ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ. 3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …
Read More »ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ ವಿಕಾಸ್ ಕುಮಾರ್ ವಿಕಾಶ್- …
Read More »ವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.
Read More »ಗ್ರಾಮ ಒನ್ನಲ್ಲಿ ಯಾರಾದರೂ ಲಂಚ ಕೇಳಿದರೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಮನಗರ: ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಸಮಸ್ಯೆಗಳನ್ನು ಪರಿಹರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು …
Read More »ಮಧ್ಯಪ್ರದೇಶದಲ್ಲೂ ಪೇಸಿಎಂ ಪೋಸ್ಟರ್ ವಾರ್
ಭೋಪಾಲ್ (ಮಧ್ಯ ಪ್ರದೇಶ) : ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇದೀಗ ಪೋಸ್ಟರ್ ವಾರ್ನಿಂದಾಗಿ ರಾಜ್ಯದ ರಾಜಕೀಯ ಮತ್ತಷ್ಟು ರಂಗೇರುತ್ತಿದೆ. ಮಾಜಿ ಸಿಎಂ ಕಮಲ್ ನಾಥ್ ಮತ್ತು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಅಲ್ಲಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ, ಈಗ ಮತ್ತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ …
Read More »ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು
ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು. ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.
Read More »ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …
Read More »ಜುಲೈ 2 ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ: ದೀಲಿಪ ಕುರಂದವಾಡೆ
ಜುಲೈ 2 ರಂದು ಬೆಳಗಾವಿ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸಲಾಗುವದು ಎಂದು ಜಿಲ್ಲಾ ಅದ್ಯಕ್ಷ ದೀಲಿಪ ಕುರಂದವಾಡೆ ಹೇಳಿದರು. ಬೆಳಗಾವಿ ನಗರದಲ್ಲಿ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಳಗಾವಿ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸುವ ಕುರಿತು ರೂಪ ರೆಷೆಗಳಂತೆ ಜಿಲ್ಲಾ ಮಟ್ಟದ …
Read More »ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು: ಸಿಪಿಐ ಬಡಿಗೇರ್
ದೃಢಸಂಕಲ್ಪ, ಪರಿಶ್ರಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಿ ಯಶಸ್ವಿಗೊಳಿಸುವಂತೆ ಸಾರಿಗೆ ಇಲಾಖೆಯ ಸಿಪಿಐ ವಿನಾಯಕ ಬಡಿಗೇರ್ ಮನವಿ ಮಾಡಿದರು. ಬೆಳಗಾವಿಯ ಕಾಳಿ ಅಮರಾಯಿಯಲ್ಲಿರುವ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ವತಿಯಿಂದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಿಪಿಐ ಬಡಿಗೇರ್ ಮಾತನಾಡಿ, ಯಶಸ್ಸಿನ ಶಿಖರವೇರಿದರೂ ವಿದ್ಯಾರ್ಥಿಯು …
Read More »ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಕರಾವಳಿಯಲ್ಲಿ ಮುಂದಿನ ಐದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 26ರಿಂದ ಜೂ 30ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. …
Read More »