Breaking News

ರಾಷ್ಟ್ರೀಯ

ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳು ಆಗಸ್ಟ್ 15 ರಿಂದ ಇ ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು : ಕೃಷ್ಣ ಬೈರೇಗೌಡ

ಕಲಬುರಗಿ: ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಂದು ಪ್ರಕರಣದಲ್ಲಿ ಗ್ರಾಮ ಪಂಚಾಯತಿಯ ಸ್ವಚ್ಛತಾ ಸಂಕೀರ್ಣಕ್ಕೆ …

Read More »

ಹಿಂದಿನ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆ ಆದೇಶವನ್ನ ಕಾಂಗ್ರೆಸ್ ಹಿಂಪಡೆದಿದೆ.

ಬೆಂಗಳೂರು: ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿನ ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅನುದಾನ ತಡೆಹಿಡಿದ ಆದೇಶವನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ …

Read More »

ತಮ್ಮ ಕಚೇರಿಯ ಗುಮಾಸ್ತನನ್ನು ಸರ್ಕಾರಿ ವಾಹನದಲ್ಲಿ ಮನೆಗೆ ಡ್ರಾಪ್​ ಮಾಡುವ ಮೂಲಕ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ.

ಶಿವಮೊಗ್ಗ: ತಮ್ಮ ಕಚೇರಿಯ ಗುಮಾಸ್ತರೊಬ್ಬರು ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಅವರನ್ನು ಬೀಳ್ಕೊಟ್ಟು, ಎಲ್ಲರಿಗೂ ಮಾದರಿಯಾಗಿದ್ದಾರೆ. ಸಾಗರದ ಉಪ ವಿಭಾಗಧಿಕಾರಿಯಾದ ಪಲ್ಲವಿ ಸಾತೇನಹಳ್ಳಿ ಅವರು ತಮ್ಮ ಕಚೇರಿಯಲ್ಲಿ ಡಿ ಗ್ರೂಪ್​ ನೌಕರರಾಗಿ ನಿವೃತ್ತಿಯಾದ ಕೃಷ್ಣಪ್ಪ ಅವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರ ವಯೋನಿವೃತ್ತಿ …

Read More »

ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೇಳೆ ಗರ್ಡರ್ ಬಿದ್ದು ಸಾವು ನೋವು

ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್‌ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ. ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ …

Read More »

ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ,:CM

ಬೆಂಗಳೂರು : 2023ನೇ ಸಾಲಿನ ಮೈಸೂರು ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಣೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.   ವಿಧಾನಸೌಧದಲ್ಲಿ ನಾಡಹಬ್ಬ ಮೈಸೂರು ದಸರಾ 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ದಸರಾ ಮಹೋತ್ಸವ ಚಾಮುಂಡೇಶ್ವರಿ ಬೆಟ್ಟದಲ್ಲಿ 15.10.2023ರಂದು ಬೆಳಗ್ಗೆ 10.15-10.36 ಶುಭ ಲಗ್ನದಲ್ಲಿ ಉದ್ಘಾಟನೆ ಆಗಲಿದೆ. ದಸರಾ ಪಾರಂಪರಿಕ‌ ಉತ್ಸವವಾಗಿದೆ. ದಸರಾ ಮಹೋತ್ಸವ ಹೆಚ್ಚು …

Read More »

ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೀದರ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ …

Read More »

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ZP CEO ಹರ್ಷಲ್ ಭೋಯರ್ ರನ್ನು ಸನ್ಮಾನಿಸಲಾಯಿತು

ಬೆಳಗಾವಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉತ್ತೇಜನ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ಅವರನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ  ವತಿಯಿಂದ ಸನ್ಮಾನಿಸಲಾಯಿತು. ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾರ್ಡ್ ಪದಾಧಿಕಾರಿಗಳು ಇತ್ತೀಚೆಗೆ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಭೋಯರ್ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆಯ ದಲಿತ ಸಮುದಾಯದ ಬಡಾವಣೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು. …

Read More »

ಭಾರಿ ಮಳೆಯಿಂದ 283 ಮನೆಗಳು ಭಾಗಶಃ ಹಾನಿ

ಕಲಬುರಗಿ: ಕಳೆದ ಜೂ.1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶಃ ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಇದಲ್ಲದೇ 20 ಕಿಮೀ ರಾಜ್ಯ ಹೆದ್ದಾರಿ, 27.50 ಕಿಮೀ ಜಿಲ್ಲಾ ಹೆದ್ದಾರಿ, 100 ಕಿಮೀ ಗ್ರಾಮೀಣ ರಸ್ತೆಗಳು ಸೇರಿದಂತೆ ಒಟ್ಟು 147.50 ಕಿಮೀ ರಸ್ತೆ, 84 ಸೇತುವೆಗಳು, 89 ಶಾಲಾ ಕೊಠಡಿಗಳು ಹಾಗೂ 38 ಅಂಗನವಾಡಿ …

Read More »

ಆಗಸ್ಟ್ 1ರಂದು ಕೇರಳ, ಆಗಸ್ಟ್ 2ರಂದು ಕರ್ನಾಟಕ ಮತ್ತು ಆಗಸ್ಟ್ 3ರಂದು ತಮಿಳುನಾಡು ಎಐಸಿಸಿ ಮತ್ತು ರಾಜ್ಯ ತಂಡಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ

ತಮಿಳುನಾಡು ಎಐಸಿಸಿ ಮತ್ತು ರಾಜ್ಯ ತಂಡಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಲಿದ್ದಾರೆ. ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಗದ್ದಲದ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಆಗಸ್ಟ್​ 1 ರಿಂದ 129 ಸದಸ್ಯರನ್ನು ಲೋಕಸಭೆಗೆ ಕಳುಹಿಸುವ ದಕ್ಷಿಣ ಭಾರತದ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿನ ಪಕ್ಷದ ಸಿದ್ಧತೆಗಳನ್ನು ಖರ್ಗೆ ಅವಲೋಕನ ಮಾಡಲಿದ್ದಾರೆ.   2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು …

Read More »

ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ

ನೊಣಗಳ ಉಪಟಳದಿಂದ ಬೇಸತ್ತಿರುವ ದಾವಣಗೆರೆ ತಾಲೂಕಿನ ಹತ್ತೂರು ಗ್ರಾಮಕ್ಕೆ ತಕ್ಕಮಟ್ಟಿಗೆ ಮುಕ್ತಿ ಸಿಕ್ಕಂತಾಗಿದೆ.‌ ‘ದಾವಣಗೆರೆಯ ಗ್ರಾಮಗಳಲ್ಲಿ ಹೆಚ್ಚಾಯಿತು ನೊಣಗಳ ಉಪಟಳ ಆತಂಕದಲ್ಲಿ ಜನ’ ಶೀರ್ಷಿಕೆಯಡಿಯಲ್ಲಿ ಈಟಿವಿ ಭಾರತ್ ಜುಲೈ 29 ರಂದು ವರದಿ ಮಾಡಿತ್ತು. ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಬ್ಬಾಳು ಗ್ರಾಮ ಪಂಚಾಯತಿ ಸಿಬ್ಬಂದಿ ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ ಮಾಡಿದ್ದಾರೆ. ಔಷಧಿ ಸಿಂಪಡಣೆ ಮಾಡಿದ್ರೆ ಕೆಲ ಹೊತ್ತು ಮಾತ್ರ ನೊಣಗಳ ಕಾಟ ದೂರವಾಗ್ಬಹುದು. …

Read More »