ತುಮಕೂರು: ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕೊಟ್ಟು, ಜನರಿಗೆ ಟೋಪಿ ಹಾಕಿ, ದ್ರೋಹ ಮಾಡಿ ಅಧಿಕಾರಕ್ಕೆ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿ ಈಗ ಹಲವು ಷರತ್ತು ಹಾಕಿ ಮೋಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ಶುಕ್ರವಾರ ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದ್ರೋಹ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಮೋಸದ ವಿರುದ್ಧ ಸದನದ ಹೊರಗೆ ಒಳಗೆ ನಾವು ಹೋರಾಟ ಮಾಡುತ್ತೇವೆ ಎಂದರು. …
Read More »ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ: ಪ್ರಮೋದ್ ಮುತಾಲಿಕ್
ಹಾಸನ: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಒತ್ತಾಯ ಮಾಡುವ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮಸೇನೆಯ ರಾಜ್ಯಕಾರಣಿ ಸಭೆಯ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಪಠ್ಯ ಪುಸ್ತಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಕೆಲ ವಿಷಯಗಳನ್ನು ವಾಪಸ್ ಪಡೆಯುತ್ತೇವೆ ಅಂದಿದ್ದಾರೆ. ಭಗತ್ ಸಿಂಗ್, ಸಾವರ್ಕರ್ ಸೇರಿದಂತೆ ಮೂರು ಪಾಠ ವಾಪಾಸ್ ತೆಗೆದುಕೊಳ್ಳುತ್ತೇವೆ ಅಂದ್ದಿದ್ದಾರೆ. ಸಾವರ್ಕರ್, ಭಗತ್ …
Read More »ಗಗನಕ್ಕೇರಿದ ಕೋಳಿ ಮಾಂಸ ಬೆಲೆ, ಕೊಳ್ಳಲು ಹಿಂದೇಟು ಹಾಕ್ತಿದ್ದಾರೆ ಗ್ರಾಹಕರು, ಕಾರಣ..?
ದಾವಣಗೆರೆ: ದಾವಣಗೆರೆಯಲ್ಲಿ ಮಾಂಸ ಪ್ರಿಯರೇ ಹೆಚ್ಚು, ಅದರಲ್ಲೂ ಕೋಳಿ ಮಾಂಸವನ್ನು ಸೇವಿಸುವವರ ಸಂಖ್ಯೆ ಗಣನೀಯಾವಾಗಿದೆ. ಆದರೆ ಕೋಳಿ ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದಾವಣಗೆರೆಯ 180ಕ್ಕೂ ಹೆಚ್ಚು ಚಿಕನ್ ಅಂಗಡಿಗಳಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು, ಗ್ರಾಹಕರು ಕೋಳಿ ಮಾಂಸ ಕೊಳ್ಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಬಿಸಿಲಿನ ತಾಪ ಹೆಚ್ಚಿದ್ದರಿಂದ ಕೋಳಿ ಸಾಕಣೆಗೆ ರೈತರಿಗೆ ಸವಾಲು ಎದುರಾಗಿದ್ದರಿಂದ ಕೋಳಿ ಸಾಕಣೆ ಕೇಂದ್ರಗಳಲ್ಲಿ ಕೋಳಿಗಳ ಸಂಖ್ಯೆ ಇಳಿಮುಖವಾಗಿದೆ. ಇದರಿಂದ …
Read More »ಗಾಂಜಾ, ಮದ್ಯಸೇವನೆ ಚಟ.. 8 ಜನರನ್ನು ಹತ್ಯೆ ಮಾಡಿದ್ದ ಸೈಕೋ ಕಿಲ್ಲರ್ ಬಂಧನ : ನಿಟ್ಟುಸಿರು ಬಿಟ್ಟ ಜನ
ಹೈದರಾಬಾದ್ (ತೆಲಂಗಾಣ): ಹಣಕ್ಕಾಗಿ ಒಂದೇ ವಾರದಲ್ಲಿ ಮೂವರನ್ನು ಕೊಲೆ ಮಾಡಿದ್ದ ಸೈಕೋ ಕಿಲ್ಲರ್ನನ್ನು ಹೈದರಾಬಾದ್ ಉಪನಗರ ಮೈಲಾರ್‌ದೇವಪಲ್ಲಿ ಪೊಲೀಸರು ಬಂಧಿಸಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದ ಮಾಣಿಕ್ಯಮ್ಮ ಕಾಲೋನಿಯ ಬಗರಿ ಪ್ರವೀಣ್ ಬಂಧಿತ ಆರೋಪಿ. ಗಾಂಜಾ ಮತ್ತು ಮದ್ಯದ ಚಟಕ್ಕೆ ದಾಸನಾಗಿದ್ದ ಈತ ಅವುಗಳನ್ನು ಕೊಳ್ಳಲು ಹಣಕ್ಕಾಗಿ ಜನರನ್ನು ಹತ್ಯೆ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಡಿಸಿಪಿ ಜಗದೀಶ್ವರ್ ಮಾಹಿತಿ ನೀಡಿದ್ದು, ಈತ ಇತರ ಪ್ರಕರಣಗಳಲ್ಲಿ ಶಾಮೀಲಾಗಿರುವ ಹಳೆಯ …
Read More »ಈಗಿನ ಸಚಿವ, ಶಾಸಕರು ಕಮಿಷನ್ ಕೇಳಿದರೆ ಅದನ್ನೂ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ
ಬೆಂಗಳೂರು: ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ …
Read More »ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು …
Read More »ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ
ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ. ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ …
Read More »‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ …
Read More »ಮಂತ್ರಾಲಯದಿಂದ ವಾಪಸಾಗುತ್ತಿದ್ದ ಖಾಸಗಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಲಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಕುರುಬರಹಳ್ಳಿಯ ಚಾಲಕರ ಸಂಘದವರು ಖಾಸಗಿ ಬಸ್‌ನಲ್ಲಿ ಆಗಮಿಸಿದ್ದರು. ಇಂದು ಗುರುರಾಯರ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದರು. ನಂದಿಹಾಳ ಗ್ರಾಮದಲ್ಲಿ …
Read More »670 ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್ ಅಸಿಸ್ಟಂಟ್, ಎಸ್ಡಿಎ ಮತ್ತು ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. …
Read More »