ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ …
Read More »ಬಿಲೀವ್ ಫೌಂಡೇಶನ್ ವತಿಯಿಂದ ಹಸುವಿನ ಅಂತ್ಯಸಂಸ್ಕಾರ
ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ, ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.
Read More »ಬಾಯಿ ಚಪ್ಪರಿಸಿ ಹಾವು ತಿಂದ ಜಿಂಕೆ!, ಹೌಹಾರುವ ವಿಡಿಯೋ ಇಲ್ಲಿದೆ ನೋಡಿ
ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ. ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ …
Read More »‘ಅನ್ನಭಾಗ್ಯ’ ಯೋಜನೆ: ಇಂದು ಈ ಜಿಲ್ಲೆಯ ‘ಫಲಾನುಭವಿ’ಗಳ ಖಾತೆಗೆ ಹಣ ಜಮಾ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಬಳಿಕ, ಇಂದು ಇತರೆ ಜಿಲ್ಲೆಗಳ ಪಡಿತರ ಚೀಟಿದಾರರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. …
Read More »ಬೆಂಗಳೂರಲ್ಲಿ ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ: ಮೈಮೇಲಿದ್ದ ಚಿನ್ನ, ಫೋನ್ ಪೇಯಿಂದ ಹಣ ಎಗರಿಸಿ ಎಸ್ಕೇಪ್
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿದ ದರೋಡೆಕೋರರು, ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಬಳಿಕ ಹಣ ಮತ್ತು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ವಿದ್ಯಾರಣ್ಯಪುರದ ರಾಮಚಂದ್ರಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು. ಈ ಪೈಕಿ ಮೂವರು ಖಾಸಗಿ ಕಂಪನಿಯಲ್ಲಿ …
Read More »“ಚಂದ್ರಯಾನ 3 ರಾಷ್ಟ್ರದ ಭರವಸೆ, ಕನಸುಗಳನ್ನು ಹೊತ್ತೊಯ್ಯಲಿದೆ”:
ನವದೆಹಲಿ: ಕೋಟ್ಯಾಂತರ ಕಂಗಳು ಎದುರು ನೋಡುತ್ತಿರುವ ಚಂದ್ರಯಾನ 3 ಉಡಾವಣೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗ ಪ್ರಧಾನಿ ಮೋದಿ ಅವರು ಯೋಜನೆಯ ಹಿಂದಿರುವ ಎಲ್ಲಾ ಭಾರತದ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ಈ ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯಲಿದೆ” ಎಂದು ಬಣ್ಣಿಸಿದ್ದಾರೆ. ‘ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023 ಜುಲೈ 14 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಲ್ಪಡುತ್ತದೆ. ನಮ್ಮ …
Read More »ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.
ಬೆಂಗಳೂರು: ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಸಂಬಂಧ ಸಮಗ್ರ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರವು 2022ರ ಸೆ.25ರಂದು ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ಧೀಕ್ಷಿತ್ ಅವರಿದ್ದ ಪೀಠ, ಈ ಸಂಬಂಧ …
Read More »ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್, ಚಂದ್ರಯಾನ 2 ರ ಲ್ಯಾಂಡರ್‌ಗಿಂತ ಹೇಗೆ ಭಿನ್ನವಾಗಿದೆ
ಬೆಂಗಳೂರು: ಚಂದ್ರಯಾನ-2 ರಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಪಾಠ ಕಲಿತಿದೆ. ಇದೇ ಅನುಭವಗಳನ್ನು ಆಧರಿಸಿ, ಇಸ್ರೋ ಜಾಗತಿಕ ಬಾಹ್ಯಾಕಾಶ ಸಂಶೋಧನಾ ರಂಗದಲ್ಲಿ ಭಾರತದ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹೊಂದಿದೆ. ಇಸ್ರೋದ ಎಂಜಿನಿಯರ್‌ಗಳು ಚಂದ್ರಯಾನ-3 ರಲ್ಲಿ ವಿಕ್ರಮ್ ಲ್ಯಾಂಡರ್‌ನ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ನಿರ್ಣಾಯಕ ವಿನ್ಯಾಸ ಹಾಗೂ ಮಾರ್ಪಾಡುಗಳು ಮತ್ತು ತ್ವರಿತ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಭಾರತದ ಚಂದ್ರಯಾನ 3 ನೇ ಯೋಜನೆಯ ಭಾಗವಾಗಿ ಇಂದು …
Read More »4 ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ ಪತ್ತೆ
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧಕ್ಕೆ ಕಳೆದ ವಾರ ಶಾಸಕ ಸೋಗಿನಲ್ಲಿ ವ್ಯಕ್ತಿಯೋರ್ವ ತೆರಳಿ ಸದನದೊಳಗೆ ಪ್ರವೇಶಿಸಿದ ಪ್ರಕರಣ ಬೆಳಕಿಗೆ ಬಂದ ನಂತರ ತಪಾಸಣೆ ಚುರುಕುಗೊಳಿಸಿದ್ದ ಪೊಲೀಸರು ಕಳೆದ ನಾಲ್ಕು ದಿನಗಳಲ್ಲಿ 250ಕ್ಕಿಂತ ಹೆಚ್ಚು ನಕಲಿ ಪಾಸ್ಗಳನ್ನು ಪತ್ತೆ ಹಚ್ಚಿದ್ದಾರೆ. ಸಚಿವರ ಹಾಗೂ ಶಾಸಕರ ಪಾಸ್ಗಳನ್ನು ಕಲರ್ ಝರಾಕ್ಸ್ ಮಾಡಿ ಭದ್ರತಾ ಸಿಬ್ಬಂದಿ ಹಾಗೂ ಮಾರ್ಷಲ್ಗಳಿಗೆ ಯಾಮಾರಿಸುತ್ತಿದ್ದವರ ಖರ್ತನಾಕ್ ಪ್ಲಾನ್ ಬಹಿರಂಗಗೊಂಡಿದೆ. ಇದೀಗ ನಕಲಿ ಪಾಸ್ ಬಳಸಿ ವಿಧಾನಸೌಧಕ್ಕೆ ಒಳಪ್ರವೇಶಿಸುತ್ತಿದ್ದವರಿಗೆ …
Read More »ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫಿಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರ ಹಿಡಿದು ಕಂಪನಿ ಕಚೇರಿಗೆ ನುಗ್ಗಿದ್ದ ಫಿಲಿಕ್ಸ್ ಹಾಗೂ ಇತರರು ಖಾಸಗಿ ಕಂಪನಿಯ …
Read More »