ಮೈಸೂರು: ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಜನರ ಅಹವಾಲಿಗೆ ಸ್ಪಂದಿಸಿದರು. ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ …
Read More »ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕೆಎಸ್ಆರ್ಟಿಸಿ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದ್ರೆ …
Read More »ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ
ಮುಂಗಾರು ಮಳೆ ವಿಫಲ ಹಿನ್ನಲೆ, ಕುಡಿಯೋ ನೀರು ಜಾನುವಾರುಗಳ ಮೇವಿಗಾಗಿ ಪ್ರತಿಭಟನೆ ನಡೆಸಿರುವ ಘಟನೆ ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಸಲಾಯಿತು. ಜತ್ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಕ್ರಮ್ ದಾದಾ ಸಾವಂತ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಮಹಾರಾಷ್ಟ್ರ ಸರ್ಕಾರ ಕುಡಿಯೋ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕದ ಗಡಿ ಭಾಗದ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಎಂದು ಆರೋಪಿಸಿದರು. …
Read More »ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಅಫ್ಸರ್ ಪಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು …
Read More »ಸಂತೋಷ್ ಆತ್ಮಹತ್ಯೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೆಎಸ್ ಈಶ್ವರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ದೇಶದ ಕೆಲಸ ಮಾಡಲು ಇಂದಿನ ನ್ಯಾಯಾಲಯದ ತೀರ್ಪು ಪ್ರೇರಣೆ ಕೊಟ್ಟಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಚೌಡೇಶ್ವರಿ ನನ್ನನ್ನು ಇವತ್ತು ನಿರ್ದೋಷಿ ಅಂತ ಹೇಳಿ ನ್ಯಾಯ ಕೊಟ್ಟಿದ್ದಾಳೆ. ನನ್ನಲ್ಲಿ ಮತ್ತಷ್ಟು ಆ ದೈವ ಭಕ್ತಿ ನನಗೆ ಹೆಚ್ಚಿಗೆ ಆಗಲು ಅವಕಾಶ ಆಯಿತು. ಆ ತಾಯಿಯ …
Read More »ಭೀಕರ ಪ್ರವಾಹ.. ಉತ್ತರ ಭಾರತಕ್ಕೆ ಬೈಕ್ ರೈಡ್ ಹೋಗಿದ್ದ ಕಾರವಾರದ ಯುವಕರು ಬದುಕಿ ಬಂದದ್ದೇ ಪವಾಡ!
ಕಾರವಾರ(ಉತ್ತರ ಕನ್ನಡ): ಬೈಕ್ ಏರಿ ಉತ್ತರಭಾರತ ಸುತ್ತುವ ಕನಸಿನೊಂದಿಗೆ ಕಾರವಾರದಿಂದ ತೆರಳಿದ್ದ ಸಾಹಸಿ ಯುವಕರ ತಂಡವೊಂದು ಹಿಮಾಚಲ ಪ್ರದೇಶದ ಬಳಿ ಸಂಭವಿಸಿದ ಪ್ರವಾಹದಿಂದ ಕೂದಲೆಳೆ ಅಂತರದಿಂದ ಪಾರಾಗಿದೆ. ಪ್ರಯಾಣದುದ್ದಕ್ಕೂ ಹಲವು ಅಡೆತಡೆಗಳನ್ನು ಎದುರಿಸಿ ಇದೀಗ ಸುರಕ್ಷಿತವಾಗಿ ಮರಳಿರುವ ಯುವಕರ ತಂಡ ತಮಗಾದ ಭಯಾನಕ ಅನುಭವ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ. ಬೈಕ್ ಕ್ರೇಜ್ ಇರುವ ಬಹುತೇಕರಿಗೆ ದೂರದ ಊರುಗಳಿಗೆ ಪ್ರವಾಸ ಕೈಗೊಳ್ಳುವ ಹಂಬಲ ಕೂಡ ಇರುತ್ತದೆ. …
Read More »”ಜನರು ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” : ಎಸ್.ಆರ್. ಹೀರೇಮಠ
ಮೈಸೂರು: ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾಠ ಕಲಿಸಿದಂತೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕೂಡಾ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು” ಎಂದು ಜನಾಂದೋಲನ ಮಹಾಮೈತ್ರಿ ಅಧ್ಯಕ್ಷ ಎಸ್. ಆರ್. ಹಿರೇಮಠ ಕೇಂದ್ರ ಸರ್ಕಾರದ ವಿರುದ್ಧ ಗರಂ ಆದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಹಾಗೂ ಸಂಘ ಪರಿವಾರದ ಶಕ್ತಿಗಳ ಡಬಲ್ ಎಂಜಿನ್ ಸರಕಾರವನ್ನು ಸೋಲಿಸುವ ಮೂಲಕ ಐತಿಹಾಸಿಕ ನಿರ್ಣಯ …
Read More »ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಈ ಬಾರಿ ಸುಮಾರು 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಪಕ್ಷ ಹೊಂದಿದೆ. ಹೆಚ್ಚಿನ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ಮೇಲೆ ಹೆಚ್ಚಿನ ಒತ್ತಡ ಹಾಕಲು ಹೈಕಮಾಂಡ್ ಮುಂದಾಗಿದೆ. ಮುಖ್ಯಮಮತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು …
Read More »ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ದಾವಣಗೆರೆ: ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ನೂತನ ಕಾನೂನು ತರುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಭೇಟಿ ನೀಡಿ ಪ್ರಸನ್ನಾನಂದ ಪುರಿ ಶ್ರೀಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಕಾನೂನು ತರುತ್ತಿದ್ದೇವೆ. ಬಡವರ ಪ್ರಕರಣಗಳು ಕೋರ್ಟ್ನಲ್ಲಿ ವಿಳಂಭವಾಗುತ್ತಿವೆ. ಈ ಕೇಸ್ಗಳು ಅದಷ್ಟು ಬೇಗ ಇತ್ಯರ್ಥವಾಗಬೇಕು. ಹೀಗಾಗಿ ಅದರ ಬಗ್ಗೆ ಕಾನೂನು ತರಲು ಮುಂದಾಗಿದ್ದೇವೆ …
Read More »ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
ವಿಜಯಪುರ: ಖಾಲಿ ಖಾಲಿಯಾಗಿ ಕಾಣುತ್ತಿದ್ದ ಜಿಲ್ಲೆಯ ಜೀವಜಲ ಆಲಮಟ್ಟಿ ಜಲಾಶಯಕ್ಕೆ ಕೊನೆಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಡ್ಯಾಂನಲ್ಲಿ ನೀರಿಲ್ಲದಿರುವುದಕ್ಕೆ ಜನರು ಆತಂಕಗೊಂಡಿದ್ದರು. ಅದರಲ್ಲೂ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ಮಳೆಯಾಗದ ಹಿನ್ನೆಲೆಯಲ್ಲಿ ನದಿತೀರದ ಜನರು ಬರದ ಭೀತಿಯಲ್ಲಿದ್ದರು. ಆದ್ರೆ ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ಕೃಷ್ಣಾ ನದಿಗೆ ನೀರು ಹರಿದುಬರುತ್ತಿದೆ. ನದಿತೀರದ ಜನರ ಮುಖದಲ್ಲಿಯೂ ಮಂದಹಾಸ …
Read More »
Laxmi News 24×7