ಬೆಳಗಾವಿ: ”ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು. ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ …
Read More »ಕಲಬುರಗಿಯಲ್ಲಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬಳು ಆತ್ಮಹತ್ಯೆ
ಕಲಬುರಗಿ: 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಜ್‌ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಜ್ ಸುಲ್ತಾನಪುರ ಗ್ರಾಮದ ಹಿರಾಬಾಯಿ ದುಬಲಗುಂಡ್ಡಿ (38) ಹಾಗೂ ಇವರ ಪುತ್ರಿ ಸೌಜನ್ಯ ದುಬಾಲಗುಂಡ್ಡಿ (4) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋಮವಾರ ಬೆಳಗ್ಗೆ ಮನೆಯಿಂದ ಮಗುವಿನೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಗ್ರಾಮದ ಹೊರವಲಯದ …
Read More »ದೆಹಲಿ ಪ್ರವಾಸ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ
ವಿಜಯಪುರ: ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಶಾಸಕಾಂಗ ಸಭೆಯಲ್ಲಿ ಕೆಲ ಶಾಸಕರ ಅಸಮಾಧಾನ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಲ ಸಚಿವರನ್ನು ದೆಹಲಿಗೆ ಕರೆದಿದ್ದಾರೆ. ಅವರಲ್ಲಿ ನಾನು ಹೋಗುತ್ತಿದ್ದೇನೆ. ಮಂತ್ರಿ ಮಂಡಲ ರಚನೆಯಾದ ಮೇಲೆ ಹೈಕಮಾಂಡ್ ಭೇಟಿಯಾಗಿಲ್ಲ. ಈ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದೇವೆ ಅಷ್ಟೆ. ಬೆಂಗಳೂರಿಗೆ ರಾಹುಲ್ …
Read More »ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಪರಾರಿ ಬೆಚ್ಚಿಬಿದ್ದ ಗ್ರಾಮಸ್ಥರು
ಮಂಡ್ಯ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪತ್ನಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (28) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿರುವ ಆರೋಪಿ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಜೊತೆ ಗಣೇಶ್ ಮದುವೆ ಆಗಿತ್ತು. ಈ ದಂಪತಿಗೆ ಏಳು ವರ್ಷದ ಗಂಡು ಮಗ …
Read More »ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆ
ಮಂಗಳೂರು: ಇತ್ತೀಚೆಗೆ ಆರೋಪಿಗಳು ಪೊಲೀಸರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಬೆನ್ನಲ್ಲೇ ಮಾಧ್ಯಮವೊಂದರ ವರದಿಗಾರನ ಮೇಲೂ ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಘಟನೆ ನಗರದ ಕಾವೂರು ಬಳಿಯ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಮಂಗಳೂರಿನ ಸ್ಥಳೀಯ ಖಾಸಗಿ ನ್ಯೂಸ್ ವೆಬ್ಸೈಟ್ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಕ್ಷಣ ವರದಿಗಾರ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. …
Read More »ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳು ಆಗಸ್ಟ್ 15 ರಿಂದ ಇ ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು : ಕೃಷ್ಣ ಬೈರೇಗೌಡ
ಕಲಬುರಗಿ: ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಂದು ಪ್ರಕರಣದಲ್ಲಿ ಗ್ರಾಮ ಪಂಚಾಯತಿಯ ಸ್ವಚ್ಛತಾ ಸಂಕೀರ್ಣಕ್ಕೆ …
Read More »ಹಿಂದಿನ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆ ಆದೇಶವನ್ನ ಕಾಂಗ್ರೆಸ್ ಹಿಂಪಡೆದಿದೆ.
ಬೆಂಗಳೂರು: ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿನ ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅನುದಾನ ತಡೆಹಿಡಿದ ಆದೇಶವನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ …
Read More »ತಮ್ಮ ಕಚೇರಿಯ ಗುಮಾಸ್ತನನ್ನು ಸರ್ಕಾರಿ ವಾಹನದಲ್ಲಿ ಮನೆಗೆ ಡ್ರಾಪ್ ಮಾಡುವ ಮೂಲಕ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ.
ಶಿವಮೊಗ್ಗ: ತಮ್ಮ ಕಚೇರಿಯ ಗುಮಾಸ್ತರೊಬ್ಬರು ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಅವರನ್ನು ಬೀಳ್ಕೊಟ್ಟು, ಎಲ್ಲರಿಗೂ ಮಾದರಿಯಾಗಿದ್ದಾರೆ. ಸಾಗರದ ಉಪ ವಿಭಾಗಧಿಕಾರಿಯಾದ ಪಲ್ಲವಿ ಸಾತೇನಹಳ್ಳಿ ಅವರು ತಮ್ಮ ಕಚೇರಿಯಲ್ಲಿ ಡಿ ಗ್ರೂಪ್ ನೌಕರರಾಗಿ ನಿವೃತ್ತಿಯಾದ ಕೃಷ್ಣಪ್ಪ ಅವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರ ವಯೋನಿವೃತ್ತಿ …
Read More »ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೇಳೆ ಗರ್ಡರ್ ಬಿದ್ದು ಸಾವು ನೋವು
ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್‌ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ. ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ …
Read More »ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ,:CM
ಬೆಂಗಳೂರು : 2023ನೇ ಸಾಲಿನ ಮೈಸೂರು ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಣೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ನಾಡಹಬ್ಬ ಮೈಸೂರು ದಸರಾ 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ದಸರಾ ಮಹೋತ್ಸವ ಚಾಮುಂಡೇಶ್ವರಿ ಬೆಟ್ಟದಲ್ಲಿ 15.10.2023ರಂದು ಬೆಳಗ್ಗೆ 10.15-10.36 ಶುಭ ಲಗ್ನದಲ್ಲಿ ಉದ್ಘಾಟನೆ ಆಗಲಿದೆ. ದಸರಾ ಪಾರಂಪರಿಕ ಉತ್ಸವವಾಗಿದೆ. ದಸರಾ ಮಹೋತ್ಸವ ಹೆಚ್ಚು …
Read More »