ಚಿಕ್ಕಮಗಳೂರು: ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ. ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ …
Read More »2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಡುತ್ತಾರೆ ಎಂಬ ಭರವಸೆ ನಮಗಿದೆ ಎಂದು ಖರ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹೈಕಮಾಂಡ್ ಕರೆದ ಸಭೆಯಲ್ಲಿ ರಾಜ್ಯದ ಹಲವು ನಾಯಕರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, …
Read More »ಖಾಸಗಿ ಕಂಪೆನಿಯ ಕ್ರಿಮಿನಾಶಕ ಸಿಂಪಡಣೆಯಿಂದ ರೈತರೊಬ್ಬರ ಟೊಮೆಟೊ ಬೆಳೆ ಸಂಪೂರ್ಣ ನಾಶ
ದೊಡ್ಡಬಳ್ಳಾಪುರ : ಟೊಮೆಟೊಗೆ ಇವತ್ತು ಚಿನ್ನದ ಬೆಲೆ. ಉತ್ತಮ ಬೆಲೆ ಸಿಗುವ ಸಮಯಕ್ಕೆ ಟೊಮೆಟೊ ಬೆಳೆಯ ಭರ್ಜರಿ ಫಸಲು ಬಂದಿತ್ತು. ಆದರೆ, ಕಂಪನಿಯೊಂದರ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ್ದರಿಂದ ತಾಲೂಕಿನಲ್ಲಿ ಇಡೀ ಟೊಮೆಟೊ ಬೆಳೆ ಒಣಗಿನಿಂತಿದೆ ಎಂದು ರೈತರು ಆರೋಪಿಸಿದ್ದಾರೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡುಗೆ ಮನೆಯ ರಾಣಿ, ಕೆಂಪು ಸುಂದರಿ ಎಂದೇ ಟೊಮೆಟೊ ಪ್ರಸಿದ್ಧಿ ಪಡೆದಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಗೆ ಬಂಗಾರದ ಬೆಲೆ ಇದೆ. ಇವತ್ತು …
Read More »ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಸೂರತ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿ
ಸೂರತ್(ಗುಜರಾತ್) : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಅಪರಾಧಿಗೆ ಗುಜರಾತ್ನ ಸೂರತ್ ನ್ಯಾಯಾಲಯವು ಮರಣ ದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ 23 ವರ್ಷದ ಅಪರಾಧಿಯು ಪುಟ್ಟ ಮಗುವನ್ನು ಅತ್ಯಾಚಾರ ಎಸಗಿ ಹತ್ಯೆಗೈದಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಸೂರತ್ನ ಸಚಿನ್ ಪ್ರದೇಶದ ನಿವಾಸಿ ಇಸ್ಮಾಯಿಲ್ ಯೂಸುಫ್(23) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಗೆ …
Read More »ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಿಂದ …
Read More »ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳ ಹರಡುವಿಕೆಯನ್ನು ತಡೆಯುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುತಿಸಿದೆ.
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. 2015 ರಲ್ಲಿ, ವಾಟ್ಸ್ಆಯಪ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ …
Read More »ರಾತ್ರಿ ವೇಳೆ ಬೈಕ್ ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ
ಬೆಂಗಳೂರು: ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಡೆಲಿವರಿಬಾಯ್ಗಳನ್ನು ಗುರಿಯಾಗಿಸಿಕೊಂಡು ರಾತ್ರಿವೇಳೆ ಅವರ ಎಲೆಕ್ಟ್ರಿಕಲ್ ಬೈಕ್ ಗಳನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಅಸ್ಸೋಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು. ಈ ಹಿಂದೆ ಸೆಕ್ಯೂರಿಟಿಗಾರ್ಡ್ಗಳಾಗಿ ಕೆಲಸ ಮಾಡುತ್ತಿದ್ದರು. ಹಣದ ಆಸೆಗಾಗಿ ಅಪರಾಧ ಎಸಗಲು ನಿರ್ಧರಿಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಫುಡ್ ಡೆಲಿವರಿ ಮಾಡುವ ಯುವಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆಗೆ ಇಳಿದಿದ್ದರು. …
Read More »ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಸಮಿತಿ ರಚನೆ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ. ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು ಸಚಿವರಿಗೆ …
Read More »ವರ್ಗಾವಣೆ ದಂಧೆಯಲ್ಲಿ ಎಐಸಿಸಿಗೆ ಪಾಲು ನಿಗದಿಪಡಿಸಲು ದೆಹಲಿಯಲ್ಲಿ ಕಾಂಗ್ರೆಸ್ ಸಭೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ”ಕಾಂಗ್ರೆಸ್ನ ಡಬ್ಬಾ ಖಾಲಿಯಾಗಿದೆ ಮುಂದಿನ ಚುನಾವಣೆಗಾಗಿ ಡಬ್ಬಾ ತುಂಬಿಸಬೇಕಿದೆ. ಆ ಡಬ್ಬಾ ತುಂಬಿಸಲು ಇಂದು ಎಲ್ಲರನ್ನು ದೆಹಲಿಗೆ ಕರೆದು ವರ್ಗಾವಣೆ ದಂಧೆ ಕುರಿತು ಚರ್ಚೆ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆಯ ಪಾಲು ಮುಂದಿನ ಚುನಾವಣೆಯಲ್ಲಿ ಎಐಸಿಸಿಗೆ ಎಷ್ಟು ಎಂದು ಫಿಕ್ಸ್ ಮಾಡುವ ಕುರಿತು ಸಭೆ ನಡೆಯುತ್ತಿದೆ” ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ದೆಹಲಿ ಕಾಂಗ್ರೆಸ್ ಸಭೆಯನ್ನು ಟೀಕಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ …
Read More »ನೆಚ್ಚಿನ ಶಿಕ್ಷಕಿಗೆ ಮಕ್ಕಳ ಕಣ್ಣೀರ ಬೀಳ್ಕೊಡುಗೆ
ಕಲಬುರಗಿ : ಗುರು ಬ್ರಹ್ಮ, ಗುರು ವಿಷ್ಣು ಗುರುದೇವೋ ಮಹೇಶ್ವರ.. ಗುರು ಸಾಕ್ಷಾತ್ ಪರಬ್ರಹ್ಮ.. ತಸ್ಮೈ ಶ್ರೀ ಗುರುವೇ ನಮಃ.. ಎಂಬಂತೆ ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಉನ್ನತ ಸ್ಥಾನ ನೀಡಲಾಗುತ್ತೆ. ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸುವ ಗುರುಗಳನ್ನು ಗೌರವದಿಂದ ಕಾಣುತ್ತಾರೆ. ಶಿಕ್ಷಕರು ಸಹ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಜ್ಞಾನಾರ್ಜನೆಗೆ ಶ್ರಮಿಸುತ್ತಾರೆ. ಈ ನಡುವೆ ಗುರು ಶಿಷ್ಯರ ನಡುವೆ ಸಂಬಂಧ ಗಟ್ಟಿಯಾಗಿ ಬೆಳೆಯುತ್ತೆ. ಸರ್ಕಾರಿ ಶಾಲೆಯಲ್ಲಿ 9 ವರ್ಷ ಸೇವೆ …
Read More »