ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಪ್ರಸಿದ್ಧ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಅದರಲ್ಲಿಯೂ ಈಗ ಮಳೆ ಬರುತ್ತಿರುವುದರಿಂದ ಅದರ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಆದರೆ ಪ್ರವಾಸಕ್ಕೆಂದು ಬರುವ ಜನರು ಅಲ್ಲಿ ಮೋಜು ಮಸ್ತಿ ಮಾಡಿ ಪ್ರಕೃತಿಯನ್ನು ಹಾಳು ಮಾಡುವುದರಲ್ಲಿ ಹಿಂಜರಿಯುವುದಿಲ್ಲ. ಹೀಗಾಗಿ ಈ ಸಂಭ್ರಮಕ್ಕೆ ಕಡಿವಾಣ ಬೀಳಲಿದೆ. ಇನ್ಮುಂದೆ ಪ್ರವಾಸಿಗರು ದೂದ್ ಸಾಗರ್ನಲ್ಲಿ ಅಡ್ಡಾದಿಡ್ಡಿ ಓಡಾಡುವಂತಿಲ್ಲ. ಈ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ. ನೈಋತ್ಯ ರೈಲ್ವೆಯು, …
Read More »ಹಾಸನದಲ್ಲಿ ಹಫ್ತಾ ವಸೂಲಿ ದಂಧೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ. ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿವ್ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಹಲ್ಲೆಗೊಳಗಾದ ಸೂರ್ಯಪ್ರಭ ಆರೋಪಿಸಿದ್ದಾರೆ. ಭಾನುವಾರ ಸಂಜೆ ಅಂಗಡಿಗೆ ಬಂದ ಆರೋಪಿ ವಿಕ್ಕಿ ಹಫ್ತಾ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದರಿಂದ ಮಾಲೀಕ ಸ್ವಲ್ಪ …
Read More »ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರ ಆತ್ಮಹತ್ಯೆ
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವುದು ಬಿಟ್ಟು ಕಾಂಗ್ರೆಸ್ ಮಹಾಘಟಬಂಧನ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇವತ್ತಿನ ಮಹಾಘಟಬಂಧನ್ನ ವ್ಯವಸ್ಥಾಪಕರು ಜೆಡಿಎಸ್ ಸಂತತಿ ಮುಗಿದಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ …
Read More »ಚಪ್ಪಲಿ ಕಳೆದು ಹೋಗಿದೆ ಎಂದು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ
ಬೆಂಗಳೂರು : ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ‘ಕಾರ್ …
Read More »ಈ ಬಾರಿ ಜನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದ ಎಸ್.ಆರ್. ಹಿರೇಮಠ
ಧಾರವಾಡ: ಜೆಡಿಎಸ್ ಅನ್ನು ಮಾತಿನಿಂದ ಪರಿಗಣಿಸಬಾರದು. ನಡತೆಯಿಂದ ಪರಿಗಣಿಸಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಹೇಳಿದ್ದಾರೆ. ಧಾರವಾಡದಲ್ಲಿಂದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಮಾತನಾಡಿ ಅವರು, “2006ರಲ್ಲಿ ಇದೇ ಹೆಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಅದರ ಪರಿಣಾಮಗಿ 2008ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು. ನನ್ನ ಅಭಿಪ್ರಾಯದಲ್ಲಿ ಅವರ ಜಾತ್ಯತೀತತೆ ಎನ್ನುವುದು ನಾಮಕೇವಾಸ್ತೆ ಮಾತ್ರ” ಎಂದು ಹೇಳಿದ್ದಾರೆ. “ಜೆಡಿಎಸ್ ಆಚರಣೆಯಲ್ಲಿ ಜಾತ್ಯತೀತತೆ ಇಲ್ಲ, …
Read More »ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ ಸಚಿವ ಈಶ್ವರ್ ಖಂಡ್ರೆ
ಮೈಸೂರು: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಜನರ ಅಹವಾಲಿಗೆ ಸ್ಪಂದಿಸಿದರು. ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ …
Read More »ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕೆಎಸ್ಆರ್ಟಿಸಿ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದ್ರೆ …
Read More »ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ
ಮುಂಗಾರು ಮಳೆ ವಿಫಲ ಹಿನ್ನಲೆ, ಕುಡಿಯೋ ನೀರು ಜಾನುವಾರುಗಳ ಮೇವಿಗಾಗಿ ಪ್ರತಿಭಟನೆ ನಡೆಸಿರುವ ಘಟನೆ ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಸಲಾಯಿತು. ಜತ್ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಕ್ರಮ್ ದಾದಾ ಸಾವಂತ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಮಹಾರಾಷ್ಟ್ರ ಸರ್ಕಾರ ಕುಡಿಯೋ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕದ ಗಡಿ ಭಾಗದ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಎಂದು ಆರೋಪಿಸಿದರು. …
Read More »ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಅಫ್ಸರ್ ಪಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »