರು ರೌಡಿಶೀಟರ್ ಮಧ್ಯೆ ದ್ವೇಷ ಹೌದು, ವಿಲ್ಸನ್ಗಾರ್ಡನ್ ನಾಗ ಮತ್ತು ಸಿದ್ದಾಪುರ …
Read More »ಆನ್‌ಲೈನ್ ಮೂಲಕ ಎಂಎಲ್‌ಸಿ ಹೆಚ್ ವಿಶ್ವನಾಥ್ ಪುತ್ರನಿಗೆ 1 ಲಕ್ಷಕ್ಕೂ ಅಧಿಕ ಹಣ ವಂಚನೆ
ಮೈಸೂರು, ಆ.5: ಆನ್‌ಲೈನ್ ವಂಚನೆ(Online Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್‌ಲೈನ್ ವಂಚನೆಯ ಜಾಲಕ್ಕೆ ಓರ್ವ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಹಿನ್ನಲೆ …
Read More »ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ:HDK
ಬೆಂಗಳೂರು: ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು. ಇದೀಗ ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಕಳೆದ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ …
Read More »