Breaking News

ರಾಷ್ಟ್ರೀಯ

ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …

Read More »

ಆನ್​​​ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …

Read More »

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶರಾಗಿದ್ದಾರೆ.

ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಅನಾರೋಗ್ಯದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಪುತ್ರಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು ಎನ್ನಲಾಗಿದೆ. ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ. ಸಿ.ಎಂ.ನಿಂಬಣ್ಣವರ್​ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ‌.

Read More »

ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ: H.K. ಪಾಟೀಲ್

ಗದಗ: ಹವಾಮಾನ ವೈಪರೀತ್ಯ ಕಾರಣ ಅಮರನಾಥ ಯಾತ್ರೆಗೆ ತೆರಳಿದ್ದ 300 ಜನ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ನಿನ್ನೆ ರಾತ್ರಿ ಹವಾಮಾನ ವೈಪರೀತ್ಯ ಹಾಗೂ ಅತಿಯಾದ ಚಳಿಯಿಂದಾಗಿ ಸಮಸ್ಯೆಯಾಗಿತ್ತು. ಅಮರನಾಥ ದೇವಸ್ಥಾನದ ಆಡಳಿತ ಮಂಡಳಿ, ಮಿಲಿಟರಿ ಅಧಿಕಾರಿಗಳು ಎಲ್ಲರಿಗೂ ಅಗತ್ಯ ನೆರವನ್ನು ನೀಡಿದ್ದು, ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ಹಾಗೂ ಗುಡ್ಡ ಕುಸಿತದಿಂದಾಗಿ …

Read More »

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …

Read More »

ಸಿಎಂ ಸಿದ್ದರಾಮಯ್ಯ ಬಜೆಟ್​ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್‌ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್‌ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …

Read More »

ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು

ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್‌ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಬಜೆಟ್‌ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಈ ಬಜೆಟ್‌ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್‌ …

Read More »

ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿ‌ಯೊಬ್ಬರು ರಾತ್ರೋರಾತ್ರಿ ನಾಪತ್ತೆ

ಗಡಿ ಜಿಲ್ಲೆಯ ಜೈನ ಮುನಿ‌ಯೊಬ್ಬರು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇದ್ದಕ್ಕಿದ್ದಂತೆ ಬಸದಿಯಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕಾಣೆ ಆಗಿರೋದು ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಜರನ್ನ ಹುಡುಕಿಕೊಡುವಂತೆ ಭಕ್ತರು ಈಗ ಬೆಳಗಾವಿ ಜಿಲ್ಲಾ ಪೊಲೀಸರ ಮೊರೆ ಹೋಗಿದ್ದಾರೆ.15 ವರ್ಷದಿಂದ ಬಸದಿಯಲ್ಲಿದ್ದ ಸಂತನ ಮಿಸ್ಸಿಂಗ್ ಕೇಸ್ ಬೆಳಗಾವಿ ಜಿಲ್ಲೆ ಜನರನ್ನ ಬೆಚ್ಚಿಬೀಳಿಸಿದೆ.   .ಹದಿಹರೆಯದ ಯುವಕ, ಯುವತಿಯರು ಮಿಸ್ಸಿಂಗ್ ಕೇಸ್ ಇತ್ತಿಚೆಗೆ ಸಾಮಾನ್ಯವಾಗಿದೆ. ಆದರೆ ಈಗ ಇಡೀ ಸಮಾಜವೇ ಆತಂಕ …

Read More »

ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಕೇಳಿದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ

ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ …

Read More »

ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ

ಮುಂಬೈ: ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ ಉಂಟಾಗಿದೆ. ಉದ್ಧವ್​ ಆಪ್ತ ಬಣದಲ್ಲಿದ್ದ ವಿಧಾನಪರಿಷತ್​ ಉಪಸಭಾಪತಿ, ಎಂಎಲ್​ಸಿ ನೀಲಂ ಗೊರ್ಹೆ ಅವರು ಸಿಎಂ ಏಕನಾಥ್​ ಶಿಂಧೆ ಅವರ ಬಣಕ್ಕೆ ಜಿಗಿಯಲಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳಷ್ಟೇ ಶಾಸಕಿ ಮನೀಶಾ ಕಾಯಂದೆ ಅವರು ಬಣ ತೊರೆದ ಬಳಿಕ ಇದು ಮತ್ತೊಬ್ಬ ನಾಯಕಿಯ ನಿರ್ಗಮನವಾಗುತ್ತಿರುವುದು ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಶಿವಸೇನೆಯ ಸಿಎಂ ಏಕನಾಥ್​ ಶಿಂಧೆ ನೇತೃತ್ವದಲ್ಲಿ …

Read More »