ಬೆಳಗಾವಿ: ಕಳೆದ 15 ದಿನಗಳಿಂದ ಉತ್ತಮ ಮಳೆಯಾಗಿರುವ ಹಿನ್ನೆಲೆ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಭೂಮಿ ಹದಗೊಳಿಸುವಲ್ಲಿ ನಿರತರಾಗಿದ್ದಾರೆ. . ಈ ಬಾರಿ ಮುಂಗಾರು ಮಳೆ ಎರಡು ತಿಂಗಳು ವಿಳಂಬವಾಗಿದ್ದರಿಂದ ಸವದತ್ತಿ ತಾಲೂಕಿನ ಕರಿಕಟ್ಟಿ ಸೇರಿ ಸುತ್ತಲಿನ ಹಲವಾರು ಗ್ರಾಮದ ರೈತರು ಬಿತ್ತನೆ ಮಾಡಿರಲಿಲ್ಲ. ಇತ್ತೀಚೆಗೆ ನಿರಂತರವಾಗಿ ಮಳೆಯಾಗಿದ್ದು, ಮಳೆರಾಯ ಈಗ ಒಂದಿಷ್ಟು ವಿರಾಮ ಕೊಟ್ಟಿದ್ದಾನೆ. ಹೀಗಾಗಿ ಬೀಜ, ಗೊಬ್ಬರ ತಂದು ಮನೆಯಲ್ಲಿ ಸಂಗ್ರಹ ಮಾಡಿದ್ದ ರೈತರು …
Read More »ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ: ಬೊಮ್ಮಾಯಿ
ಬೆಳಗಾವಿ : “ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಅಧಿಕಾರಿಗಳ ವರ್ಗಾವಣೆಗಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲರೂ ವರ್ಗಾವಣೆ ದಂಧೆಯಲ್ಲಿದ್ದಾರೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ಇದೀಗ ವರ್ಗಾವಣೆ ದಂಧೆಯಲ್ಲಿ ಚೌಕಾಸಿ ನಡೆಯುತ್ತಿದೆ” ಎಂದು ಹೇಳಿದರು. “ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ …
Read More »ಲಂಚ: ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಸೇರಿ ನಾಲ್ವರ ಬಂಧಿಸಿದ ಸಿಬಿಐ
ನವದೆಹಲಿ: ಲಂಚ ಪಡೆದ ಗಂಭೀರ ಆರೋಪದಡಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಇಬ್ಬರು ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿಗಳು, ಹಿರಿಯ ತಾಂತ್ರಿಕ ಸಹಾಯಕ ಮತ್ತು ಅಲೋಕ್ ಇಂಡಸ್ಟ್ರೀಸ್‌ನ ಸಹವರ್ತಿ ಸೇರಿದಂತೆ ಒಟ್ಟು ನಾಲ್ವರನ್ನು ಶನಿವಾರ ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ತನಿಖೆಯ ವೇಳೆ ಅಧಿಕಾರಿಗಳಿಂದ ಸುಮಾರು 59.80 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ. ನವದೆಹಲಿಯಲ್ಲಿರುವ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ನಿರ್ದೇಶಕ, ಹಿರಿಯ …
Read More »ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಸಭೆ
ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ನಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಮತ್ತು ಕರ್ನಾಟಕ ಕಾಂಗ್ರೆಸ್ ಉನ್ನತ ನಾಯಕರ ನಡುವೆ ಮೊದಲ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, …
Read More »ಕ. ಸಾ.ಪ. ವತಿಯಿಂದ ನೀಡಲಾಗುವ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ 2018, 2019, 2020, 2021, 2022 ಹಾಗೂ 2023ನೇ ಸಾಲಿನ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದಿರುವುದರಿಂದ ಈ ಬಾರಿ 6 ಮಂದಿ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …
Read More »ಅಬ್ಬರದ ಮಳೆಗೆ 130 ಮನೆಗಳಿಗೆ ಹಾನಿ
ಹಾವೇರಿ: ಜಿಲ್ಲೆಯಲ್ಲಿ ಕಳೆದ ಏಳು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಶನಿವಾರ ಮಳೆರಾಯ ಸ್ವಲ್ಪ ಬಿಡುವು ನೀಡಿದ್ದಾನೆ. ಈ ಮಧ್ಯೆ ಕಳೆದು ಏಳು ದಿನಗಳಲ್ಲಿ ಸರಾಸರಿ ವಾಡಿಕೆ ಮಳೆ 33.4 ಮಿಮೀ ಮಳೆಯಾಗಬೇಕಿತ್ತು. ಆದರೆ, ಸುಮಾರು 108 ಮಿಮೀ ಮಳೆಯಾಗಿದೆ. ಒಟ್ಟಾರೆಯಾಗಿ ಮೇ, ಜೂನ್, ಜುಲೈ ತಿಂಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಸುಮಾರು 1130 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ 989 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು 14 ಮನೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಹಾವೇರಿ ನಗರದಲ್ಲಿ ಎರಡು …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ
ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. …
Read More »ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ ವ್ಯಕ್ತಿಯೊರ್ವಕಂಬಳಿ ಹಾಸಿ ಕುಳಿತ
ವಿಜಯಪುರ… ವಿಜಯಪುರ ಜಿಲ್ಲೆಯಲ್ಲಿ ಮೊಹರಂ ಸಂಭ್ರಮ ಕಳೆಗಟ್ಟಿದೆ. ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ ವ್ಯಕ್ತಿಯೊರ್ವ ಕಂಬಳಿ ಹಾಸಿ ಕುಳಿತ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ. ಇಂದು ನಸುಕಿನ ಜನ ಜಾವ ಗ್ರಾಮದ ಅಲಾಯಿ ದೇವರ ಎದುರುಗೆ ಹಾಕಿದ ನಿಗಿನಿಗಿ ಕೆಂಡದ ಮೇಲೆ ಯಲ್ಲಾಲಿಂಗ ಹಿರೇಹಾಳ ಎನ್ನುವವರು ನೀಗಿ ನೀಗಿ ಕೆಂಡದ ಮೇಲೆ ಕೆಲ ಕ್ಷಣ ಕಂಬಳಿ ಹಾಸಿ ಭಕ್ತಿ ಸಮರ್ಪನೆ ಮಾಡಿದರು. ಬಳಿಕ ಬರಿಗೈಯ್ಯಲ್ಲಿ …
Read More »ಶಿವಶರಣ ಹಡಪದ ಅಪ್ಪಣ್ಣ ನವರ 889 ನೇ ಜಯಂತಿ
ಶ್ರೀ ಶಿವಶರಣ ಹಡಪದ ಅಪ್ಪಣ್ಣವರ 889 ನೇ ಜಯಂತಿ ಮಹೋತ್ಸವ ನಿಮಿತ್ಯ ಕಾಗವಾಡ ತಾಲೂಕಿನ ಉಗಾರದಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮ ನೆರವೇರಿತು. ಶುಕ್ರವಾರ ರಂದು ಪರಮಪೂಜ್ಯ ಜಗದ್ಗುರು ಅನ್ನದಾನ ಭಾರತೀ ಅಪ್ಪನ ಮಹಾಸ್ವಾಮೀಜಿ ಸುಕ್ಷೇತ್ರ ತಂಗಡಗಿ ಇವರ ದಿವ್ಯ ಸಾನಿಧ್ಯದಲ್ಲಿ ಸಮಾಜದ ಎಲ್ ಸುಮಂಗಲೆರು ಒಂದುಗೂಡಿ ಜಲ ಕುಂಬ ತೆಗೆದುಕೊಂಡು ಬಸವೇಶ್ವರ ವೃತ್ತದಿಂದ ಹನುಮಾನ ಮಂದಿರದ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡು ಹನುಮಾನ ಮಂದಿರ ಸಭಾಭವನದಲ್ಲಿ ಬೃಹತ್ ಸಮಾವೇಶ ನೆರವೇರಿಸಿದರು. …
Read More »ವಿದೇಶಿ ರಾಜಕೀಯಕ್ಕೆ ಹೊಸ ತಿರುವು ಯುರೋಪ್ ಪ್ರವಾಸದಲ್ಲಿ ಹೆಚ್ಡಿಕೆ ಕುಟುಂಬ
ಬೆಂಗಳೂರು: ಸರ್ಕಾರ ಕೆಡವಲು ಸಿಂಗಪುರ್ನಲ್ಲಿ ಕುಳಿತು ತಂತ್ರ ಹೆಣೆಯಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಫೋಟೋಗಳ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತರಾಗಿ ಯೂರೋಪ್ ಪ್ರವಾಸದಲ್ಲಿರುವ ಫೋಟೋಗಳನ್ನು ಜೆಡಿಎಸ್ ನಾಯಕರು ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಯುರೋಪ್‌ನ ಫಿನ್ಲ್ಯಾಂಡ್ನಲ್ಲಿ ಹೆಚ್ಡಿಕೆ ಹಾಗೂ ಕುಟುಂಬ ಸದಸ್ಯರು ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಅಧಿವೇಶನ ಮುಗಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಸಹೋದರ ಬಾಲಕೃಷ್ಣ …
Read More »
Laxmi News 24×7