Breaking News

ರಾಷ್ಟ್ರೀಯ

ಬಿಎಸ್​ಇ ಸೆನ್ಸೆಕ್ಸ್​ ಮತ್ತು ನಿಫ್ಟಿ ಇಂದು ಏರಿಕೆಯಲ್ಲಿ ಕೊನೆಗೊಂಡಿವೆ.

ಮುಂಬೈ : ಮೂರು ದಿನಗಳಿಂದ ನಡೆದಿದ್ದ ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಪ್ರಕ್ರಿಯೆ ಬುಧವಾರ ಅಂತ್ಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಇಂದು ಏರಿಕೆಯೊಂದಿಗೆ ಮುಕ್ತಾಯಗೊಂಡವು. ಬಿಎಸ್‌ಇಯ 30-ಷೇರುಗಳ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 351.49 ಪಾಯಿಂಟ್‌ಗಳು ಅಥವಾ ಶೇಕಡಾ 0.53 ರಷ್ಟು ಏರಿಕೆಯೊಂದಿಗೆ 66,707.20 ಪಾಯಿಂಟ್‌ಗಳಿಗೆ ಕೊನೆಗೊಂಡಿತು. ಎನ್‌ಎಸ್‌ಇ ನಿಫ್ಟಿ 97.70 ಪಾಯಿಂಟ್‌ಗಳು ಅಥವಾ ಶೇಕಡಾ 0.5 ರಷ್ಟು ಏರಿಕೆಯೊಂದಿಗೆ 19,778.30 ಪಾಯಿಂಟ್‌ಗಳ ಮಟ್ಟದಲ್ಲಿ ಕೊನೆಗೊಂಡಿತು. ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಶೇರುಗಳು ಗರಿಷ್ಠ ಶೇ …

Read More »

ರಸ್ತೆ ಬದಿಯಲ್ಲಿ ಸಿಕ್ಕ 2 ಸಾವಿರ ಮುಖ ಬೆಲೆಯ ಗರಿ ಗರಿ ನೋಟುಗಳು?

ಬೆಂಗಳೂರು: ನಗರದ ಹೊರವಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್​​ಗಳಲ್ಲಿ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿವೆ.   ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ …

Read More »

ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ,

ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡದಲ್ಲಿ ಅಬ್ಬರಿಸುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ನದಿ ತೀರದ ಪ್ರದೇಶದಲ್ಲಿ ಸೃಷ್ಟಿಯಾಗಿದ್ದ ಪ್ರವಾಹ ಕೊಂಚ ಇಳಿಕೆಯಾಗಿದೆ. ಆದರೆ, ಪ್ರವಾಹ ಹಾಗೂ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದಾಗಿ ಹಲವು ಹೆದ್ದಾರಿಗಳು ಬಂದ್​ ಆಗಿವೆ. ಜನ ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಮುಂದುವರಿದಿದೆ. ಉತ್ತರ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಆರ್ಭಟಿಸುತ್ತಿದ್ದ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಪರಿಣಾಮ ಗಂಗಾವಳಿ, ಅಘನಾಶಿನಿ, ವರದಾ ಹಾಗೂ …

Read More »

B.S.F. ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ

ಪಲಾಮು (ಜಾರ್ಖಂಡ್): ಬಿಎಸ್‌ಎಫ್ ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪಿಡಿಎಸ್ ಡೀಲರ್ (ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಯವ) ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೇದಿನಿ ರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ಹಿನ್ನೆಲೆ ಕತ್ತಿಯಿಂದ ಹಲ್ಲೆ: ಇಡೀ ಘಟನೆಯು ಪಲಮುವಿನ ಪಾಡ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲ್ಹಾನಾದಲ್ಲಿ ನಡೆದಿದೆ. …

Read More »

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು

ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣಕ್ಕೆ 10 ಕೋಟಿ ರೂ. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಹಿತ್ ಕುಮಾರ್ ವಿ. ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಮೆಟ್ರೋ ರೈಲು …

Read More »

ಬೆಂಗಳೂರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಮಿಳುನಾಡಿನ ಧರ್ಮಪುರಿಯಿಂದ ಬೆಂಗಳೂರು ನಗರಕ್ಕೆ ಬಸ್​ನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ ಮೌಲ್ಯದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕಳೆದ 25 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಬನಶಂಕರಿ, ಸಿ.ಕೆ.ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ ಹಾಗು ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರದ ವಿವಿಧ ಪೊಲೀಸ್ …

Read More »

ಸರ್ವರ್ ಸ್ಲೋ ಆಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ ನೋಂದಣಿ ವಿಳಂಬ.

ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಸುರಿಯುವ ಮಳೆಯಲ್ಲೇ ಮಹಿಳೆಯರು ಗಂಟೆಗಟ್ಟಲೇ ನಿಂತಿರುವುದು ನಗರದ ರಿಸಾಲ್ದಾರ್ ಗಲ್ಲಿಯ ಬೆಳಗಾವಿ ಒನ್ ಕೇಂದ್ರದಲ್ಲಿ ಕಂಡು ಬಂತು. ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ಸಿಕ್ಕ ದಿನದಿಂದಲೂ ಇಲ್ಲಿನ ಬೆಳಗಾವಿ ಒನ್ ಕೇಂದ್ರದಲ್ಲಿ ಮಹಿಳೆಯರ ದಟ್ಟಣೆ ನಿತ್ಯವೂ ಇದ್ದು, ಮಂಗಳವಾರ ಸಹ ಸುರಿವ ಮಳೆ ಲೆಕ್ಕಿಸದೇ ಛತ್ರಿ ಹಿಡಿದುಕೊಂಡು ಸಾಲಿನಲ್ಲಿ ನಿಂತ ಮಹಿಳೆಯರು ತಮ್ಮ ಸರದಿ ಯಾವಾಗ ಬರುತ್ತೊ ಎಂದು ಕಾಯುತ್ತಾ ನಿಂತಿದ್ದರು. …

Read More »

ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಪತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಕಥೆ ಸೃಷ್ಟಿಸಿ ಕಣ್ಣೀರು ಹಾಕಿದ್ದ ಹಂತಕಿ ಪತ್ನಿ ಜೈಲು ಪಾಲಾಗಿರುವ ಘಟನೆ ನಡೆದಿದೆ. ಕಳೆದ ಜೂ. 15 ರಂದು ಕಾಶೆಪ್ಪ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕೊಂಕಲ್ ಗ್ರಾಮದ ಜಮೀನಿನ ಮರವೊಂದಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಕಾಶೆಪ್ಪ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಹೀಗಾಗಿ, ಸಾವಿನ ಬಗ್ಗೆ …

Read More »

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಹಾಮಳೆಗೆ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕಲಬುರಗಿ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆ ಸೇರಿದಂತೆ ಜೇವರ್ಗಿ ತಾಲೂಕಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜೇವರ್ಗಿ ತಾಲೂಕಿನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಮನೆ ಮಾಳಿಗೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿರಾಳ ಬಿ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಗಂಡ ಬಸವರಾಜ ಬಳಗಾರ (35) ಮೃತಪಟ್ಟ ಮಹಿಳೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಮನೆಯ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದು …

Read More »

ವೀಸಾ ಅರ್ಜಿದಾರರೇ ಗಮನಿಸಿ..ಅಮೆರಿಕ ರಾಯಭಾರಿ ಕಚೇರಿ ಗ್ರಾಹಕ ಕೇಂದ್ರ ನವೀಕರಣ, ಜುಲೈ 25 ರಿಂದ 4 ದಿನ ಸೇವೆ ಇರಲ್ಲ

ನವದೆಹಲಿ: ವೀಸಾ ಅರ್ಜಿದಾರರೇ ಎಚ್ಚರ!, ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿ ತನ್ನ ಗ್ರಾಹಕ ಸೇವಾ ಕೇಂದ್ರವನ್ನು ಬೇರೊಂದು ಪ್ಲಾಟ್​ಫಾರ್ಮ್​ಗೆ ವರ್ಗ ಮಾಡುತ್ತಿದ್ದು, ಜುಲೈ 25 ರಿಂದ 28 ರವರೆಗೆ ವೀಸಾ ಅರ್ಜಿಗಳ ಸ್ವೀಕಾರ, ಹಣ ಪಾವತಿ ಸೇವೆ ಇರುವುದಿಲ್ಲ.   ಹೀಗಂತ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತು ಅಮೆರಿಕ ಧೂತಾವಾಸ ಟ್ವೀಟ್​ ಮೂಲಕ ತಿಳಿಸಿದೆ. ಅಂದರೆ, ಅಮೆರಿಕಕ್ಕೆ ಹೋಗಬಯಸುವ ಪ್ರಯಾಣಿಕರು ವೀಸಾ ಬಯಸಿ ಅಮೆರಿಕ ಧೂತಾವಾಸಕ್ಕೆ ಕರೆ, ಅರ್ಜಿ ಸಲ್ಲಿಕೆ, …

Read More »