Breaking News

ರಾಷ್ಟ್ರೀಯ

ವಿಧಾನಸಭೆ ಕಲಾಪದಲ್ಲಿ ನೀರಾವರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು: ತೀರ್ಥಹಳ್ಳಿಯಲ್ಲಿ 70 ಕಾಮಗಾರಿ ಆಗಿದ್ದು, ಹೆಚ್ಚಿನವು ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಭೋಸರಾಜ್‌ ತಿಳಿಸಿದರು. ಆರಗ ಜ್ಞಾನೇಂದ್ರ ಸಣ್ಣ ನೀರಾವರಿ ಸಚಿವರಿಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸದ್ಯ 26 ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಗುತ್ತಿಗೆದಾರರಿಗೆ ಸಮರ್ಪಕವಾಗಿ ಆದ್ಯತೆ ಮೇರೆಗೆ ಹಣ ಸಂದಾಯ ಮಾಡುತ್ತಿದ್ದೇವೆ. ಹಣಕಾಸು ವ್ಯವಸ್ಥೆ ಆಗುತ್ತಿದ್ದಂತೆ ಸಂದಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕೆಲಸ ವಿಳಂಬ ಆಗುವುದಿಲ್ಲ. …

Read More »

ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ …

Read More »

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ

ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ. ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್‌ಮೀಟರ್ ಪ್ರಕಾರ 1.4 ಶತಕೋಟಿ. ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ …

Read More »

ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿ

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು. ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು …

Read More »

ಸಾಂಸ್ಕೃತಿಕ ಪರಂಪರೆ ಭೂತಕಾಲದ ಆಧಾರ ಸ್ತಂಭ:ಪ್ರಹ್ಲಾದ್​ ಜೋಶಿ

ವಿಜಯನಗರ: ಸಂಸ್ಕೃತಿ ಎಂಬುದು ಕೇವಲ ಗುರುತಾಗದೇ ಜಾಗತಿಕ ಸಾಂಗತ್ಯವಾಗಿ ಮಾರ್ಪಡಿಸಿಕೊಳ್ಳಲು ಜಿ-20 ಸಭೆ ಮಾರ್ಗವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಆರಂಭಗೊಂಡ 3ನೇ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ತಂಡದ(ಸಿಡಬ್ಲ್ಯೂಜಿ) ಸಭೆಯನ್ನು ಇಂದು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯನ್ನು ಉದ್ಘಾಟಿಸಿದ ಪ್ರಹ್ಲಾದ್​ ಜೋಶಿನಾಲ್ಕು ಪ್ರಮುಖ ಆದ್ಯತೆಗಳಾದ ಆಯಾ ದೇಶಗಳ ಕಲಾಕೃತಿಗಳನ್ನು ಮೂಲ ಸ್ಥಾನಕ್ಕೆ …

Read More »

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​. ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ …

Read More »

ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿಹೆಲಿಕ್ಯಾಪ್ಟರ್​ ಮೂಲಕ ಶ್ರೀನಗರ ತಲುಪಿದ ಧಾರವಾಡದ ಯಾತ್ರಿಗಳು!

ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್​ನಲ್ಲಿ ಪ್ರಯಾಣಿಸಿ ಸದ್ಯ ಐವರು …

Read More »

ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು

ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …

Read More »

ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆ

ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ. ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. …

Read More »

ಎಂಪಿ ಎಲೆಕ್ಷನ್​​​​ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ,‌ ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …

Read More »