ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ …
Read More »ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ
ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …
Read More »ಬಿಟ್ ಕಾಯಿನ್ ಹಗರಣ: ತನಿಖೆಗೆ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದ ಎಸ್‌ಐಟಿ ತಂಡ ರಚನೆ
ಬೆಂಗಳೂರು: ಇಡೀ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರ ಮೊದಲೇ ತಿಳಿಸಿದಂತೆ ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ …
Read More »ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ
ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …
Read More »ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ
ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, …
Read More »ಈ ವರ್ಷದ ಬಜೆಟ್ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ …
Read More »ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಸಿಗದಿರುವುದಕ್ಕೆ ಅಜಿತ್ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಅಜಿತ್ ಪವಾರ್ ರಾಜ್ಯಪಾಲರನ್ನು ಭೇಟಿಯಾಗಿ ಡಿಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ …
Read More »ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ.
ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಹರಿಯುವ ದೂಧಗಂಗಾ ನದಿಯ ಪಕ್ಕದಲ್ಲಿ ನಾಲ್ಕು ಮಾನವ ತಲೆಬುರುಡೆಗಳು ದೊರೆತಿವೆ. ಜಾನುವಾರುಗಳ ಮೈ ತೊಳೆಯಲು ಹೋದಾಗ ರೈತರ ಕಣ್ಣಿಗೆ ಈ ತಲೆ ಬುರುಡೆಗಳು ಕಾಣಿಸಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನಲ್ಲಿರುವ ಹಾಗೂ ಗಡಿ ಜಿಲ್ಲೆ ಬೆಳಗಾವಿಗೆ ಹೊಂದಿಕೊಂಡಿರುವ ಶಿದ್ನಳ್ಳಿ ಗ್ರಾಮದಲ್ಲಿ ತಲೆಬುರುಡೆಗಳು ಸಿಕ್ಕಿದ್ದು, ಕೂಡಲೇ ಸ್ಥಳೀಯರು ಕಾಗಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು …
Read More »ಏಕದಿನ ವಿಶ್ವಕಪ್‌ನಿಂದ ಹೊರ ಬಿದ್ದ ವೆಸ್ಟ್ ಇಂಡೀಸ್
ಜಿಂಬಾಬ್ವೆ: ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಈ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಜಿಂಬಾಬ್ವೆಯಲ್ಲಿ ನಡೆಯುತ್ತಿರುವ ವಿಶ್ವಕಪ್ ಅರ್ಹತಾ ಸುತ್ತಿನ ಮಹತ್ವದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸ್ಕಾಟ್ಲೆಂಡ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸ್ಕಾಟ್‌ಲೆಂಡ್‌ಗೆ ನೀಡಿದ್ದ 182 ರನ್‌ಗಳ ಗುರಿಯನ್ನು ಇನ್ನೂ 39 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು. ವಿಶ್ವಕಪ್‌ಗೆ ಅರ್ಹತೆ ಪಡೆಯಲು …
Read More »ಈಜಲು ಹೋದ ಇಬ್ಬರು ಬಾಲಕರು ಭೀಮಾ ನದಿಯಲ್ಲಿ ಮುಳುಗಿ ಸಾವು
ಕಲಬುರಗಿ: ಈಜಲು ಹೋದ ಬಾಲಕರಿಬ್ಬರು ಭೀಮಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜೇವರ್ಗಿ ತಾಲೂಕಿನ ಕೋನಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಗ್ರಾಮದ ಹೊರವಲಯದಲ್ಲಿರುವ ಭೀಮಾ ನದಿಗೆ ಈಜಲು ಬಾಲಕರಿಬ್ಬರು ತೆರಳಿದ್ದರು. ಆದರೆ ಕಾಲು ಜಾರಿ ಓರ್ವ ನೀರು ಪಾಲಾಗುವಾಗ ಇನ್ನೋರ್ವನನ್ನು ರಕ್ಷಣೆಗೆ ಇಳಿದಿದ್ದ. ಆತನೂ ಕೂಡ ಮೃತಪಟ್ಟಿದ್ದಾನೆ. ದೇವಿಂದ್ರ ಹೊಸಮನಿ (17) ಹಾಗೂ ರಾಮು ದೊಡ್ಡಮನಿ(13) ಮೃತ ದುರ್ದೈವಿಗಳು. ನೀರಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯವನ್ನು ಗ್ರಾಮಸ್ಥರು, ಪೊಲೀಸರಿಗೆ …
Read More »
Laxmi News 24×7