ಕೊರ್ಬಾ (ಛತ್ತೀಸ್ಗಢ) : ಹಲ್ಲಿಯೊಂದು ಬಾಯಿಯೊಳಗೆ ನುಗ್ಗಿದ ಪರಿಣಾಮ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಕೊರ್ಬಾದಲ್ಲಿ ನಡೆದಿದೆ. ಆದರೆ, ಹಲ್ಲಿಗೆ ಮನುಷ್ಯನನ್ನು ಸಾಯಿಸುವಷ್ಟು ವಿಷ ಇರುವುದಿಲ್ಲ. ಇದಕ್ಕೆ ಬೇರೆಯದೇ ಕಾರಣ ಇರಬೇಕು ಎಂಬುದು ವೈದ್ಯರ ಅನುಮಾನ. ಹಲ್ಲಿ ಕೂಡ ಮಗುವಿನ ಬಾಯಿಯಲ್ಲೇ ಸಾವನ್ನಪ್ಪಿದ್ದು, ಅಚ್ಚರಿ ಉಂಟು ಮಾಡಿದೆ. ಕೊರ್ಬಾ ಜಿಲ್ಲೆಯ ಸುಮೇಧಾ ನಾಗಿನ್‌ಭಂಥ ಗ್ರಾಮದಲ್ಲಿ ಈ ಅಚ್ಚರಿ ಘಟಿಸಿದೆ. ಮಲಗಿದ್ದ ವೇಳೆ ಮಗುವಿನ ಬಾಯಿಯಲ್ಲಿ ಹಲ್ಲಿ ಇರುವುದನ್ನು ತಾಯಿ …
Read More »2022-23 ಹಣಕಾಸು ವರ್ಷಕ್ಕೆ EPF ನ ಬಡ್ಡಿ ದರವನ್ನು 8.15 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ.0.05ರಷ್ಟು ಹೆಚ್ಚಾಗಿದೆ.
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಲ್ಲಿನ ಹಣದ ಮೇಲಿನ ಬಡ್ಡಿ ದರವನ್ನು (EPFO Interest rate) ಅಂತಿಮಗೊಳಿಸಲಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಶೇ 8.15 ಬಡ್ಡಿ ನೀಡಲು ಕೇಂದ್ರೀಯ ಟ್ರಸ್ಟಿಗಳ ಮಂಡಳಿ (ಸಿಬಿಟಿ) ತೆಗೆದುಕೊಂಡ ನಿರ್ಧಾರವನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಸಂಬಂಧ ಇಪಿಎಫ್‌ಒ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಈ ವರ್ಷದ ಮಾರ್ಚ್‌ನಲ್ಲಿ ಇಪಿಎಫ್ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು (ಸಿಬಿಟಿ) 2022-23ರ ಹಣಕಾಸು ವರ್ಷಕ್ಕೆ ಶೇ 8.15 …
Read More »ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ 18 ಟಿಎಂಸಿ ನೀರು, ರೈತರಿಗೆ ಸಂತಸ
ಬಳ್ಳಾರಿ, ರಾಯಚೂರು ರೈತರಲ್ಲಿ ಕೊಂಚ ಆಶಾಭಾವನೆ ಮೂಡಿದೆ. 10 ದಿನದಲ್ಲಿ 18 ಟಿಎಂಸಿ ನೀರು ಜಲಾಶಯಕ್ಕೆ ಬಂದಿದ್ದು, ರೈತರು ಮೊದಲ ಬೆಳೆ ಭತ್ತದ ನಾಟಿ ಶುರು ಮಾಡಿದ್ದಾರೆ. ತುಂಗಭದ್ರಾ ಜಲಾಶಯ ವಿಜಯನಗರ: ತ್ರಿವಳಿ ರಾಜ್ಯಗಳಿಗೆ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ಒಳಹರಿವಿನ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಭರವಸೆ ಮೂಡಿದೆ. ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದ್ದಂತೆ ಇತ್ತ ರೈತರು ಮೊದಲನೆ ಬೆಳೆ …
Read More »ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ ಮಳೆಯಾಗಿದೆ.
ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …
Read More »ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …
Read More »ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ: ಮಾಂಸ ಜೋಳದ ಹೊಲದಲ್ಲಿ ಪತ್ತೆ.. ಇಬ್ಬರ ಬಂಧನ
ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ವಿವರ: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ …
Read More »ಆಗಸ್ಟ್ 1ರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರ 3 ರೂ. ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿದರು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ ಮೂರು ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆ ಸಿಎಂ ಸಭೆಕಳೆದ ತಿಂಗಳು ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದು, ಅಂದೇ …
Read More »ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್
ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …
Read More »ಮಹಾರಾಷ್ಟ್ರದ ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆ ಖಾನಾಪುರ ತಾಲ್ಲೂನಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.:
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಪ್ರತಿ ಗಂಟೆಗೂ ಹೆಚ್ಚಳವಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಕೆಳಹಂತದ ಏಳು ಸೇತುವೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಕೃಷ್ಣಾ ನದಿ ಹಾಗೂ ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಏಳು ಕೆಳಹಂತದ ಸೇತುವೆಗಳು ಈಗಾಗಲೇ ಜಲಾವೃತಗೊಂಡು ನದಿಯ ದಂಡೆಯ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಲಿಕವಾಡ – ದತ್ತವಾಡ ಸಂಪರ್ಕ ಕಲ್ಪಿಸುವ ಸೇತುವೆ …
Read More »ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ
ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ, ಸುಮಾರು 4 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಾರು, ಮೊಬೈಲ್ ಹಾಗು ಹಣ ಜಪ್ತ ಮಾಡಿ ಇಬ್ಬರೂ ಆರೋಪಿತರನ್ನು ದಸ್ತಗಿರ ಮಾಡಿದ್ದು, ಇನ್ನು 2 ಆರೋಪಿತರು ಫರಾರಿ ಇರುತ್ತಾರೆ. ರೇಡ್ ತಂಡಕ್ಕೆ ನಗದು …
Read More »