ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ವಾಹನಗಳನ್ನು ಮಚ್ಚೆ ನಗರ ಪಂಚಾಯಿತಿಗೆ ನೀಡಲಾಯಿತು 15ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಹಣಕಾಸು ಆಯೋಗದ ನಿಧಿಯಲ್ಲಿ ಶಾಸಕ ಅಭಯ ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಮಚ್ಚೆ ನಗರ ಪಂಚಾಯಿತಿಗೆ ವಿವಿಧ ವಾಹನಗಳನ್ನು ಖರೀದಿಸಲಾಗಿದೆ. ಈ …
Read More »ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆತ..
ಚೆನ್ನೈ: ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ಎಸೆದಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ 4.30ಕ್ಕೆ ಮೈಸೂರಿನಿಂದ ಚೆನ್ನೈಗೆ ಆಗಮಿಸಿದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುರಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲು ನಿಲ್ದಾಣ ತಲುಪಿದೆ. ಬೇಸಿನ್ ಬ್ರಿಡ್ಜ್ ರೈಲ್ವೇ ಯಾರ್ಡ್ ಅನ್ನು ದಾಟಿ ಸೆಂಟ್ರಲ್ ರೈಲು ನಿಲ್ದಾಣ ತಲುಪುವ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು …
Read More »ಉಗ್ರ ಬಸಿತ್ ಅಹ್ಮದ್ ದಾರ್ ಬಗ್ಗೆ ಸುಳಿವು ನೀಡಿದವರೆಗೆ 10 ಲಕ್ಷ ರೂಪಾಯಿ ಬಹುಮಾನ:N.I.A
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿವಾಸಿ, ಉಗ್ರ ಬಸಿತ್ ಅಹ್ಮದ್ ದಾರ್ ಎಂಬಾತನ ಬಂಧನಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಬಸಿತ್ ದಾರ್ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (The Resistance Front – TRF)ನೊಂದಿಗೆ ನಂಟು ಹೊಂದಿದ್ದಾನೆ. ಈತನ ಬಂಧನಕ್ಕಾಗಿ ತನಿಖಾ ಸಂಸ್ಥೆ ಶೋಧ ಕಾರ್ಯ ನಡೆಸುತ್ತಿದೆ. ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ …
Read More »ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತ್ವರಿತ ನಿರ್ಧಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆ (ಯುಬಿಟಿ) ಶಾಸಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಭು ಅವರ ಮನವಿ ಮೇರೆ ನೋಟಿಸ್ ಜಾರಿ ಮಾಡಿದೆ. ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್‌ಸಿಪಿ …
Read More »ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಅರ್ಜಿ ಕರೆದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಹೊಸ ಆಯಪ್ ಸಿದ್ದಪಡಿಸಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಆಯಪ್ ಬಿಡುಗಡೆ ಮಾಡಿ ಅರ್ಜಿ ಸ್ವೀಕಾರ ಕಾರ್ಯ ಆರಂಭಿಸಲಾಗುತ್ತದೆ. ಆಗಸ್ಟ್ 16ರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ಅರ್ಜಿಯನ್ನೇ ಕರೆದಿಲ್ಲ ಎಂದ …
Read More »ಜೈನ ಮುನಿ ಹತ್ಯೆ ನಂದಿ ಪರ್ವತ ಆಶ್ರಮಕ್ಕೆ ಸತೀಶ್ ಜಾರಕಿಹೊಳಿ ಅವರ ಭೇಟಿ
ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ …
Read More »ಬಿಲೀವ್ ಫೌಂಡೇಶನ್ ವತಿಯಿಂದ ಹಸುವಿನ ಅಂತ್ಯಸಂಸ್ಕಾರ
ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ, ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.
Read More »ಬಾಯಿ ಚಪ್ಪರಿಸಿ ಹಾವು ತಿಂದ ಜಿಂಕೆ!, ಹೌಹಾರುವ ವಿಡಿಯೋ ಇಲ್ಲಿದೆ ನೋಡಿ
ನವದೆಹಲಿ: ಜಿಂಕೆ ಮಾಂಸಹಾರಿಯೇ..? ಜಿಂಕೆ ಕೇವಲ ಹುಲ್ಲು ತಿಂದು ಬದುಕುತ್ತದೆ ಅಲ್ಲವೇ? ಆದರೆ ಈ ವಿಡಿಯೋ ನೋಡಿದ್ರೆ ನೀವು ಹೌಹಾರುತ್ತೀರಿ. ಏಕೆಂದರೆ ಇಲ್ಲಿ ಜಿಂಕೆಯೊಂದು ಬಾಯಿ ಚಪ್ಪರಿಸಿ ಹಾವೊಂದನ್ನು ತಿನ್ನುತ್ತಿದೆ. ಹೌದು, ಇದು ಆಶ್ಚರ್ಯವಾದರೂ ನಿಜ. ಜಿಂಕೆ ಹಾವು ತಿನ್ನುತ್ತಿರುವ ವಿಡಿಯೋಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟಿಜನ್‍ಗಳು ಹೌಹಾರಿದ್ದಾರೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಡಾ.ಸಾಮ್ರಾಟ್ ಗೌಡ ತಮ್ಮ ಟ್ವಿಟರ್ ಖಾತೆಯಲ್ಲಿ …
Read More »‘ಅನ್ನಭಾಗ್ಯ’ ಯೋಜನೆ: ಇಂದು ಈ ಜಿಲ್ಲೆಯ ‘ಫಲಾನುಭವಿ’ಗಳ ಖಾತೆಗೆ ಹಣ ಜಮಾ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಬಳಿಕ, ಇಂದು ಇತರೆ ಜಿಲ್ಲೆಗಳ ಪಡಿತರ ಚೀಟಿದಾರರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಜುಲೈ.10ರಂದು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದರು. …
Read More »ಬೆಂಗಳೂರಲ್ಲಿ ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ: ಮೈಮೇಲಿದ್ದ ಚಿನ್ನ, ಫೋನ್ ಪೇಯಿಂದ ಹಣ ಎಗರಿಸಿ ಎಸ್ಕೇಪ್
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಯುವಕರ ಮನೆಗೆ ನುಗ್ಗಿದ ದರೋಡೆಕೋರರು, ಫೋನ್ ಪೇ ಮೂಲಕ 13 ಸಾವಿರ ರೂ. ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿ ಪರಿಶೀಲನೆ ನೆಪದಲ್ಲಿ ಮನೆಯೊಳಗೆ ಬಂದು, ಬಳಿಕ ಹಣ ಮತ್ತು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ವಿದ್ಯಾರಣ್ಯಪುರದ ರಾಮಚಂದ್ರಾಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಾಲ್ವರು ಯುವಕರು ವಾಸಿಸುತ್ತಿದ್ದರು. ಈ ಪೈಕಿ ಮೂವರು ಖಾಸಗಿ ಕಂಪನಿಯಲ್ಲಿ …
Read More »
Laxmi News 24×7