ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಮತ್ತು ಅತ್ಯಾಚಾರದ ವಿಡಿಯೋಗಳನ್ನು ಹರಡುವುದನ್ನು ನಿಯಂತ್ರಿಸಲು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿ ನೀಡಿದ ವರದಿಯನ್ನು ನ್ಯಾಯಾಲಯ ಪರಿಶೀಲಿಸಿದೆ. ತಜ್ಞರ ವರದಿ ಪರಿಶೀಲಿಸಿದ ಬಳಿಕ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. 2015 ರಲ್ಲಿ, ವಾಟ್ಸ್ಆಯಪ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ …
Read More »ರಾತ್ರಿ ವೇಳೆ ಬೈಕ್ ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ
ಬೆಂಗಳೂರು: ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಡೆಲಿವರಿಬಾಯ್ಗಳನ್ನು ಗುರಿಯಾಗಿಸಿಕೊಂಡು ರಾತ್ರಿವೇಳೆ ಅವರ ಎಲೆಕ್ಟ್ರಿಕಲ್ ಬೈಕ್ ಗಳನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಅಸ್ಸೋಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು. ಈ ಹಿಂದೆ ಸೆಕ್ಯೂರಿಟಿಗಾರ್ಡ್ಗಳಾಗಿ ಕೆಲಸ ಮಾಡುತ್ತಿದ್ದರು. ಹಣದ ಆಸೆಗಾಗಿ ಅಪರಾಧ ಎಸಗಲು ನಿರ್ಧರಿಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಫುಡ್ ಡೆಲಿವರಿ ಮಾಡುವ ಯುವಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆಗೆ ಇಳಿದಿದ್ದರು. …
Read More »ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಸಮಿತಿ ರಚನೆ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ. ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು ಸಚಿವರಿಗೆ …
Read More »ವರ್ಗಾವಣೆ ದಂಧೆಯಲ್ಲಿ ಎಐಸಿಸಿಗೆ ಪಾಲು ನಿಗದಿಪಡಿಸಲು ದೆಹಲಿಯಲ್ಲಿ ಕಾಂಗ್ರೆಸ್ ಸಭೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ”ಕಾಂಗ್ರೆಸ್ನ ಡಬ್ಬಾ ಖಾಲಿಯಾಗಿದೆ ಮುಂದಿನ ಚುನಾವಣೆಗಾಗಿ ಡಬ್ಬಾ ತುಂಬಿಸಬೇಕಿದೆ. ಆ ಡಬ್ಬಾ ತುಂಬಿಸಲು ಇಂದು ಎಲ್ಲರನ್ನು ದೆಹಲಿಗೆ ಕರೆದು ವರ್ಗಾವಣೆ ದಂಧೆ ಕುರಿತು ಚರ್ಚೆ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆಯ ಪಾಲು ಮುಂದಿನ ಚುನಾವಣೆಯಲ್ಲಿ ಎಐಸಿಸಿಗೆ ಎಷ್ಟು ಎಂದು ಫಿಕ್ಸ್ ಮಾಡುವ ಕುರಿತು ಸಭೆ ನಡೆಯುತ್ತಿದೆ” ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ದೆಹಲಿ ಕಾಂಗ್ರೆಸ್ ಸಭೆಯನ್ನು ಟೀಕಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ …
Read More »ನೆಚ್ಚಿನ ಶಿಕ್ಷಕಿಗೆ ಮಕ್ಕಳ ಕಣ್ಣೀರ ಬೀಳ್ಕೊಡುಗೆ
ಕಲಬುರಗಿ : ಗುರು ಬ್ರಹ್ಮ, ಗುರು ವಿಷ್ಣು ಗುರುದೇವೋ ಮಹೇಶ್ವರ.. ಗುರು ಸಾಕ್ಷಾತ್ ಪರಬ್ರಹ್ಮ.. ತಸ್ಮೈ ಶ್ರೀ ಗುರುವೇ ನಮಃ.. ಎಂಬಂತೆ ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಉನ್ನತ ಸ್ಥಾನ ನೀಡಲಾಗುತ್ತೆ. ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸುವ ಗುರುಗಳನ್ನು ಗೌರವದಿಂದ ಕಾಣುತ್ತಾರೆ. ಶಿಕ್ಷಕರು ಸಹ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಜ್ಞಾನಾರ್ಜನೆಗೆ ಶ್ರಮಿಸುತ್ತಾರೆ. ಈ ನಡುವೆ ಗುರು ಶಿಷ್ಯರ ನಡುವೆ ಸಂಬಂಧ ಗಟ್ಟಿಯಾಗಿ ಬೆಳೆಯುತ್ತೆ. ಸರ್ಕಾರಿ ಶಾಲೆಯಲ್ಲಿ 9 ವರ್ಷ ಸೇವೆ …
Read More »”ಠೇವಣಿ ಏಜೆಂಟ್ಗಳಿಂದ ಪಿಗ್ಮಿ ಕಲೆಕ್ಷನ್ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ.
ಬೆಳಗಾವಿ: ”ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು. ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ …
Read More »ಕಲಬುರಗಿಯಲ್ಲಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬಳು ಆತ್ಮಹತ್ಯೆ
ಕಲಬುರಗಿ: 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಜ್‌ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಜ್ ಸುಲ್ತಾನಪುರ ಗ್ರಾಮದ ಹಿರಾಬಾಯಿ ದುಬಲಗುಂಡ್ಡಿ (38) ಹಾಗೂ ಇವರ ಪುತ್ರಿ ಸೌಜನ್ಯ ದುಬಾಲಗುಂಡ್ಡಿ (4) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋಮವಾರ ಬೆಳಗ್ಗೆ ಮನೆಯಿಂದ ಮಗುವಿನೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಗ್ರಾಮದ ಹೊರವಲಯದ …
Read More »ದೆಹಲಿ ಪ್ರವಾಸ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ
ವಿಜಯಪುರ: ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಶಾಸಕಾಂಗ ಸಭೆಯಲ್ಲಿ ಕೆಲ ಶಾಸಕರ ಅಸಮಾಧಾನ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಲ ಸಚಿವರನ್ನು ದೆಹಲಿಗೆ ಕರೆದಿದ್ದಾರೆ. ಅವರಲ್ಲಿ ನಾನು ಹೋಗುತ್ತಿದ್ದೇನೆ. ಮಂತ್ರಿ ಮಂಡಲ ರಚನೆಯಾದ ಮೇಲೆ ಹೈಕಮಾಂಡ್ ಭೇಟಿಯಾಗಿಲ್ಲ. ಈ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದೇವೆ ಅಷ್ಟೆ. ಬೆಂಗಳೂರಿಗೆ ರಾಹುಲ್ …
Read More »ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಪರಾರಿ ಬೆಚ್ಚಿಬಿದ್ದ ಗ್ರಾಮಸ್ಥರು
ಮಂಡ್ಯ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪತ್ನಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (28) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿರುವ ಆರೋಪಿ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಜೊತೆ ಗಣೇಶ್ ಮದುವೆ ಆಗಿತ್ತು. ಈ ದಂಪತಿಗೆ ಏಳು ವರ್ಷದ ಗಂಡು ಮಗ …
Read More »ಪತ್ರಕರ್ತನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆ
ಮಂಗಳೂರು: ಇತ್ತೀಚೆಗೆ ಆರೋಪಿಗಳು ಪೊಲೀಸರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಬೆನ್ನಲ್ಲೇ ಮಾಧ್ಯಮವೊಂದರ ವರದಿಗಾರನ ಮೇಲೂ ನೈತಿಕ ಪೊಲೀಸ್ ಗಿರಿ ನಡೆದಿದೆ. ಈ ಘಟನೆ ನಗರದ ಕಾವೂರು ಬಳಿಯ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಮಂಗಳೂರಿನ ಸ್ಥಳೀಯ ಖಾಸಗಿ ನ್ಯೂಸ್ ವೆಬ್ಸೈಟ್ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಕ್ಷಣ ವರದಿಗಾರ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. …
Read More »
Laxmi News 24×7