ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ …
Read More »ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಅಜಿತ್ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ರಾಜ್ಯಪಾಲರನ್ನು ಭೇಟಿಯಾಗಿ ಡಿಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ …
Read More »ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ.
ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ. ಜಾನುವಾರುಗಳ ಮೈ ತೊಳೆಯಲು ಹೋದಾಗ ರೈತರ ಕಣ್ಣಿಗೆ ಈ ತಲೆ ಬುರುಡೆಗಳು ಕಾಣಿಸಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಲ್ಲಿರುವ ಹಾಗೂ ಗಡಿ ಜಿಲ್ಲೆ ಬೆಳಗಾವಿಗೆ ಹೊಂದಿಕೊಂಡಿರುವ ಶಿದ್ನಳ್ಳಿ ಗ್ರಾಮದಲ್ಲಿ ತಲೆಬುರುಡೆಗಳು ಸಿಕ್ಕಿದ್ದು, ಕೂಡಲೇ ಸ್ಥಳೀಯರು ಕಾಗಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು …
Read More »ಏಕದಿನ ವಿಶ್ವಕಪ್‌ನಿಂದ ಹೊರ ಬಿದ್ದ ವೆಸ್ಟ್ ಇಂಡೀಸ್
ಜಿಂಬಾಬ್ವೆ: ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಈ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ವಿಶ್ವಕಪ್ ಅರ್ಹತಾ ಸುತ್ತಿನ ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸ್ಕಾಟ್ಲೆಂಡ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸ್ಕಾಟ್‌ಲೆಂಡ್‌ಗೆ ನೀಡಿದ್ದ 182 ರನ್‌ಗಳ ಗುರಿಯನ್ನು ಇನ್ನೂ 39 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು. ವಿಶ್ವಕಪ್‌ಗೆ ಅರ್ಹತೆ ಪಡೆಯಲು …
Read More »ಈಜಲು ಹೋದ ಇಬ್ಬರು ಬಾಲಕರು ಭೀಮಾ ನದಿಯಲ್ಲಿ ಮುಳುಗಿ ಸಾವು
ಕಲಬುರಗಿ: ಈಜಲು ಹೋದ ಬಾಲಕರಿಬ್ಬರು ಭೀಮಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜೇವರ್ಗಿ ತಾಲೂಕಿನ ಕೋನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಗ್ರಾಮದ ಹೊರವಲಯದಲ್ಲಿರುವ ಭೀಮಾ ನದಿಗೆ ಈಜಲು ಬಾಲಕರಿಬ್ಬರು ತೆರಳಿದ್ದರು. ಆದರೆ ಕಾಲು ಜಾರಿ ಓರ್ವ ನೀರು ಪಾಲಾಗುವಾಗ ಇನ್ನೋರ್ವನನ್ನು ರಕ್ಷಣೆಗೆ ಇಳಿದಿದ್ದ. ಆತನೂ ಕೂಡ ಮೃತಪಟ್ಟಿದ್ದಾನೆ. ದೇವಿಂದ್ರ ಹೊಸಮನಿ (17) ಹಾಗೂ ರಾಮು ದೊಡ್ಡಮನಿ(13) ಮೃತ ದುರ್ದೈವಿಗಳು. ನೀರಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯವನ್ನು ಗ್ರಾಮಸ್ಥರು, ಪೊಲೀಸರಿಗೆ …
Read More »ಬಿಎಸ್ವೈಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ನಾಳೆ ಬಿಜೆಪಿ ಶಾಸಕಾಂಗ ಸಭೆ ಇಲ್ಲ. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ಹೋಗಲಿದ್ದು, ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ವಿಪಕ್ಷ ನಾಯಕ ಹೆಸರು ನಾಳೆ ದೆಹಲಿಯಲ್ಲೇ ಘೋಷಣೆಯಾಗಲಿದೆ. ಆ ಮೂಲಕ ದೆಹಲಿಯಲ್ಲೇ ರಾಜ್ಯ ವಿಧಾನಸಭೆ ವಿಪಕ್ಷ ನಾಯಕರ ಗೊಂದಲಕ್ಕೆ ತೆರೆ ಬೀಳಲಿದೆ. ಹೈಕಮಾಂಡ್ ಬುಲಾವ್ ಹಿನ್ನಲೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಅಲ್ಲೇ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ನಾಳೆಯೇ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ. ವಿಪ್ ಆಯ್ಕೆಯೂ ಕೂಡ ನಾಳೆ ಆಗಲಿದೆ. …
Read More »ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಮೂರು ಈಡೇರಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ನಾವು ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನೂ ಆರಂಭಿಸುತ್ತಿದ್ದೇವೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ನಮ್ಮ ಯೋಜನೆ ಜಾರಿಯಾಗಲ್ಲ ಎಂಬ ಸಂಭ್ರಮದಲ್ಲಿದ್ದವು. ಅವರಿಗೆ ನಿರಾಸೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಆರಂಭವಾಗಲಿದೆ. ಗೃಹಜ್ಯೋತಿ ಯೋಜನೆಯಡಿ ಈ ತಿಂಗಳಿನಿಂದ ನಮ್ಮ ಸರ್ಕಾರ 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ …
Read More »ಬಜೆಟ್ ಅಧಿವೇಶನ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ
ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ …
Read More »ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ,ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ
ರಾಯಚೂರು: ಜಿಲ್ಲೆಯ ಅಪ್ಪನದೊಡ್ಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಮಕ್ಕಳಿಗೆ ನೀಡಲು ತಯಾರಾದ ಬಿಸಿಯೂಟದ ಉಪ್ಪಿಟ್ಟಿಗೆ ಹಲ್ಲಿಯೊಂದು ಬಿದ್ದಿದ್ದು, ಮಕ್ಕಳು ಈ ಉಪ್ಪಿಟ್ಟನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ. ಈ ಘಟನೆಗೆ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಇನ್ನು ಘಟನೆ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿದ್ದಾರೆ. ಅಸ್ವಸ್ಥಗೊಂಡ ಮಕ್ಕಳಿಗೆ ಶಾಲೆ ಬಳಿಯೇ ಆರೋಗ್ಯ ತಪಾಸಣೆ ಮಾಡಿಸಿ 30 ಮಕ್ಕಳನ್ನು ಯಪಲದಿನ್ನಿ …
Read More »ಗೃಹಜ್ಯೋತಿ ಯೋಜನೆ ಆರಂಭ ಘೋಷಿಸಿದ ಸಿಎಂ: ಮಹಾರಾಷ್ಟ್ರ ದುರಂತಕ್ಕೆ ತೀವ್ರ ಆತಂಕ
ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮದದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ವಿರೋಧ …
Read More »