Breaking News

ರಾಷ್ಟ್ರೀಯ

ಬಿಎಸ್​ವೈ ಭೇಟಿಯಾದ ರೇಣುಕಾಚಾರ್ಯ; ಟೀಕಾಪ್ರಹಾರ ಮುಂದುವರಿಸಿದ ಮಾಜಿ ಶಾಸಕ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕವೂ ಬಿಜೆಪಿ ನಾಯಕರ ವಿರುದ್ದ ತಮ್ಮ ಟೀಕಾಪ್ರಹಾರ ಮುಂದುರಿಸಿರುವ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಇಳಿಸಿದರು ಎಂದು ವಾಗ್ದಾಳಿ ನಡೆಸಿದರು.   ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾತನಾಡಿದ ಅವರು, ಬಿಎಸ್ ವೈ ಪಾದಯಾತ್ರೆ ಪ್ರತಿಫಲವಾಗಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದೆ. ಅವರು ಬಿಜೆಪಿಯ ಅಗ್ರಮಾನ್ಯ ನಾಯಕ. ಅಂತಹವರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಇಳಿಸಿದ್ರು. ಕಾಂಗ್ರೆಸ್ – …

Read More »

ಪ್ರತಿ ತಿಂಗಳು ಕಂದಾಯ ಪ್ರಗತಿ ಪರಿಶೀಲನೆ, ಜನಪರ ಯೋಜನೆಗಳಿಗೆ ಆದ್ಯತೆ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದಕ್ಕೆ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ …

Read More »

ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ

ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ. ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ …

Read More »

ಅಸಭ್ಯವಾಗಿ ವರ್ತಿಸಿದ ಮೂವರು ಮಂಗಳಮುಖಿಯರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಾಜಧಾನಿಯಲ್ಲಿ ಮಂಗಳಮುಖಿಯರ ಆಟಾಟೋಪ ಹೆಚ್ಚಾಗುತ್ತಿದೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತಿಕಾ, …

Read More »

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ …

Read More »

ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ನವದೆಹಲಿ/ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿಗಳನ್ನು ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಪೆನ್ನಾರ್ ಜಲಾನಯನ ನೀರು ಶುದ್ಧೀಕರಣ ಯೋಜನೆ ಮತ್ತು ಕರ್ನಾಟಕದ ವಿರುದ್ಧ ತಮಿಳುನಾಡು ರಾಜ್ಯ ಎತ್ತಿರುವ ಜಲ ವಿವಾದಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು. ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧಿಕರಣ …

Read More »

ಹೊಸಪೇಟೆ ಸಮೀಪ ಭೀಕರ ರಸ್ತೆ ಅಪಘಾತ: 7 ಜನ ಸ್ಥಳದಲ್ಲೇ ಸಾವು

ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಇಂದು ನಡೆದಿದೆ. ಮೃತರಲ್ಲಿ ಖಾಸಿಂ, ಯಾಸ್ಮಿನ್, ಉಮೇಶ್, ಜಹೀರಾ, ಮತ್ತು ಶ್ಯಾಮ, ಸೇರಿದಂತೆ ಒಟ್ಟು ಐವರ ಹೆಸರು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸೇರಿದಂತೆ ಸ್ಥಳೀಯರು ಕಂದಕದಲ್ಲಿ ಬಿದ್ದ ಎರಡು ಆಟೋಗಳನ್ನು ಮೇಲೆತ್ತಿ ಗಾಯಾಳುಗಳನ್ನು ಹೊಸಪೇಟೆ …

Read More »

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ …

Read More »

ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ3 ವರೆಗೆ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 3ರ ವರೆಗೆ ವರ್ಗಾವಣೆ ಅವಧಿಯನ್ನು ಸರ್ಕಾರ ವಿಸ್ತರಿಸಿದೆ. 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್​ 15ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ …

Read More »

ಪಂಢರಪುರ್ ವಿಠ್ಠಲನ ದರ್ಶನ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಕುಟುಂಬ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪತ್ನಿಸಮೇತ ಪಂಢರಪುರ್ ವಿಠ್ಠಲನ ದರ್ಶನ ಪಡೆದು ಪೂಜೆ ನೆರವೇರಿಸಿದರು ಆಷಾಢಿ ಏಕಾದಶಿಯಂದು ಪಂಢರಪುರದಲ್ಲಿ ವೈಷ್ಣವ ಜಾತ್ರೆ ನಡೆಯುತ್ತದೆ. ಈ ಆಷಾಢಿ ವಾರದ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪತ್ನಿ ಲತಾ ಶಿಂಧೆ ಅವರು ಶ್ರೀ ವಿಠ್ಠಲ-ರುಕ್ಮಿಣಿಯವರ ಅಧಿಕೃತ ಮಹಾಪೂಜೆಯನ್ನು ನೆರವೇರಿಸಿದರು ಈ ವರ್ಷ ಅಹಮದ್ನಗರ ಜಿಲ್ಲೆಯ ನೆವಾಸಾ ತಾಲೂಕಿನ ವಕ್ಡಿ ಗ್ರಾಮದ ರೈತ ದಂಪತಿಗಳಾದ ಬಾವುಸಾಹೇಬ್ ಮೋಹಿನಿರಾಜ್ ಕಾಳೆ ಮತ್ತು …

Read More »