ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …
Read More »ಕೊಲೆ ಪ್ರಕರಣದಲ್ಲಿ ಪುತ್ರ ಮತ್ತು ಪತಿ ಭಾಗಿಯಾಗಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ
ಮೈಸೂರು: ಯುವಕನ ಕೊಲೆ ಪ್ರಕರಣದಲ್ಲಿ ಮಗ ಮತ್ತು ಪತಿ ಜೈಲುಪಾಲಾದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಸಾವಿನ ವಿಚಾರ ತಿಳಿದು ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟವರನ್ನು ಸಾಮ್ರಾಟ್ ಹಾಗೂ ಆತ್ಮಹತ್ಯೆಗೆ ಶರಣಾದವರನ್ನು ಇಂದ್ರಾಣಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕಳೆದ ಶನಿವಾರ ರಾತ್ರಿ ಮೈಸೂರು ನಗರದ ವಿದ್ಯಾನಗರದ 4 ನೇ ಕ್ರಾಸ್ನ ನಿವಾಸಿ ಬಾಲರಾಜ್ ಎಂಬುವನನ್ನು ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. …
Read More »ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ:H.D.K.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. …
Read More »ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು.
ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು. ಹೌದು ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಹತ್ತಿರ ಬತ್ತಿ ಶಿರಾಳ ಗ್ರಾಮದಲ್ಲಲ್ಲಿ ಪ್ರತಿವರ್ಷ ನಾಗರ ಪಂಚಮಿ ಯಂದು ನಿಜ ನಾಗರ ಹಾವಿನೊಂದಿಗೆ ಆಚರಿಸುತ್ತಾರೆ. ಒಂದು -ಎರೆಡು ದಿನ ಮುಂಚೆ ಕಾಡಿಗೆ ಹೋಗಿ ಸಾವಿರಾರು ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ, ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ, ಮಣ್ಣಿನ ಮಡಿಕೆಯಲ್ಲಿ …
Read More »ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
Read More »ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು.
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ರೂಪಾ ಮೌದ್ಗಿಲ್ ಪ್ರಕರಣದ ವಿಚಾರಣೆ ಎದುರಿಸಬೇಕಾದ …
Read More »ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ
ಬೆಂಗಳೂರು : ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …
Read More »ಚುನಾವಣೆ ಮುಹೂರ್ತಕ್ಕೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ರಾವ್!
ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು. ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ. ಬಿಆರ್‌ಎಸ್ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ …
Read More »ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!
ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ …
Read More »ನಮಗೆ ಒಟ್ಟು 124 ಟಿಎಂಸಿ ನೀರು ಬೇಕು; ಈಗ ಇರುವುದು 55 ಟಿಎಂಸಿ ಮಾತ್ರ: ಡಿ.ಕೆ.ಶಿವಕುಮಾರ್
ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …
Read More »
Laxmi News 24×7