ನವದೆಹಲಿ: ಶನಿವಾರ ರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನವದೆಹಲಿಯ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗೆ ಮಳೆ ನೀರು ನುಗ್ಗಿದೆ. ಈ ವೇಳೆ ಮಹಿಳೆಯೊಬ್ಬರು ವಿದ್ಯುತ್ ಕಂಬವನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಸಾಕ್ಷಿ ಅಹುಜಾ ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಗ್ಗೆ 5.30 ಕ್ಕೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ನೀರಿನಿಂದ ತುಂಬಿದ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯಲು …
Read More »ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ಉಪವಾಸ ಕುಳಿತ ರೈತರು
ದೊಡ್ಡಬಳ್ಳಾಪುರ : ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ 3 ದಿನಗಳಿಂದ ರೈತರಿಬ್ಬರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹವನ್ನ ನಡೆಸುತ್ತಿದ್ದರು. ಉಪವಾಸ ನಿರತ ರೈತರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕುಡಿಯುವ ನೀರು ಸರಬರಾಜು ಮಾಡುವ ಭರವಸೆ ನೀಡಿದರು. ಸಚಿವರ ಭರವಸೆಯ ಮೇರೆಗೆ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ. ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ವಿಷ ಹರಿಸಿದ …
Read More »ವ್ಯಕ್ತಿಯ ಕತ್ತು ಸೀಳಿ ರಕ್ತ ಕುಡಿದು ಬೀಭತ್ಸ ಕೃತ್ಯ!
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಎಂಬಾತ ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಮೇಲೆ ಹಲ್ಲೆ ಮಾಡಿ, ರಕ್ತ ಕುಡಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ …
Read More »ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ
ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ (ಧೀರಜ್) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ಬೈಕ್ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್: ಊಟಿಗೆ ಸೋಲೋ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್ ಕುಮಾರ್ …
Read More »ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …
Read More »ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು.
ಬಿಜೆಪಿ ತಳಪಾಯವೇ ಕುಸಿದು ಹೋಗುತ್ತಿದೆ ಅದನ್ನು ಗಟ್ಟಿ ಮಾಡೋ ಕೆಲಸ ಆಗ್ತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ನಗರದಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರತ್ತೆ . ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸತ್ತೆ ಎಂದರು. ನಾನು ಹಿಂದೆ ಹೇಳಿರೋದು ಎಲ್ಲವೂ ನಿಜ ಆಗ್ತಿದೆ ಎಂದ ಕಟೀಲು. ಬಿಜೆಪಿ ಸೋಲಿಗೆ ಕಾರಣ ಯಾರೂ …
Read More »ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು: ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಸಿದ್ಧಪಡಿಸಲಾಗಿರುವ ಆಯಪ್ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತೋರಿಸಿ ನಂತರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಗಸ್ಟ್ 17ರ ನಂತರದಿಂದ ಫಲನಾಭವಿಗಳ ಹಣ …
Read More »ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ.. ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. 243 ವಾರ್ಡಗಳಿಗೂ ಚುನಾವಣೆ ಮಾಡುತ್ತೇವೆ. ನಾವು ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಸವನಗುಡಿ, ಬುಲ್ ಟೆಂಪಲ್ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಬಿಬಿಎಂಪಿ ಚುನಾವಣೆ ಆಗಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮೇಯರ್ ಇಟ್ಟುಕೊಂಡೇ ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು. ಚುನಾವಣೆ ಬೇಗ …
Read More »ಲಿಂಗಾಯತ ಒಳಪಂಗಡಗಳು ಒಟ್ಟಾಗಿ ಹೋದ್ರೆ ಮಾತ್ರ ಭವಿಷ್ಯ: ಶಾಸಕ ಲಕ್ಷ್ಮಣ ಸವದಿ
ಬೆಳಗಾವಿ: ಲಿಂಗಾಯತ ಒಳಪಂಗಡಗಳನ್ನು ಇಟ್ಟುಕೊಂಡು ನಾವು ಮುಂದುವರಿದರೆ ಮುಂದಿನ ದಿನಗಳಲ್ಲಿ ನಮಗೆಲ್ಲಾ ಒಳ್ಳೆಯ ದಿನಗಳಿವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿ ವಸತಿ ನಿಲಯ ಆವರಣದಲ್ಲಿ ಶನಿವಾರ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕ ಆಯೋಜಿಸಿದ್ದ ವಿಧಾನಸಭೆಗೆ ಆಯ್ಕೆಯಾದ ಶಾಸಕ, ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ವೇದಿಕೆ ಮೇಲೆ ಇದ್ದಾಗ ಮಾತ್ರ ನಾವೆಲ್ಲಾ ಒಂದು ಎನ್ನುವ ಚಿಂತನೆ …
Read More »KSRTC’, ‘BMTC’ ಬಸ್ ಗಳಿಗೆ ಮುಗಿಬಿದ್ದ ಮಹಿಳೆಯರು : ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ ಪುರುಷರು
ಬೆಂಗಳೂರು : ಉಚಿತ ಬಸ್ ಪ್ರಯಾಣದ ಹಿನ್ನೆಲೆ ‘KSRTC’, ‘BMTC’ ಬಸ್ ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಈ ಹಿನ್ನೆಲೆ ಸರ್ಕಾರಿ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ. ಇದರಿಂದ ಬೇಸತ್ತ ಪುರುಷುರು ಬೆಂಗಳೂರಿನಲ್ಲಿ ವೋಲ್ವೋ ಬಸ್ ಗಳಿಗೆ ‘ಶಕ್ತಿ’ ತುಂಬಿದ್ದಾರೆ. ಹೌದು, ‘KSRTC’, ‘BMTC’ ಬಸ್ ಗಳು ರಶ್ ಇರುವ ಕಾರಣ ಪುರುಷರು ವೋಲ್ವೋ ಬಸ್ ಗೆ ಮುಗಿಬಿದ್ದಿದ್ದಾರೆ. ಕಳೆದ ಒಂದು ವಾರದಲ್ಲಿ ವೋಲ್ವೋ ಮತ್ತು ವಜ್ರ ಬಸ್ಗಳಲ್ಲಿ ಪ್ರಯಾಣಿಕರ …
Read More »