Breaking News

ರಾಷ್ಟ್ರೀಯ

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ’: ಬೆಳಗಾವಿ ಉತ್ತರ ವಲಯ ನೂತನ ಐಜಿಪಿ ವಿಕಾಸ್‌ ಕುಮಾರ್ ಅಧಿಕಾರ ಸ್ವೀಕಾರ

ಬೆಳಗಾವಿ: ಮರಳು ಮಾಫಿಯಾ ಸೇರಿದಂತೆ ‌ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣಕ್ಕೆ ಕ್ರಮ ವಹಿಸುವುದು ಸೇರಿದಂತೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ‌ನೀಡಲಾಗುವುದು ಎಂದು ಉತ್ತರ ವಲಯ ನೂತನ ಐಜಿಪಿ ವಿಕಾಶಕುಮಾರ್​ ವಿಕಾಸ್‌ ಹೇಳಿದರು. ಬೆಳಗಾವಿಯ ಐಜಿಪಿ ಕಚೇರಿಯಲ್ಲಿ ಇಂದು ಉತ್ತರ ವಲಯ ನೂತನ ಐಜಿಪಿ ಆಗಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ಐಜಿಪಿಯನ್ನು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ಜಿಲ್ಲಾ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. …

Read More »

17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.   ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಹೆಂಡತಿ ಮಗನ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಾರವಾರ (ಉತ್ತರ ಕನ್ನಡ) : ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ ಹಾಗೂ ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವಾ ಮೂಲದ ಶ್ಯಾಮ್​ ಪಾಟೀಲ್ (45), ಜ್ಯೋತಿ (38) ಇವರ 12 ವರ್ಷದ ಮಗ ಮೃತಪಟ್ಟವರಾಗಿದ್ದಾರೆ. ಜ್ಯೋತಿ ಹಾಗೂ ಅವರ ಮಗನ ಮೃತದೇಹ ಕಾರವಾರದ ದೇವಭಾಗ ಬೀಚ್ ಬಳಿ ಪತ್ತೆಯಾಗಿವೆ. ಇನ್ನು ಶ್ಯಾಮ್​ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ …

Read More »

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಂಜೇಶ್ವರ ನಿವಾಸಿ ಮೊಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್‌ ಅಶ್ರಫ್‌ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. …

Read More »

ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.

ನವದೆಹಲಿ: ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಕ್ವಿಂಟಲ್​ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (Fair and Remunerative Price – FRP)ಯನ್ನು 10 ರೂಪಾಯಿ ಹೆಚ್ಚಳ ಮಾಡಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು 315 ರೂ.ಗೆ ನಿಗದಿ ಮಾಡಿದೆ. ಇದಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …

Read More »

ತ್ರಿಪುರದಲ್ಲಿ ರಥಕ್ಕೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ 7 ಭಕ್ತರು ಸಾವು

ಅಗರ್ತಲಾ (ತ್ರಿಪುರ): ತ್ರಿಪುರದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ ರಥಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಕುಮಾರ್‌ಘಾಟ್‌ನಲ್ಲಿ ರಥಕ್ಕೆ ಹೈಟೆನ್ಶನ್ ವೈರ್‌ ತಗುಲಿ ಏಳು ಜನ ಭಕ್ತರು ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಇದರ ನಡುವೆಯೇ ರಥಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಇಂದು ಸಂಜೆ 4.30ರ ಸುಮಾರಿಗೆ ಭಕ್ತರು ರಥ ಎಳೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. …

Read More »

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು ಪ್ರಾರ್ಥನೆ ಮಾಡಿದರು. ಇಲ್ಲಿಯತನಕ ಸಮರ್ಪಕ ಮಳೆಯಾಗದೇ …

Read More »

ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಡಿಪ್ಲೊಮಾ ಇಂಜಿನಿಯರಿಂಗ್​ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಾಮೀಣ ಇಂಧನ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಹುದ್ದೆ ಕಾರ್ಯ ನಿರ್ವಹಣೆ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷಣೆಯ ತರಗತಿಗಳನ್ನು ತೆಗೆದುಕೊಳ್ಳುವ ಜ್ಞಾನ ಹೊಂದಿರಬೇಕು. …

Read More »

ಅಕ್ಕಿ, ಮನೆ, ಸಿಲಿಂಡರ್ ಕೊಡಿ ಸಾಕು ಎಂದ ಮಹಿಳೆಯರು..

ಗಂಗಾವತಿ (ಕೊಪ್ಪಳ) : ಬಸ್ಸಿನಲ್ಲಿ ಹೆಣ್ಮಕ್ಕಳು ಫ್ರಿಯಾಗಿ ಓಡಾಡಾಕ ಶುರುವಾದಾಗಿನಿಂದ ಒಂದೂ ಬಸ್ ಖಾಲಿ ಇರವಲ್ವು. ಮನಿ ಬಿಟ್ಟು ಬಂದು ಗುಡಿಗೆ ಹೋಗಣಾಂದ್ರ ಹೈರಾಣ ಆಗಿವಿ. ಈ ಫ್ರೀ ಬಸ್ ಬಿಟ್ಟು ಸರ್ಕಾರದೋರು ಜನರಿಗೆ ಬೇಕಾದ ಅಕ್ಕಿ, ಸಿಲಿಂಡರ್, ಮನೆ ಕೊಡ್ಲಿ’.. ಹೀಗೆಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣಕ್ಕೆ ಅವಕಾಶ ಇರುವ ಶಕ್ತಿ ಯೋಜನೆಯ ಬಗ್ಗೆ ಕೆಲ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಆಗಿದ್ದರಿಂದ ಗಂಗಾವತಿ …

Read More »